ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Abhijit Bose Resign : ವಾಟ್ಸಾಪ್‌ ಇಂಡಿಯಾ ಮುಖ್ಯಸ್ಥ, ಮೆಟಾ ಇಂಡಿಯಾ ನಿರ್ದೇಶಕರ ರಾಜೀನಾಮೆ

|
Google Oneindia Kannada News

ವಾಟ್ಸಾಪ್‌ ಇಂಡಿಯಾ ಮುಖ್ಯಸ್ಥ ಅಭಿಜಿತ್ ಬೋಸ್ ಮತ್ತು ಮೆಟಾ ಇಂಡಿಯಾ ನಿರ್ದೇಶಕ ರಾಜೀವ್ ಅಗರ್ವಾಲ್ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ವಾಟ್ಸಾಪ್‌ ಇಂಡಿಯಾ ಸಾರ್ವಜನಿಕ ನೀತಿಯ ನಿರ್ದೇಶಕ ಶಿವನಾಥ್ ತುಕ್ರಾಲ್ ಅವರನ್ನು ಈಗ ಭಾರತದ ಎಲ್ಲಾ ಮೆಟಾ ಬ್ರಾಂಡ್‌ಗಳಿಗೆ ಸಾರ್ವಜನಿಕ ನೀತಿಯ ನಿರ್ದೇಶಕರಾಗಿ ನೇಮಿಸಲಾಗಿದೆ.

"ಭಾರತದಲ್ಲಿ ನಮ್ಮ ಮೊದಲ ವಾಟ್ಸಾಪ್‌ ಮುಖ್ಯಸ್ಥರಾಗಿ ಅಭಿಜಿತ್ ಬೋಸ್ ಅವರ ಅಪಾರ ಕೊಡುಗೆಗಳಿಗಾಗಿ ನಾನು ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಅವರ ಉದ್ಯಮಶೀಲತೆ ನಮ್ಮ ತಂಡಕ್ಕೆ ಹೊಸ ಸೇವೆಗಳನ್ನು ನೀಡಲು ಸಹಾಯ ಮಾಡಿದೆ. ಅದು ಲಕ್ಷಾಂತರ ಜನರು ಮತ್ತು ವ್ಯವಹಾರಗಳಿಗೆ ಪ್ರಯೋಜನವನ್ನು ನೀಡಿದೆ. ಭಾರತದ ವಾಟ್ಸಾಪ್‌ಗಾಗಿ ಇನ್ನೂ ಹೆಚ್ಚಿನದನ್ನು ಮಾಡಲು ಮತ್ತು ಭಾರತದ ಡಿಜಿಟಲ್ ರೂಪಾಂತರವನ್ನು ಮುಂದುವರಿಸಲು ಸಹಾಯ ಮಾಡಲು ನಾವು ಉತ್ಸುಕರಾಗಿದ್ದೇವೆ'' ಎಂದು ವಾಟ್ಸಾಪ್ ಮುಖ್ಯಸ್ಥ ವಿಲ್ ಕ್ಯಾಥ್‌ಕಾರ್ಟ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮೆಟಾ ಸಂಸ್ಥೆಯಿಂದ ವಜಾಗೊಂಡ ಉದ್ಯೋಗಿಗಳಿಗೆ 4 ತಿಂಗಳ ವೇತನ ಮೆಟಾ ಸಂಸ್ಥೆಯಿಂದ ವಜಾಗೊಂಡ ಉದ್ಯೋಗಿಗಳಿಗೆ 4 ತಿಂಗಳ ವೇತನ

ಇನ್ನೂ ಮತ್ತೊಂದು ಉನ್ನತ ಅವಕಾಶ ಲಭಿಸಿರುವ ಕಾರಣ ರಾಜೀವ್ ಅಗರ್ವಾಲ್ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎಂದು ಕಂಪನಿ ಹೇಳಿದೆ. "ಕಳೆದ ವರ್ಷದಲ್ಲಿ ಬಳಕೆದಾರ-ಸುರಕ್ಷತೆ, ಗೌಪ್ಯತೆ ಮತ್ತು ದೇಶದಲ್ಲಿ ಡಿಜಿಟಲ್ ಸೇರ್ಪಡೆಯನ್ನು ಹೆಚ್ಚಿಸಲು GOAL ನಂತಹ ಕಾರ್ಯಕ್ರಮಗಳನ್ನು ಹೆಚ್ಚಿಸುವಂತಹ ಕ್ಷೇತ್ರಗಳಲ್ಲಿ ನಮ್ಮ ನೀತಿ-ನೇತೃತ್ವದ ಉಪಕ್ರಮಗಳನ್ನು ಮುನ್ನಡೆಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ "ಎಂದು ಕಂಪನಿ ಹೇಳಿದೆ.

Resignation of WhatsApp India head and Meta India director

ಈ ಹಿಂದೆ ಫೇಸ್‌ಬುಕ್ ಪೋಷಕ ಸಂಸ್ಥೆಯಾಗಿರುವ ಮೆಟಾ ಕಂಪನಿಯು 11,000 ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ಘೋಷಿಸಿತ್ತು. ಈ ನಿರ್ಧಾರದ ಕುರಿತು ಮೇಟಾದ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಾರ್ಕ್ ಜುಕರ್‌ಬರ್ಗ್, ತಮ್ಮ ಉದ್ಯೋಗಿಗಳಿಗೆ ಕ್ಷಮೆಯಾಚಿಸುವ ಪತ್ರವನ್ನು ನೀಡಿದ್ದರು. ತಪ್ಪಾಗಿರುವುದರ ಜವಾಬ್ದಾರಿಯನ್ನು ತಾವೇ ವಹಿಸಿಕೊಂಡಿರುವುದಾಗಿ ಹೇಳಿಕೊಂಡಿದ್ದಾರೆ.

English summary
WhatsApp India head Abhijit Bose and Meta India director Rajeev Agarwal have resigned from their positions.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X