'ಪ್ರಧಾನಿ ಮೋದಿ ಹಿಂದುಳಿದ ವರ್ಗದವರಲ್ಲ' ರೇವಂತ್ ರೆಡ್ಡಿ ಹೇಳಿಕೆಗೆ ಬಿಜೆಪಿ ತಿರುಗೇಟು

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ನೀಡಿರುವ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ನರೇದ್ರ ಮೋದಿ ಹುಟ್ಟಿನಿಂದ ಹಿಂದುಳಿದ ವರ್ಗಕ್ಕೆ ಸೇರಿದವರಲ್ಲ, ಅವರು ಕಾನೂನುಬದ್ಧವಾಗಿ ಮತಾಂತರಗೊಂಡ ಹಿಂದುಳಿದ ವರ್ಗಕ್ಕೆ ಸೇರಿದವರು ಎಂದು ಹೇಳಿದ್ದಾರೆ. ರೇವಂತ್ ರೆಡ್ಡಿ ಅವರ ಹೇಳಿಕೆಗೆ ಬಿಜೆಪಿ ತೀವ್ರ ಆಕ್ರೋಶ ವಕ್ತಪಡಿಸಿದೆ.

2001ರಲ್ಲಿ ನರೇಂದ್ರ ಮೋದಿ ಗುಜರಾತ್‌ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸರ್ಕಾರವು ಮೋದಿ ಜಾತಿಯನ್ನು ಹಿಂದುಳಿದ ವರ್ಗಗಳಿಗೆ ಸೇರಿಸಿದೆ ಎಂದು ರೇವಂತ್ ರೆಡ್ಡಿ ಹೇಳಿದ್ದಾರೆ. ರೇವಂತ್ ರೆಡ್ಡಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ, ತೆಲಂಗಾಣ ಮುಖ್ಯಮಂತ್ರಿಯಾಗಿ ಯಾವುದೇ ಜನಪರ ಕೆಲಸ ಮಾಡಿಲ್ಲ, ರಾಜ್ಯದ ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದ್ದು, ಈಗ ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಸುದ್ದಿಯಾಗಲು ಬಯಸುತ್ತಿದ್ದಾರೆ ಎಂದು ಹೇಳಿದರು.

revanth reddy claims pm modi not backward class by birth bjp response

ಶುಕ್ರವಾರ ನಡೆದ ಕಾಂಗ್ರೆಸ್‌ ಕಾರ್ಯಕ್ರಮದಲ್ಲಿ ಮಾತನಾಡಿದ್ದ ರೇವಂತ್ ರೆಡ್ಡಿ, ಪ್ರಧಾನಿ ನರೇಂದ್ರ ಮೋದಿ ಅವರು ಹಿಂದುಳಿದ ವರ್ಗದಿಂದ ಬಂದಿದ್ದೇನೆ ಎಂದು ಹೇಳಿಕೊಳ್ಳುತ್ತಾರೆ. ಆದರೆ ಅವರು ಹಿಂದುಳಿದ ವರ್ಗಕ್ಕೆ ಸೇರಿದವರರಲ್ಲ, ಕಾನೂನುಬದ್ಧವಾಗಿ ಮತಾಂತರಗೊಂಡ ಹಿಂದುಳಿದ ವರ್ಗಕ್ಕೆ ಸೇರಿದವರು, ನಾನು ಎಚ್ಚರಿಕೆಯಿಂದ ಪದಗಳನ್ನು ಬಳಕೆ ಮಾಡುತ್ತಿದ್ದೇನೆ. 2001ರಲ್ಲಿ ಅವರು ಮುಖ್ಯಮಂತ್ರಿಯಾಗುವವರೆಗೂ ಮುಂದುವರೆದ ಜಾತಿಗಳಲ್ಲಿದ್ದರು. ಆದರೆ ಗುಜರಾತ್ ಸಿಎಂ ಆದ ಬಳಿಕ ಕಾನೂನು ಜಾರಿ ಮಾಡುವ ಮೂಲಕ ತಮ್ಮ ಜಾತಿಯ ವರ್ಗವನ್ನು ಹಿಂದುಳಿದ ವರ್ಗಕ್ಕೆ ಸೇರಿಸಿದರು, ಪ್ರಧಾನಿ ಮೋದಿ ಹಿಂದುಳಿದ ವರ್ಗದ ಜಾತಿ ಪ್ರಮಾಣ ಹೊಂದಿರಬಹುದು. ಆದರೆ ಅವರ ಮನಸ್ಥಿತಿ ಹಿಂದುಳಿದ ವರ್ಗಕ್ಕೆ ವಿರುದ್ಧವಾಗಿದೆ ಎಂದು ಹೇಳಿದರು.

ರೇವಂತ್ ರೆಡ್ಡಿಗೆ ಬಿಜೆಪಿ ತಿರುಗೇಟು

ರೇವಂತ್ ರೆಡ್ಡಿ ಹೇಳಿಕೆಗೆ ತಿರುಗೇಟು ಕೊಟ್ಟಿರುವ ಬಿಜೆಪಿ ವಕ್ತಾರ ಆರ್ ಪಿ ಸಿಂಗ್, ಅವರು ಯಾವುದೇ ಕೆಲಸ ಮಾಡುತ್ತಿಲ್ಲ, ಆದರೆ ಇಂತಹ ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕ ಸುದ್ದಿಯಾಗಲು ಬಯಸುತ್ತಾರೆ. ಮಾಜಿ ಸಿಎಂ ಕೆ ಚಂದ್ರಶೇಖರ ರಾವ್ 'ಬಿಹಾರಿ ಜೀನ್‌ಗಳನ್ನು' ಹೊಂದಿದ್ದಾರೆಂದು ಹೇಳಿದ್ದರು. ಇದರಿಂದ ಬಿಹಾರವನ್ನೇ ಅವಮಾನಿಸುತ್ತಾರೆ ಎಂದು ಹೇಳಿದರು.

ಬಿಜೆಪಿಯ ಒಬಿಸಿ (ಇತರ ಹಿಂದುಳಿದ ವರ್ಗಗಳು) ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಕೆ. ಲಕ್ಷ್ಮಣ್ ಮಾತನಾಡಿ, ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಈ ಹಿಂದೆ ಇದೇ ರೀತಿಯ ಹೇಳಿಕೆ ನೀಡಿದ್ದರು ಎಂದು ಅಸಮಾಧಾನ ವ್ಯಕ್ತಪಡಿಸಿದರು. ರೇವಂತ್ ರೆಡ್ಡಿ ನೀಡಿರುವ ಹೇಳಿಕೆ ಸಂಪೂರ್ಣ ಸುಳ್ಳು, ಕಾಂಗ್ರೆಸ್‌ ನಾಯಕರು ಯಾಕೆ ಪದೇ ಪದೇ ಪ್ರಧಾನಿ ಮೋದಿಯವರ ಜಾತಿಯ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ ಎಂದು ಪ್ರಶ್ನೆ ಮಾಡಿದರು.

ಜನರ ಸಮಸ್ಯೆಗಳನ್ನು ಬಗೆಹರಿಸಲು ಕೆಲಸ ಮಾಡದ ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಜನರ ಗಮನವನ್ನು ಬೇರೆಡೆ ಸೆಳೆಯಲು ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+