Revanth Reddy: ಡಿಕೆಶಿ ಶಿಷ್ಯ ರೇವಂತ್ ರೆಡ್ಡಿಗೆ ತೆಲಂಗಾಣ ಮುಖ್ಯಮಂತ್ರಿ ಪಟ್ಟ ಫಿಕ್ಸ್- ನಿಖರ ಮೂಲಗಳಿಂದ ದೃಢಪಟ್ಟ ಮಾಹಿತಿ
ಹೈದರಾಬಾದ್, ಡಿಸೆಂಬರ್ 04: ತೆಲಂಗಾಣದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಕಾಂಗ್ರೆಸ್ ಪಕ್ಷವು ರೇವಂತ್ ರೆಡ್ಡಿಯನ್ನು ಮುಖ್ಯಮಂತ್ರಿಯನ್ನಾಗಿ ನೇಮಿಸಲು ಮುಂದಾಗಿದೆ ಎಂದು ಮೂಲಗಳು ಹೇಳಿವೆ. ತೆಲಂಗಾಣದಲ್ಲಿ ಒಟ್ಟು 64 ಕಾಂಗ್ರೆಸ್ ಶಾಸಕರು ಆಯ್ಕೆಯಾಗಿದ್ದಾರೆ. ಅವರ ಪೈಕಿ 50 ಕ್ಕೂ ಹೆಚ್ಚು ಶಾಸಕರು ರೇವಂತ್ ರೆಡ್ಡಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂಬ ನಿಖರ ಮಾಹಿತಿ ಲಭ್ಯವಾಗಿದೆ.
ಇಂದು ಸಿಎಲ್‌ಪಿ ನಾಯಕನ ನೇಮಕ
ಕಾಂಗ್ರೆಸ್ ಶಾಸಕಾಂಗ ಪಕ್ಷವು ಇಂದು ಹೈದರಾಬಾದ್‌ನಲ್ಲಿ ಸಭೆ ಕರೆದಿದೆ. ತೆಲಂಗಾಣದ ಮುಂದಿನ ಮುಖ್ಯಮಂತ್ರಿಯಾಗಲಿರುವ ಸಿಎಲ್‌ಪಿ ನಾಯಕನನ್ನು ನೇಮಿಸಲು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ. ರೇವಂತ್ ರೆಡ್ಡಿ ಹೆಸರು ಪಟ್ಟಿಯಲ್ಲಿ ಮುಂಚೂಣಿಯಲ್ಲಿದೆ. ರೇವಂತ್ ರೆಡ್ಡಿ ಅವರು ಕಾಂಗ್ರೆಸ್ ಗೆಲುವಿಗಾಗಿ ದುಡಿದಿದ್ದಾರೆ. ಅವರಿಗೆ ಮುಖ್ಯಮಂತ್ರಿಯಾಗುವ ಎಲ್ಲಾ ಅರ್ಹತೆಗಳಿವೆ ಎಂದು ಬೆಂಬಲಿಗ ಶಾಸಕರು ಹೇಳಿದ್ದಾರೆ.

ರೇವಂತ್ ರೆಡ್ಡಿ ಹಿನ್ನೆಲೆ ಏನು?
ಕಾಂಗ್ರೆಸ್ ಸಂಸದರಾಗಿರುವ ರೇವಂತ್ ರೆಡ್ಡಿ ಅವರು ಮಲ್ಕಾಜ್‌ಗಿರಿ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ. ಉಸ್ಮಾನಿಯಾ ವಿಶ್ವವಿದ್ಯಾನಿಲಯದಲ್ಲಿ ವ್ಯಾಸಂಗ ಮಾಡುತ್ತಿರುವಾಗ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಜೊತೆ ಗುರುತಿಸಿಕೊಂಡಿದ್ದರು. 2007 ರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ವಿಧಾನ ಪರಿಷತ್ತಿಗೆ ಆಯ್ಕೆಯಾದರು.
ಆ ನಂತರ ಚಂದ್ರಬಾಬು ನೇತೃತ್ವದ ತೆಲುಗು ದೇಶಂ ಪಾರ್ಟಿಗೆ (ಟಿಡಿಪಿ) ಸೇರಿದರು. 2009 ಮತ್ತು 2014 ರಲ್ಲಿ ಆಂಧ್ರ ಪ್ರದೇಶ ವಿಧಾನಸಭೆಗೆ ಶಾಸಕರಾಗಿ ಆಯ್ಕೆಯಾದರು. ಎರಡು ಬಾರಿ ವಿಧಾನಸಭೆ ಸದಸ್ಯರಾಗಿ ಕಾರ್ಯನಿರ್ವಹಿಸಿದರು. ಕೊಡಂಗಲ್ ಕ್ಷೇತ್ರವನ್ನು ರೇವಂತ್ ರೆಡ್ಡಿ ಪ್ರತಿನಿಧಿಸಿದರು.
2014 ರಲ್ಲಿ ರೆಡ್ಡಿ ಆಂಧ್ರಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಕೊಡಂಗಲ್ ಕ್ಷೇತ್ರದಿಂದ ಅಭೂತಪೂರ್ವ ಗೆಲುವು ಸಾಧಿಸಿದರು. 46.45 ಶೇಕಡಾ ಮತಗಳನ್ನು ಗಳಿಸಿದರು. 2014 ರ ಲೋಕಸಭೆ ಚುನಾವಣೆ ಚುನಾವಣೆಯಲ್ಲಿಯೂ ಸ್ಪರ್ಧಿಸಿದರು. 39.06 ಶೇಕಡಾ ಮತಗಳನ್ನು ಪಡೆದರು.
2017 ರಲ್ಲಿ ರೆಡ್ಡಿ ಅವರು ಟಿಡಿಪಿಯಿಂದ ಕಾಂಗ್ರೆಸ್‌ಗೆ ಸೇರಿದರು. ಅವರು 2019 ರ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಸೋಲನ್ನು ಕಂಡರು. 2019 ರ ಲೋಕಸಭೆ ಚುನಾವಣೆಯಲ್ಲಿ ಮಲ್ಕಾಜ್‌ಗಿರಿ ಕ್ಷೇತ್ರದಿಂದ ಗೆಲುವು ಸಾಧಿಸಿದರು. 10,919 ಮತಗಳ ಅಂತರದಿಂದ ಜಯಗಳಿಸಿ ಸಂಸದರಾದರು.
ರೇವಂತ್ ರೆಡ್ಡಿಯವರ ರಾಜಕೀಯ ಚಾಣಾಕ್ಷತೆ ಮತ್ತು ಪ್ರಭಾವವನ್ನು ಕಾಂಗ್ರೆಸ್ ಗುರುತಿಸಿತು. ಜೂನ್ 2021 ರಲ್ಲಿ ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ರೇವಂತ್ ರೆಡ್ಡಿ ನೇಮಕಗೊಂಡರು.
ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, 119 ಸದಸ್ಯ ಬಲದ ವಿಧಾನಸಭೆಯಲ್ಲಿ 64 ಸ್ಥಾನಗಳನ್ನು ಪಡೆಯುವ ಮೂಲಕ ಕಾಂಗ್ರೆಸ್ ಗೆಲುವು ಸಾಧಿಸಿದೆ. ಕಾಂಗ್ರೆಸ್ ಪಕ್ಷವು ಶೇಖಡಾ 39.40 ಮತಗಳನ್ನು ಗಳಿಸಿದೆ. ಬಿಆರ್‌ಎಸ್ ಪಕ್ಷವು ಶೇ 37.35 ಮತಗಳನ್ನು ಗಳಿಸುವ ಮೂಲಕ 39 ಕ್ಷೇತ್ರಗಳನ್ನು ಗೆದ್ದುಕೊಂಡಿದೆ.
ಬಿಆರ್‌ಎಸ್ ಮತ ಹಂಚಿಕೆಯಲ್ಲಿ ಶೇ 10 ಮತಗಳು ಕಡಿಮೆಯಾಗಿವೆ. 2018 ರ ವಿಧಾನಸಭಾ ಚುನಾವಣೆಯಲ್ಲಿ ಶೇ 47 ಮತಗಳನ್ನು ಬಿಆರ್‌ಎಸ್ ಗಳಿಸಿತ್ತು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications