RG Kar Rape, Murder Case: ವೈದ್ಯೆ ಅತ್ಯಾಚಾರ, ಕೊಲೆ: ಸಂಜಯ್ ರಾಯ್ ದೋಷಿ
ಕೋಲ್ಕತ್ತಾ, ಜನವರಿ 18: ದೇಶವನ್ನೇ ಬೆಚ್ಚಿಬೀಳಿಸಿದ್ದ ಕೋಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದ ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣದ ತೀರ್ಪು ಪ್ರಕಟವಾಗಿದೆ. ಈ ಕುರಿತು ಸಿಬಿಐ ತನಿಖೆ ನಡೆಸುತ್ತಿತ್ತು, ಈ ಅತ್ಯಾಚಾರ, ಕೊಲೆ ಪ್ರಕರಣವನ್ನು ಖಂಡಿಸಿ ದೇಶಾದ್ಯಂತ ಪ್ರತಿಭಟನೆ ನಡೆದಿತ್ತು. ಪಶ್ಚಿಮ ಬಂಗಾಳದಲ್ಲಿ ವೈದ್ಯರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ನ್ಯಾಯಕ್ಕಾಗಿ ಹೋರಾಟ ನಡೆಸಿದ್ದರು.
ಶನಿವಾರ ಸಿಯಾಲ್ಡಾದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಅನಿರ್ ಬಾನ್ ದಾಸ್ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದ ಅತ್ಯಾಚಾರ, ಕೊಲೆ ಪ್ರಕರಣದ ತೀರ್ಪು ಪ್ರಕಟಿಸಿದ್ದಾರೆ. ಆರೋಪಿ ಸಂಜಯ್ ರಾಯ್ ದೋಷಿ ಎಂದು ತೀರ್ಪು ನೀಡಿದ್ದು, ಸೋಮವಾರ ಶಿಕ್ಷೆ ಪ್ರಮಾಣ ಪ್ರಕಟಿಸಲಿದ್ದಾರೆ.

2024ರ ಆಗಸ್ಟ್ 9ರಂದು ಆರ್‌ಜಿ ಕರ್ ಆಸ್ಪತ್ರೆಯಲ್ಲಿ ತರಬೇತಿ ನಿರತ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಆಸ್ಪತ್ರೆಯ ಆವರಣದಲ್ಲಿಯೇ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿತ್ತು. ಈ ಪ್ರಕರಣದ ವಿಚಾರಣೆಯನ್ನು ಆರಂಭಿಸಿದ 57 ದಿನಗಳಲ್ಲಿ ಕೋರ್ಟ್ ವಿಚಾರಣೆ ಪೂರ್ಣಗೊಳಿಸಿ, ತೀರ್ಪು ನೀಡಿದೆ.
ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದ ಪ್ರಕರಣ: 31 ವರ್ಷದ ತರಬೇತಿ ನಿರತ ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣ ದೇಶದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಪ್ರಕರಣದಲ್ಲಿ ಪಶ್ಚಿಮ ಬಂಗಾಳ ರಾಜ್ಯ ಸರ್ಕಾರ ಸರಿಯಾಗಿ ತನಿಖೆ ನಡೆಸಿಲ್ಲ ಎಂದು ಆರೋಪಿಸಲಾಗಿತ್ತು. ಪಶ್ಚಿಮ ಬಂಗಾಳ ಹೈಕೋರ್ಟ್ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿತ್ತು. ಈ ಪ್ರಕರಣದ ವಿಚಾರಣೆಯ ಮೇಲ್ವಿಚಾರಣೆಯನ್ನು ಸುಪ್ರೀಂಕೋರ್ಟ್ ಸಹ ನಡೆಸುತ್ತಿತ್ತು.
ಆಸ್ಪತ್ರೆಯ ಆವರಣದಲ್ಲಿಯೇ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಲಾಗಿತ್ತು. ವಿದ್ಯಾರ್ಥಿನಿ ಶವ ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಂಜಯ್ ರಾಯ್ ಬಂಧಿಸಲಾಗಿತ್ತು. ಸದ್ಯ ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದು, ಜನವರಿ 20ರಂದು ಕೋರ್ಟ್‌ಗೆ ಖುದ್ದಾಗಿ ಹಾಜರುಪಡಿಸಲು ನ್ಯಾಯಾಲಯ ಸೂಚನೆ ನೀಡಿದೆ.
ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ, ಕೊಲೆ ಖಂಡಿಸಿ ವೈದ್ಯರು ಮುಷ್ಕರ ನಡೆಸುತ್ತಿದ್ದರು. ಸುಪ್ರೀಂಕೋರ್ಟ್ ಧರಣಿ ನಿರತ ವೈದ್ಯರು ಕೆಲಸಕ್ಕೆ ಹಿಂತಿರುಗುವಂತೆ ಸೂಚಿಸಿತ್ತು. ಪಶ್ಚಿಮ ಬಂಗಾಳ ರಾಜ್ಯ ಸರ್ಕಾರ ಪ್ರಕರಣದಲ್ಲಿ ನಡೆದುಕೊಂಡ ರೀತಿಯ ಬಗ್ಗೆಯೂ ಭಾರೀ ಆಕ್ರೋಶ ವ್ಯಕ್ತವಾಗಿತ್ತು.
ಆಗಸ್ಟ್ 9ರಂದು ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಲಾಗಿತ್ತು. ಆರೋಪಿ ಸಂಜಯ್ ರಾಯ್‌ನನ್ನು ಆಗಸ್ಟ್ 10ರಂದು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದರು. ಆರೋಪಿ ಪೊಲೀಸ್ ಮಾಹಿತಿದಾರನಾಗಿಯೂ ಕೆಲಸ ಮಾಡುತ್ತಿದ್ದ. ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾಗ, ಕೃತ್ಯ ಎಸಗಿರುವುದು ಒಪ್ಪಿಕೊಂಡಿದ್ದ ಗಲ್ಲಿಗೆ ಬೇಕಾದರೂ ಹಾಕಿ ಎಂದು ಆರೋಪಿ ಹೇಳಿಕೆ ನೀಡಿದ್ದ.
ಪ್ರಕರಣದ ತನಿಖೆ ಕೈಗೊಂಡಿದ್ದ ಸಿಬಿಐ 50 ಸಾಕ್ಷಿಗಳ ಹೇಳಿಕೆ ಪಡೆದಿತ್ತು. ಸಿಯಾಲ್ಡಾದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್‌ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿತ್ತು. ನವೆಂಬರ್ 12ರಂದು ವಿಚಾರಣೆ ಆರಂಭಿಸಲಾಗಿತ್ತು. ಆರೋಪಿ ಸಂಜಯ್ ರಾಯ್‌ನನ್ನು ಜನವರಿ 9ರಂದು ವಿಚಾರಣೆ ನಡೆಸಲಾಗಿತ್ತು. ಈಗ ಈ ಪ್ರಕರಣದಲ್ಲಿ ಸಂಜಯ್ ರಾಯ್ ಅಪರಾಧಿ ಎಂದು ತೀರ್ಪು ನೀಡಲಾಗಿದ್ದು, ಶಿಕ್ಷೆಯ ಪ್ರಮಾಣ ಜನವರಿ 20ರಂದು ಪ್ರಕಟವಾಗಲಿದೆ.
ನವೆಂಬರ್ 11ರ ಬಳಿಕ ಪ್ರತಿದಿನ ಪ್ರಕರಣದ ವಿಚಾರಣೆ ನಡೆಸುವುದಾಗಿ ಕೋರ್ಟ್ ಹೇಳಿತ್ತು. ಅಲ್ಲದೇ ಆರೋಪಿ ಸಂಜಯ್ ರಾಯ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 64 (ಅತ್ಯಾಚಾರ), ಸೆಕ್ಷನ್ 66, ಸೆಕ್ಷನ್ 103 ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿತ್ತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications