ಪಟೇಲ್ ಸಮುದಾಯದಿಂದ ಕಾಂಗ್ರೆಸ್ ಗೆ ನೀಡಿದ್ದ ಬೆಂಬಲ ಹಿಂದಕ್ಕೆ

Posted By: Nayana
Subscribe to Oneindia Kannada

ಅಹ್ಮದಾಬಾದ್, ನವೆಂಬರ್ 20: ಕಾಂಗ್ರೆಸ್ ಪಕ್ಷಕ್ಕೆ ನೀಡಿರುವ ಬೆಂಬಲವನ್ನು ಹಿಂಪಡೆಯುತ್ತೇವೆ ಎಂದು ಪಟೇಲ್ ಸಮುದಾಯದ ಮುಖಂಡರು ತಿಳಿಸಿದ್ದಾರೆ.ಸೋಮವಾರ (20)ರಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖಂಡರು, ಟಿಕೆಟ್ ಹಂಚಿಕೆ ವಿಚಾರವಾಗಿ ಪಾಟಿದಾರ್ ಸಮುದಾಯದ ಹಾಗೂ ಕಾಂಗ್ರೆಸ್ ಪಕ್ಷದ ನಡುವೆ ಅಸಮಾಧಾನ ಉಂಟಾಗಿರುವುದೇ ಈ ನಿರ್ಧಾರಕ್ಕೆ ಕಾರಣವಾಗಿದೆ.

ಕಾಂಗ್ರೆಸ್ ವಿರುದ್ಧ ಭಿನ್ನಮತ ಸ್ಫೋಟ, ಬೀದಿ ಕಾಳಗಕ್ಕಿಳಿದ ಪಾಟೀದಾರರು

ಟಿಕೆಟ್ ಹಂಚಿಕೆ ವಿಚಾರವಾಗಿ ಪಾಟಿದಾರ್ ಸಮುದಾಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕಾಂಗ್ರೆಸ್ ಕಾರ್ಯಕರ್ತರು ಭಾನುವಾರ ಸೂರತ್ ಮತ್ತು ಅಹ್ಮದಾಬಾದ್ ನಲ್ಲಿ ಅವರ ಮೇಲೆ ದಾಳಿ ನಡೆಸಿದ್ದರು.

Rift over ticket between Congress and Patidar leaders

ಅಂತೆಯೇ ತಮ್ಮದೇ ಪಕ್ಷದ ಕಚೇರಿಗಳ ಮೇಲೆ ದಾಳಿ ಮಾಡಿ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದರು. ಕಾಂಗ್ರೆಸ್ ಹಾಗೂ ಪಾಟೀದಾರ್ ಸಮುದಾಯ ನಡುವಿನ ಟಿಕೆಟ್ ಹಂಚಿಕೆ ಒಪ್ಪಂದದಿಂದ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪ ಮಾಡಿದ್ದರು.

ಕಾಂಗ್ರೆಸ್-ಹಾರ್ದಿಕ್ ಮಧ್ಯೆ ಕುದುರಿದ ಒಪ್ಪಂದ, ಇಂದು ಬಹಿರಂಗ ಘೋಷಣೆ

ಈ ಹಿನ್ನಲೆಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಮುಖಂಡರು ಪಟೇಲ್ ಸಮುದಾಯ ಮುಖಂಡ ಹಾಗೂ ಪಾಟಿದಾರ್ ಅನಾಮತ್ ಆಂದೋಲನ್ ಸಮಿತಿ ಸದಸ್ಯ ದಿನೇಶ್ ಪಟೇಲ್, ಕಾಂಗ್ರೆಸ್ ಪಕ್ಷಕ್ಕೆ ನೀಡಿರುವ ಬೆಂಬಲವನ್ನು ನಾವು ಹಿಂಪಡೆಯುವ ಕುರಿತು ಯೋಚಿಸುತ್ತಿದ್ದೇವೆ.

ಭಾನುವಾರ ಪಟೇಲ್ ಸಮುದಾಯದ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ದಾಳಿ ನಡೆಸಿದ್ದು ಅಪರಾಧ, ಹೀಗಾಗಿ ಕಾಂಗ್ರೆಸ್ ಪಕ್ಷದ ವಿರುದ್ಧ ಪಾಸ್ ಸಂಘಟನೆ ಪ್ರತಿಭಟನೆ ನಡೆಸಲಿದೆ. ಈಗಾಗಲೇ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ತೆಗೆದುಕೊಂಡಿರುವ ಸಮುದಾಯದ ನಾಯಕರು ನಾಮಪತ್ರ ಸಲ್ಲಿಸದಂತೆ ಹೇಳಲಾಗಿದೆ ಎಂದು ದಿನೇಶ್ ಪಟೇಲ್ ಹೇಳಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Rifts between Congress and Hardik Ptel-led Patidar Anamat Andolan Samiti(PAAS) are wide open ahead of Gujrat Assembly elections 2017.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ