'ಖಾಸಗಿತನ ಮೂಲಭೂತ ಹಕ್ಕು' ಸಾಂವಿಧಾನಿಕ ಪೀಠದಿಂದ ಮಹತ್ವದ ತೀರ್ಪು

Posted By: ವಿಕಾಸ್ ನಂಜಪ್ಪ
Subscribe to Oneindia Kannada

ನವದೆಹಲಿ, ಆಗಸ್ಟ್ 24: ಖಾಸಗಿತನ ಮೂಲಭೂತ ಹಕ್ಕು ಎಂದು ಸುಪ್ರಿಂ ಕೋರ್ಟ್ ನ ಸಾಂವಿಧಾನಿಕ ಮಹತ್ವದ ತೀರ್ಪು ನೀಡಿದೆ.

ಸಾಂವಿಧಾನಿಕ ಪೀಠದಿಂದ 'ಆಧಾರ್' ಪ್ರಕರಣಗಳ ವಿಚಾರಣೆ

"ಮೂಲಭೂತ ಹಕ್ಕುಗಳ ಅನುಚ್ಛೇದ 21ರ ಪ್ಯಾರಾ 3ರ ಪ್ರಕಾರ ಖಾಸಗಿತನಕ್ಕೆ ರಕ್ಷಣೆ ಇದೆ," ಎಂದು ಮುಖ್ಯ ನ್ಯಾಯಮೂರ್ತಿ ಜೆಎಸ್ ಖೇಹರ್ ತಮ್ಮ ಆದೇಶದಲ್ಲಿ ಹೇಳಿದ್ದಾರೆ

Right to Privacy is a fundamental right rules Supreme Court

ಆಧಾರ್ ಕಾರ್ಡ್ ಕಡ್ಡಾಯ ಪ್ರಶ್ನಿಸಿ ಸುಪ್ರಿಂ ಕೋರ್ಟ್ ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದವು. ಇದು ವೈಯಕ್ತಿಕ ಹಕ್ಕುಗಳ ಉಲ್ಲಂಘನೆ. ಬೆರಳಚ್ಚು ಮತ್ತು ಕಣ್ಣಿನ ಸ್ಕ್ಯಾನ್ ಮಾಡುವ ಮೂಲಕ ಸಂವಿಧಾನದ ಆರ್ಟಿಕಲ್ 21ರಲ್ಲಿ ನೀಡಿದ ವೈಯಕ್ತಿಕ ಹಕ್ಕುಗಳ ಉಲ್ಲಂಘನೆ ನಡೆದಿದೆ ಎಂದು ಅರ್ಜಿದಾರರು ಸುಪ್ರಿಂ ಕೋರ್ಟ್ ಮೊರೆ ಹೋಗಿದ್ದರು.

ಈ ಹಿನ್ನಲೆಯಲ್ಲಿ 'ಖಾಸಗಿತನದ ಹಕ್ಕು ಮೂಲಭೂತ ಹಕ್ಕೇ' ಎಂಬ ಬಗ್ಗೆ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ಜೆ.ಎಸ್‌. ಖೇಹರ್‌ ನೇತೃತ್ವದ 9 ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ಇಂದಿಗೆ ತೀರ್ಪನ್ನು ಕಾಯ್ದಿರಿಸಿತ್ತು.

ಖಾಸಗಿತನ ಮೂಲಭೂತ ಹಕ್ಕಲ್ಲ - ಸುಪ್ರಿಂ ಮಹತ್ವದ ತೀರ್ಪು : 9 ಅಂಶಗಳು

ಖಾಸಗಿತನದ ಹಕ್ಕನ್ನು ಮೂಲಭೂತ ಹಕ್ಕು ಎಂದು ಪರಿಗಣಿಸಬೇಕೇ ಬೇಡವೇ ಎಂಬ ವಿಚಾರವಾಗಿ ನ್ಯಾಯಪೀಠವು ಮೂರು ವಾರಗಳಲ್ಲಿ ಆರು ದಿನಗಳ ಕಾಲ ಸುದೀರ್ಘ ವಿಚಾರಣೆ ನಡೆಸಿತ್ತು.

ಈ ಹಿಂದೆ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪೀಠಕ್ಕೆ ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಈ ವಿಚಾರವನ್ನು 9 ನ್ಯಾಯಾಧೀಶರ ನ್ಯಾಯಪೀಠದಿಂದ ವಿಚಾರಣೆ ಮಾಡಬೇಕು ಎಂದು ಕೇಳಿಕೊಂಡಿದ್ದರು. ಈ ಹಿಂದೆ 8 ಸದಸ್ಯರ ನ್ಯಾಯಪೀಠ ಖಾಸಗಿತನ ಮೂಲಭೂತ ಹಕ್ಕಲ್ಲ ಎಂದು ತೀರ್ಪು ನೀಡಿದೆ. ಹಾಗಾಗಿ 9 ಸದಸ್ಯರ ನ್ಯಾಯಪೀಠ ರಚಿಸುವಂತೆ ಕೇಳಿಕೊಂಡಿದ್ದರು. ಹೀಗಾಗಿ 9 ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ರಚನೆ ಮಾಡಲಾಗಿತ್ತು. ಇದೀಗ ಸಾಂವಿಧಾನಿಕ ಖಾಸಗಿತನ ಮೂಲಭೂತ ಹಕ್ಕು ಎಂದು ತೀರ್ಪು ನೀಡಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The Supreme Court on Thursday held that Right to Privacy is a fundamental right. The verdict was delivered by a nine judge Constitution Bench of the Supreme Court headed by the Chief Justice of India, J S Khehar.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

X