Rishab Shetty: ದಿಢೀರ್ ಕೇಂದ್ರ ಗೃಹ ಸಚಿವ ಅಮಿತ್ ಭೇಟಿ ಮಾಡಿದ ರಿಷಬ್ ಶೆಟ್ಟಿ, ಕಾರಣವೇನು
Rishab Shetty: ನಟ ಹಾಗೂ ನಿರ್ಮಾಪಕ ರಿಷಬ್ ಶೆಟ್ಟಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ. ಈ ಭೇಟಿಯು ಹಲವು ಕುತೂಹಲಗಳಿಗೆ ಕಾರಣವಾಗಿದೆ. ರಿಷಬ್ ಶೆಟ್ಟಿ ಅವರು ಬಿಜೆಪಿ ಸೇರ್ಪಡೆ ಆಗುವ ಸಾಧ್ಯತೆ ಇದೆಯೇ, ರಾಜಕೀಯಕ್ಕೆ ಬರುವ ಸಾಧ್ಯತೆ ಇದೆಯೇ ಎನ್ನುವ ಬಗ್ಗೆಯೂ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಶುರುವಾಗಿದೆ. ಈ ಭೇಟಿಯ ಬಗ್ಗೆ ನಟ ರಿಷಬ್ ಶೆಟ್ಟಿ ಅವರು ಹೇಳಿದ್ದೇನು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಿಯಾಕ್ಷನ್ ಹೇಗಿತ್ತು ಎನ್ನುವ ವಿವರ ಇಲ್ಲಿದೆ.
ನಿಮ್ಮ ಜೊತೆ ಚಿತ್ರಗಳು ಮತ್ತು ಸಂಸ್ಕೃತಿ ಬಗ್ಗೆ ಮಾತನಾಡಿದ್ದು ತುಂಬಾ ಆಸಕ್ತಿದಾಯಕವಾಗಿತ್ತು. ನೀವು ನಿಮ್ಮ ಸಿನಿಮಾಗಳ ಮೂಲಕ ಭಾರತೀಯ ನಾಗರಿಕತೆ ಮತ್ತು ಸಂಸ್ಕೃತಿಯನ್ನು ಅರ್ಥಪೂರ್ಣವಾಗಿ, ಸಂವೇದನಾಶೀಲವಾಗಿ ತೋರಿಸುವ ರೀತಿಯು ನಿಜವಾಗಿಯೂ ಪ್ರಶಂಸನೀಯ ಮತ್ತು ಮನಸ್ಸಿನಲ್ಲಿ ಉಳಿಯುವಂತಿದೆ. ನೀವು ಮುಂದೆಯೂ ನಿಮ್ಮ ಕೆಲಸದ ಮೂಲಕ ಜನರನ್ನು ಪ್ರೇರೇಪಿಸುತ್ತೀರಿ ಎಂಬ ವಿಶ್ವಾಸ ನನಗೆ ಇದೆ ಎಂದು ನಟ ರಿಷಬ್ ಶೆಟ್ಟಿ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮೆಚ್ಚುಗೆ ಸೂಚಿಸಿದ್ದಾರೆ.

ಇನ್ನು ಈ ಭೇಟಿಯ ಬಗ್ಗೆ ನಟ ಅಮಿತ್ ಶಾ ಅವರು, ಗೌರವಾನ್ವಿತ ಗೃಹ ಸಚಿವರಾದ ಅಮಿತ್ ಶಾ ಅವರನ್ನು ಭೇಟಿ ಮಾಡುವ ಅವಕಾಶ ದೊರಕಿದ್ದು ನನಗೆ ಬಹಳ ಗೌರವದ ವಿಷಯವಾಗಿದೆ. ಅವರು ಕಾಂತಾರ ಹಾಗೂ ಕಾಂತಾರ ಚಾಪ್ಟರ್ 1 ಬಗ್ಗೆ ಪ್ರಶಂಸಿಸಿದ ಕ್ಷಣಗಳು ನನ್ನ ಜೀವನದ ಅತ್ಯಂತ ಸಂತೋಷದ ಕ್ಷಣಗಳಲ್ಲಿ ಒಂದಾಗಿದೆ.
ನನ್ನ ಮುಂದಿನ ಯೋಜನೆಗಳ ಬಗ್ಗೆ ಅವರೊಂದಿಗೆ ಚರ್ಚೆ ನಡೆಸಿದ್ದು ಕೂಡ ತುಂಬಾ ಸಂತೋಷ ತಂದಿತು. ನಮ್ಮ ಇತಿಹಾಸ, ಸಂಸ್ಕೃತಿ, ಕಲೆ ಮತ್ತು ಚಿತ್ರ ನಿರ್ಮಾಣದ ಬಗ್ಗೆ ಅವರ ಆಳವಾದ ಜ್ಞಾನ ಮತ್ತು ಅರಿವು ಹಂಚಿಕೊಂಡಾಗ ನನಗೆ ವಿಶೇಷ ಸಂತೋಷವಾಯಿತು ಎಂದು ಹೇಳಿದ್ದಾರೆ.
ಅನಿರೀಕ್ಷಿತ ಭೇಟಿಯ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹಲವು ಚರ್ಚೆ
ಇನ್ನು ಅನಿರೀಕ್ಷಿತ ಭೇಟಿಯ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹಲವು ಚರ್ಚೆಗಳು ನಡೆದಿದೆ. ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅನಿರೀಕ್ಷಿತ ಭೇಟಿಯ ಬಗ್ಗೆ ಹಲವು ಚರ್ಚೆಗಳು ನಡೆದಿವೆ. ರಿಷಬ್ ಅವರು ಮುಂದಿನ ದಿನಗಳಲ್ಲಿ ರಾಜಕೀಯ ಪ್ರವೇಶ ಮಾಡುವ ಸಾಧ್ಯತೆ ಇದೆಯೇ ಎನ್ನುವುದು ಚರ್ಚೆ ಆಗುತ್ತಿದೆ. ಆದರೆ ಈ ಬಗ್ಗೆ ರಿಷಬ್ ಅವರು ಯಾವುದೇ ಅಪ್ಡೇಟ್ಸ್ ಕೊಟ್ಟಿಲ್ಲ.












Click it and Unblock the Notifications