ರಿಷಿ ಕುಮಾರ್ ಶುಕ್ಲಾ ನೂತನ ಸಿಬಿಐ ಮುಖ್ಯಸ್ಥ

ನವದೆಹಲಿ, ಫೆಬ್ರವರಿ 2: ತೀವ್ರ ವಿವಾದದಲ್ಲಿರುವ ಸಿಬಿಐ ಸಂಸ್ಥೆಗೆ ಕೊನೆಗೂ ನೂತನ ಸಾರಥಿಯನ್ನು ಆಯ್ಕೆ ಮಾಡಲಾಗಿದೆ.

ಮಧ್ಯಪ್ರದೇಶ ಕೇಡರ್‌ನ 1983ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ರಿಷಿ ಕುಮಾರ್ ಶುಕ್ಲಾ ಅವರನ್ನು ಸಿಬಿಐನ ಹೊಸ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ.

ರಿಷಿ ಕುಮಾರ್ ಶುಕ್ಲಾ ಅವರು ಮುಂದಿನ ಎರಡು ವರ್ಷಗಳ ಅವಧಿಯವರೆಗೆ ಸಿಬಿಐನ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಆಯ್ಕೆ ಸಮಿತಿ ರಿಷಿ ಕುಮಾರ್ ಶುಕ್ಲಾ ಅವರ ಹೆಸರನ್ನು ಶಿಫಾರಸು ಮಾಡಿತ್ತು. ಅದಕ್ಕೆ ಸಂಪುಟ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ.

rishi kumar shukla appointed as new cbi director madhya pradesh ex DG

ಶುಕ್ಲಾ ಅವರು ಮಧ್ಯಪ್ರದೇಶದ ಮಾಜಿ ಪೊಲೀಸ್ ಮಹಾ ನಿರ್ದೇಶಕರಾಗಿದ್ದಾರೆ. ಭೋಪಾಲ್‌ನ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಓಎಸ್‌ಡಿ ಆಗಿಯೂ ಅವರು ಕಾರ್ಯ ನಿರ್ವಹಿಸಿದ್ದರು.

ಪ್ರಧಾನಿ ನೇತೃತ್ವದಲ್ಲಿ ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಮತ್ತು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಒಳಗೊಂಡ ಆಯ್ಕೆ ಸಮಿತಿಯು ಶನಿವಾರ ಬೆಳಿಗ್ಗೆ ಸಭೆ ನಡೆಸಿತ್ತು.

ಈ ಹಿಂದೆ ಕೇಂದ್ರ ಸರ್ಕಾರ 1982-85ರ ಅವಧಿಯ ಬ್ಯಾಚ್‌ಗಳ ಒಟ್ಟು 11 ಐಪಿಎಸ್ ಅಧಿಕಾರಿಗಳ ಹೆಸರನ್ನು ಅಂತಿಮಗೊಳಿಸಲಾಗಿತ್ತು. ಅದರಲ್ಲಿ ಸಿಬಿಐನ ವಿವಾದಿತ ಮಾಜಿ ವಿಶೇಷ ನಿರ್ದೇಶಕ ರಾಕೇಶ್ ಅಸ್ತಾನಾ ಅವರ ಹೆಸರೂ ಇತ್ತು.

ಭ್ರಷ್ಟಾಚಾರ ಆರೋಪ ಪ್ರಕರಣದಲ್ಲಿ ಸಿಲುಕಿರುವ ಅಲೋಕ್ ವರ್ಮಾ ಅವರನ್ನು ಜನವರಿ 10ರಂದು ಸಿಬಿಐ ನಿರ್ದೇಶಕರ ಹುದ್ದೆಯಿಂದ ವರ್ಗಾವಣೆ ಮಾಡಲಾಗಿತ್ತು. ಅವರ ಜಾಗಕ್ಕೆ ಎಂ. ನಾಗೇಶ್ವರ ರಾವ್ ಅವರನ್ನು ಹಂಗಾಮಿ ನಿರ್ದೇಶಕರನ್ನಾಗಿ ನೇಮಿಸಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+