ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಿಜೋರಾಂನಲ್ಲಿ ಮನೆ ಒಳಗೂ ಇಡೀ ದಿನ ಮಾಸ್ಕ್ ಧರಿಸುವಂತೆ ಸೂಚನೆ

|
Google Oneindia Kannada News

ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂನಲ್ಲಿ ಮನೆಯ ಒಳಗೂ ಇಡೀ ದಿನ ಮಾಸ್ಕ್ ಧರಿಸುವಂತೆ ಸೂಚನೆ ನೀಡಲಾಗಿದೆ.

ಮಾಸ್ಕ್‌ ಧರಿಸಿ ಇದರಿಂದ ನೀವು ಆಮ್ಲಜನಕದ ಮಾಸ್ಕ್ ಧರಿಸಬೇಕಾಗಿ ಬರುವುದಿಲ್ಲ ಎಂಬ ಘೋಷಣೆಯೊಂದಿಗೆ 10 ದಿನಗಳ ಆಲ್ ಮಾಸ್ಕ್ ಅಭಿಯಾನವನ್ನು ಸರ್ಕಾರ ಹಮ್ಮಿಕೊಂಡಿದೆ.

ದೇಶಿಯ ವಿಮಾನದಲ್ಲಿ ಶೇ 100ರಷ್ಟು ಪ್ರಯಾಣಿಕರ ಸಂಚಾರಕ್ಕೆ ಒಪ್ಪಿಗೆ ದೇಶಿಯ ವಿಮಾನದಲ್ಲಿ ಶೇ 100ರಷ್ಟು ಪ್ರಯಾಣಿಕರ ಸಂಚಾರಕ್ಕೆ ಒಪ್ಪಿಗೆ

ಒಂದು ತಿಂಗಳಿಗೂ ಹೆಚ್ಚು ಸಮಯದಿಂದ ಕೋವಿಡ್ ಪಾಸಿಟಿವಿಟಿ ದರ ಶೇ.15 ರಿಂದ 30ರ ನಡುವೆ ಇರುವ ಕಾರಣ ಸರ್ಕಾರ ಈ ಕ್ರಮಗಳನ್ನು ಕೈಗೊಳ್ಳುತ್ತಿವೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

Rising Covid 19 Cases:Mizoram Govt Asks Residents To Wear Mask Even At Home

ಕೋವಿಡ್ ಪ್ರಕರಣಗಳ ಏರಿಕೆ ತಡೆಯಲಾರದೆ ಕಂಗೆಟ್ಟಿರುವ ಮಿಜೋರಾಂ ಸರ್ಕಾರ ಮನೆಯೊಳಗೂ ಇಡೀ ದಿನ ಪ್ರತಿ ದಿನ ಮಾಸ್ಕ್ ಧರಿಸುವಂತೆ ಸುಚಿಸಿದೆ. ಮನೆಯಲ್ಲಿರುವ ಪ್ರತಿಯೊಬ್ಬರೂ ಒಟ್ಟಿಗೆ ಕುಳಿತುಕೊಂಡು ಊಟ ಮಾಡದಂತೆಯೂ ಸಲಹೆ ನೀಡಿದೆ.

ಕಳೆದ ತಿಂಗಳಿನಿಂದ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡುಬಂದಿರುವ ಕಾರಣ ತಜ್ಞರ ಸಲಹೆಯ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವರು ಮಾಹಿತಿ ನೀಡಿದ್ದಾರೆ.

ಒಂದು ತಿಂಗಳಿಂದೀಚೆಗೆ ಮಿಜೋರಾಂನಲ್ಲಿ ಪ್ರತಿ ದಿನ 1 ಸಾವಿರಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ವರದಿಯಾಗುತ್ತಿವೆ. ಆಸ್ಪತ್ರೆಗಳಲ್ಲಿ ಹಾಸಿಗೆಗಳು ಭರ್ತಿಯಾಗಿದ್ದು, ಚಿಕಿತ್ಸೆಗೂ ತೊಡಕಾಗಿದೆ ಎನ್ನಲಾಗಿದೆ.

ಊಟ ಮಾಡುವ ಸಮಯ ಹೊರತುಪಡಿಸಿ ಮತ್ತೆಲ್ಲಾ ಸಂದರ್ಭದಲ್ಲಿ ಮನೆ ಒಳಗೂ ಮಾಸ್ಕ್ ಧರಿಸುವಂತೆ ತಿಳಿಸಲಾಗಿದೆ. ಆಗಾಗ ಕೈಗಳನ್ನು ಸ್ವಚ್ಛಗೊಳಿಸುವಂತೆಯೂ ಸ್ಯಾನಿಟೈಸರ್‌ಗಳನ್ನು ಬಳಸುವಂತೆಯೂ ತಿಳಿಹೇಳಲಾಗುತ್ತಿದೆ ಎಂದು ಸರ್ಕಾರ ತಿಳಿಸಿದೆ.

ಕೊರೊನಾ 3ನೇ ಅಲೆ ಭೀತಿ ನಡುವೆಯೇ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 14,313 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 181 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಮಂಗಳವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,39,85,920ಕ್ಕೆ ತಲುಪಿದ್ದು, 4,50,963ಕ್ಕೆ ಸಾವಿನ ಸಂಖ್ಯೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,14,900ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 26,579 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,33,20,057ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 11,81,766 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, 58,50,38,043 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದ ಕೇಂದ್ರ ಔಷಧ ಪ್ರಾಧಿಕಾರದ ತಜ್ಞರ ಸಮಿತಿಯು 2 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಭಾರತ್ ಬಯೋಟೆಕ್‌ನ ಕೊವಾಕ್ಸಿನ್‌ ಲಸಿಕೆಯ ತುರ್ತು ಬಳಕೆಗೆ ಕೆಲವು ಷರತ್ತುಗಳೊಂದಿಗೆ ಅನುಮತಿ ನೀಡುವಂತೆ ಡಿಸಿಜಿಐಗೆ ಶಿಫಾರಸು ಮಾಡಿದೆ.

ಹೈದರಾಬಾದ್ ಮೂಲದ ಭಾರತ್ ಬಯೋಟೆಕ್, ಕೋವಿಡ್ ಲಸಿಕೆ ಕೊವಾಕ್ಸಿನ್‌ ಅನ್ನು 2 ರಿಂದ 18 ವರ್ಷದೊಳಗಿನ ಮಕ್ಕಳಲ್ಲಿ ಬಳಸಲು 2/3 ಹಂತದ ಪರೀಕ್ಷೆಗಳನ್ನು ಪೂರ್ಣಗೊಳಿಸಿದ್ದು, ಲಸಿಕೆಯ ತುರ್ತು ಬಳಕೆಯ ದೃಢೀಕರಣಕ್ಕಾಗಿ, ಪರಿಶೀಲನೆ ಮತ್ತು ನಂತರದ ಅನುಮೋದನೆಗಾಗಿ ಈ ತಿಂಗಳ ಆರಂಭದಲ್ಲಿ ಡೇಟಾವನ್ನು ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆಗೆ ಸಲ್ಲಿಸಿತ್ತು.

ಕೋವಿಡ್ -19 ಕುರಿತು ವಿಷಯ ತಜ್ಞರ ಸಮಿತಿಯು ಡೇಟಾವನ್ನು ಪರಿಶೀಲಿಸಿದೆ ಮತ್ತು ಸೋಮವಾರ ತುರ್ತು ಬಳಕೆ ದೃಢೀಕರಣ ಅರ್ಜಿಯ ಕುರಿತು ಚರ್ಚಿಸಿತು.

"ವಿವರವಾದ ಚರ್ಚೆಯ ನಂತರ, ಕೆಲವು ಪರಿಸ್ಥಿತಿಗಳಿಗೆ ಒಳಪಟ್ಟು ತುರ್ತು ಸಂದರ್ಭಗಳಲ್ಲಿ ನಿರ್ಬಂಧಿತ ಬಳಕೆಗಾಗಿ 2 ರಿಂದ 18 ವರ್ಷ ವಯಸ್ಸಿನವರಿಗೆ ಲಸಿಕೆಯ ಮಾರುಕಟ್ಟೆ ಅನುಮತಿಯನ್ನು ನೀಡಲು ಸಮಿತಿಯು ಶಿಫಾರಸು ಮಾಡಿದೆ" ಎಂದು ಎಸ್‌ಇಸಿ ತನ್ನ ಶಿಫಾರಸುಗಳಲ್ಲಿ ಉಲ್ಲೇಖಿಸಿರುವುದಾಗಿ ಮೂಲಗಳು ತಿಳಿಸಿವೆ.

English summary
With the state's health infrastructure "stretching its limits" to contain Covid-19 infections, the Mizoram government has asked all residents to wear face masks round-the-clock even inside homes and advised them not to dine together at the table.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X