ಕೋವಿಡ್ ಪ್ರಕರಣಗಳಲ್ಲಿ ಏರಿಕೆ: ಕರ್ನಾಟಕ ಸೇರಿ 6 ರಾಜ್ಯಗಳಿಗೆ ಪತ್ರ ಬರೆದ ಕೇಂದ್ರ
ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿರುವ ಮಹಾರಾಷ್ಟ್ರ, ಗುಜರಾತ್, ತೆಲಂಗಾಣ, ತಮಿಳುನಾಡು, ಕೇರಳ ಮತ್ತು ಕರ್ನಾಟಕಕ್ಕೆ ಪತ್ರ ಬರೆದು ಪರೀಕ್ಷೆ, ಚಿಕಿತ್ಸೆ, ಟ್ರ್ಯಾಕಿಂಗ್ ಮತ್ತು ಲಸಿಕೆಗೆ ಒತ್ತು ನೀಡುವಂತೆ ಸೂಚಿಸಿದ್ದಾರೆ.
ನವದೆಹಲಿ, ಮಾರ್ಚ್ 16: ದೇಶದ ಆರು ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ವೈರಲ್ ಸೋಂಕಿನ ಹಠಾತ್ ಹೆಚ್ಚಳವನ್ನು ನಿಯಂತ್ರಿಸುವತ್ತ ಗಮನಹರಿಸಬೇಕು ಎಂದು ಕೇಂದ್ರ ಸರ್ಕಾರವು ಕರ್ನಾಟಕ ಸೇರಿ ಆರು ರಾಜ್ಯಗಳಿಗೆ ಪತ್ರ ಬರೆದಿದೆ.
ಕೇಂದ್ರ ಆರೋಗ್ಯ ಕಾರ್ಯದರ್ಶಿಗಳು ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿರುವ ಮಹಾರಾಷ್ಟ್ರ, ಗುಜರಾತ್, ತೆಲಂಗಾಣ, ತಮಿಳುನಾಡು, ಕೇರಳ ಮತ್ತು ಕರ್ನಾಟಕಕ್ಕೆ ಪತ್ರ ಬರೆದು ಪರೀಕ್ಷೆ, ಚಿಕಿತ್ಸೆ, ಟ್ರ್ಯಾಕಿಂಗ್ ಮತ್ತು ಲಸಿಕೆಗೆ ಒತ್ತು ನೀಡುವಂತೆ ಸೂಚಿಸಿದ್ದಾರೆ. ಸಾಂಕ್ರಾಮಿಕ ಸೋಂಕಿನ ಹರಡುವಿಕೆಯನ್ನು ಸೂಚಿಸುವ ಹೆಚ್ಚಿನ ಸಂಖ್ಯೆಯ ಪ್ರಕರಣಗಳನ್ನು ವರದಿ ಮಾಡುವ ಕೆಲವು ರಾಜ್ಯಗಳಿದ್ದು, ಸೋಂಕನ್ನು ತಡೆಗಟ್ಟಲು ಮೌಲ್ಯಮಾಪನ ಆಧಾರಿತ ವಿಧಾನವನ್ನು ಅನುಸರಿಸುವ ಅವಶ್ಯಕತೆಯಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಗುರುವಾರ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ನಾಲ್ಕು ತಿಂಗಳ ಅಂತರದ ನಂತರ ಒಂದು ದಿನದಲ್ಲಿ 700 ಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ದಾಖಲಾಗಿವೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ ಏಕಾಏಕಿ 4,623 ಕ್ಕೆ ಏರಿಕೆಯಾಗಿದೆ. ಕಳೆದ ವರ್ಷ ನವೆಂಬರ್ 12 ರಂದು ದೇಶದಲ್ಲಿ 734 ಪ್ರಕರಣಗಳು ದಾಖಲಾಗಿದ್ದವು ಆದಾದ ಬಳಿಕ ಗುರುವಾರ ಹೆಚ್ಚಿನ ಪ್ರಕರಣಗಳು ದಾಖಲಾಗಿವೆ.
"ರಾಜ್ಯಗಳು ಕಟ್ಟುನಿಟ್ಟಾದ ನಿಗಾ ವಹಿಸಬೇಕು. ಸೋಂಕಿನ ಹರಡುವಿಕೆಯನ್ನು ನಿಯಂತ್ರಿಸಲು ಯಾವುದೇ ಕ್ಷೇತ್ರಗಳಲ್ಲಿ ಅಗತ್ಯವಿರುವ ಎಲ್ಲಾ ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುವುದು ಅತ್ಯಗತ್ಯ" ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿಗಳು ಪತ್ರದಲ್ಲಿ ತಿಳಿಸಿದ್ದಾರೆ. ಕೋವಿಡ್‌ನ ಪರಿಸ್ಥಿತಿಯನ್ನು ಸೂಕ್ಷ್ಮ ಮಟ್ಟದಲ್ಲಿ ಪರೀಕ್ಷಿಸಲು ಮತ್ತು ಕೋವಿಡ್ ತ್ವರಿತ ಮತ್ತು ಪರಿಣಾಮಕಾರಿ ನಿರ್ವಹಣೆಗಾಗಿ ಅಗತ್ಯ ಕ್ರಮಗಳ ಅನುಷ್ಠಾನದ ಮೇಲೆ ಗಮನಹರಿಸುವಂತೆ ಪತ್ರದಲ್ಲಿ ಸೂಚಿಸಲಾಗಿದೆ.
ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಶನಿವಾರದಂದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದ್ದು, ಕೆಲವು ರಾಜ್ಯಗಳಲ್ಲಿ ಕೋವಿಡ್ ಪರೀಕ್ಷಾ ಪಾಸಿಟಿವಿಟಿ ದರಗಳು ಕ್ರಮೇಣ ಏರಿಕೆಯಾಗುತ್ತಿವೆ. ಇದನ್ನು ತ್ವರಿತವಾಗಿ ಪರಿಹರಿಸಬೇಕು ಎಂದು ಹೇಳಿದ್ದರು.

ಕಳೆದ 24 ಗಂಟೆಯಲ್ಲಿ 618 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ದೇಶದಲ್ಲಿ ಒಟ್ಟು ಇದುವರೆಗೆ ಸಕ್ರಿಯ ಪ್ರಕರಣಗಳು 4,197 ಕ್ಕೆ ಏರಿಕೆಯಾಗಿದೆ. ಒಟ್ಟು ಐದು ಮಂದಿ ಕಳೆದ 24 ಗಂಟೆಯಲ್ಲಿ ಕೊರೊನಾದಿಂದ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ. ಕೋವಿಡ್ 5 ಸಾವುಗಳ ಪೈಕಿ ಎರಡು ಕರ್ನಾಟಕದಲ್ಲಿ, ಎರಡು ಮಹಾರಾಷ್ಟ್ರ ರಾಜ್ಯದಲ್ಲಿ ಹಾಗೂ ಒಂದು ಸಾವು ಉತ್ತರಾಖಂಡದಲ್ಲಿ ವರದಿಯಾಗಿದೆ.
-
Pomegranate Juice Benefits: 6 ದಿನಗಳಲ್ಲಿ ಕಾಣುವ ಆರೋಗ್ಯ ಬದಲಾವಣೆಗಳು -
ಮನೆಯಲ್ಲಿ ಕಸದ ಬುಟ್ಟಿ ಎಲ್ಲಿ ಇಡಬೇಕು? ಈ ವಾಸ್ತು ನಿಯಮಗಳು ತಿಳಿದುಕೊಳ್ಳಿ -
Top 3 Job Sectors: 2026ರಲ್ಲಿ ಯಾವ ಕ್ಷೇತ್ರ ಆಯ್ಕೆ ಮಾಡಬೇಕು? ಟಾಪ್ 3 ಉದ್ಯೋಗ ವಲಯಗಳು -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ












Click it and Unblock the Notifications