Covid Cases in India : 109 ದಿನಗಳ ನಂತರ ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚಳ
ಆರು ರಾಜ್ಯಗಳಾದ ಮಹಾರಾಷ್ಟ್ರ, ಗುಜರಾತ್, ತೆಲಂಗಾಣ, ತಮಿಳುನಾಡು, ಕೇರಳ ಮತ್ತು ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳು ವರದಿಯಾಗುತ್ತಿವೆ.
ನವದೆಹಲಿ, ಮಾರ್ಚ್ 17: ದೇಶದಲ್ಲಿ ಇತ್ತೀಚೆಗೆ ಕೊರೊನಾ ಪ್ರಕರಣಗಳಲ್ಲಿ ಏರಿಕೆ ಕಂಡು ಬರುತ್ತಿದ್ದು, ಕೇಂದ್ರ ಆರೋಗ್ಯ ಸಚಿವಾಲಯದ ಇತ್ತೀಚಿನ ಅಂಕಿಅಂಶಗಳ ಪ್ರಕಾರ ಭಾರತದಲ್ಲಿ ಶುಕ್ರವಾರ 796 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 109 ದಿನಗಳ ನಂತರ 5,000ರ ಗಡಿ ದಾಟಿದೆ.
ಒಂದೇ ದಿನ 796 ಪ್ರಕರಣಗಳು ದಾಖಲಾದ ಕಾರಣ ಸಕ್ರಿಯ ಪ್ರಕರಣಗಳ ಸಂಖ್ಯೆ 5,026 ಕ್ಕೆ ಏರಿದೆ, ಇದರಿಂದ ಒಟ್ಟು ವರದಿಯಾಗುವ ಸೋಂಕುಗಳ 0.01% ಹೆಚ್ಚಾಗಿದೆ. ಆದರೆ ಪ್ರಕರಣದ ಸಾವಿನ ಪ್ರಮಾಣವು 1.19% ದಾಖಲಾಗುತ್ತಿದೆ. ಈಗ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4.46 ಕೋಟಿಗೆ (4,46,93,506) ತಲುಪಿದೆ. ಒಂದೇ ದಿನ ಐದು ಸಾವುಗಳು ದಾಖಲಾಗಿದ್ದು, ಒಟ್ಟು ಸಾವಿನ ಸಂಖ್ಯೆ 5,30,795 ಕ್ಕೆ ಏರಿದೆ ಎಂದು ಆರೋಗ್ಯ ಸಚಿವಾಲಯದ ಅಂಕಿಅಂಶಗಳು ಬಹಿರಂಗಪಡಿಸಿವೆ. ಒಟ್ಟು ಚೇತರಿಕೆಯ ಸಂಖ್ಯೆಯು 4,41,57,685 ಕ್ಕೆ ಏರಿದ್ದು ರಾಷ್ಟ್ರೀಯ ಚೇತರಿಕೆ ದರವು 98.80% ರಷ್ಟಿದೆ.

ದೈನಂದಿನ ಕೊರೊನಾ ವೈರಸ್ ಪ್ರಕರಣಗಳಲ್ಲಿ ಏರಿಕೆ ಕಂಡು ಬಂದಿರುವುದರಿಂದ, ಆರೋಗ್ಯ ಸಚಿವಾಲಯವು ಗುರುವಾರ ಹೆಚ್ಚು ಪ್ರಕರಣಗಳನ್ನು ವರದಿ ಮಾಡುತ್ತಿರುವ ಆರು ರಾಜ್ಯಗಳಾದ ಮಹಾರಾಷ್ಟ್ರ, ಗುಜರಾತ್, ತೆಲಂಗಾಣ, ತಮಿಳುನಾಡು, ಕೇರಳ ಮತ್ತು ಕರ್ನಾಟಕಕ್ಕೆ ಪತ್ರ ಬರೆದಿದೆ. ಕೊರೊನಾ ಸೋಂಕಿನ ಹರಡುವಿಕೆ ತಡೆಗಟ್ಟಲು ಮತ್ತು ನಿಯಂತ್ರಿಸಲು ಮೌಲ್ಯಮಾಪನ ಆಧಾರಿತ ವಿಧಾನವನ್ನು ಅನುಸರಿಸಲು ಸೂಚಿಸಿದೆ.
ಮಹಾರಾಷ್ಟ್ರ, ಗುಜರಾತ್, ತೆಲಂಗಾಣ, ತಮಿಳುನಾಡು, ಕೇರಳ ಮತ್ತು ಕರ್ನಾಟಕಕ್ಕೆ ಬರೆದ ಪತ್ರದಲ್ಲಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, "ಕೆಲವು ರಾಜ್ಯಗಳು ಹೆಚ್ಚಿನ ಸಂಖ್ಯೆಯ ಪ್ರಕರಣಗಳನ್ನು ವರದಿ ಮಾಡುತ್ತಿವೆ. ರಾಜ್ಯಗಳು ಕಟ್ಟುನಿಟ್ಟಾದ ನಿಗಾ ವಹಿಸಬೇಕು. ಸೋಂಕಿನ ಹರಡುವಿಕೆಯನ್ನು ನಿಯಂತ್ರಿಸಲು ಯಾವುದೇ ಕ್ಷೇತ್ರಗಳಲ್ಲಿ ಅಗತ್ಯವಿರುವ ಎಲ್ಲಾ ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುವುದು ಅತ್ಯಗತ್ಯ" ಎಂದು ಹೇಳಿದ್ದರು.

ಕೋವಿಡ್‌ನ ಪರಿಸ್ಥಿತಿಯನ್ನು ಸೂಕ್ಷ್ಮ ಮಟ್ಟದಲ್ಲಿ ಪರೀಕ್ಷಿಸಲು ಮತ್ತು ಕೋವಿಡ್ ತ್ವರಿತ ಮತ್ತು ಪರಿಣಾಮಕಾರಿ ನಿರ್ವಹಣೆಗಾಗಿ ಅಗತ್ಯ ಕ್ರಮಗಳ ಅನುಷ್ಠಾನದ ಮೇಲೆ ಗಮನಹರಿಸುವಂತೆ ಪತ್ರದಲ್ಲಿ ಸೂಚಿಸಲಾಗಿತ್ತು. ಗುರುವಾರ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ನಾಲ್ಕು ತಿಂಗಳ ಅಂತರದ ನಂತರ ಒಂದು ದಿನದಲ್ಲಿ 700 ಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ದಾಖಲಾಗಿವೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ ಏಕಾಏಕಿ 4,623 ಕ್ಕೆ ಏರಿಕೆಯಾಗಿತ್ತು.
ಮಾರ್ಚ್ 15 ಕ್ಕೆ ಮಹಾರಾಷ್ಟ್ರವು ಒಮದು ವಾರದಲ್ಲಿ 355 ರಿಂದ 668 ಪ್ರಕರಣಗಳನ್ನು ವರದಿ ಮಾಡಿತ್ತು. ಗುಜರಾತ್ 279 ಹೊಸ ಪ್ರಕರಣಗಳೊಂದಿಗೆ 1.11% ನಷ್ಟು ಪಾಸಿಟಿವ್ ದರವನ್ನು ವರದಿ ಮಾಡಿದೆ. ಮಾರ್ಚ್ 8 ಕ್ಕೆ ತೆಲಂಗಾಣದಲ್ಲಿ 132 ಕೋವಿಡ್ ಪ್ರಕರಣಗಳಿದ್ದರೇ, ಮಾರ್ಚ್ 15 ಕ್ಕೆ 267 ಪ್ರಕರಣಗಳಿಗೆ ಏರಿಕೆಯಾತ್ತು. ತಮಿಳುನಾಡಿನಲ್ಲಿ ಒಂದು ವಾರದ ಅಂತರದಲ್ಲಿ 170 ರಿಂದ 258 ಕ್ಕೆ ಏರಿಕೆಯಾಗಿದೆ. ಕೇರಳ ಮತ್ತು ಕರ್ನಾಟಕ ಅನುಕ್ರಮವಾಗಿ 2.64% ಮತ್ತು 2.77% ಪಾಸಿಟಿವ್ ದರವನ್ನು ವರದಿ ಮಾಡಿದೆ.
ಆರೋಗ್ಯ ಸಚಿವಾಲಯದ ವೆಬ್‌ಸೈಟ್ ಮಾಹಿತಿ ಪ್ರಕಾರ, ಇಲ್ಲಿಯವರೆಗೆ ದೇಶದಲ್ಲಿ 220.64 ಕೋಟಿ ಕೋವಿಡ್ ಲಸಿಕೆಯನ್ನು ನೀಡಲಾಗಿದೆ. ಆದರೂ ದೇಶಾದ್ಯಂತ ವೈರಲ್ ಇನ್ಫ್ಲುಯೆನ್ಸ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ಸರ್ಕಾರವು ಎಚ್ಚರಿಕೆ ತೆಗೆದುಕೊಳ್ಳುತ್ತಿದ್ದು, ಗಂಟಲು ನೋವು ಜ್ವರ, ದೇಹನೋವು, ಆಯಾಸ ಇತ್ಯಾದಿಗಳಂತಹ ಕೋವಿಡ್ ರೋಗಲಕ್ಷಣಗಳನ್ನು ಹೋಲುವ ರೋಗಿಗಳ ಮೇಲೆ ಗಮನಹರಿಸುತ್ತಿದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications