Gujarat Rains: ಗುಜರಾತ್‌ನಲ್ಲಿ ಭಾರೀ ಮಳೆ: ರಸ್ತೆಗಳು ಜಲಾವೃತ, ಕಾರುಗಳು ಮುಳುಗಡೆ!

ಗುಜರಾತ್‌ನಲ್ಲಿ ಮಂಗಳವಾರ ಭಾರೀ ಮಳೆಯಾಗಿದ್ದು, ಹಲವು ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದೆ. ಧಾರಾಕಾರ ಮಳೆಯಿಂದಾಗಿ ರಾಜ್‌ಕೋಟ್, ಸೂರತ್ ಮತ್ತು ಗಿರ್ ಸೋಮನಾಥ್ ಜಿಲ್ಲೆಗಳು ಜಲಾವೃತವಾಗಿದ್ದು, ಕಳೆದ ಕೆಲವು ಗಂಟೆಗಳಲ್ಲಿ ರಾಜ್ಯದಲ್ಲಿ 300 ಮಿಮೀ ಮಳೆ ಸುರಿದಿದ್ದು, 70 ಜನರನ್ನು ಸ್ಥಳಾಂತರಿಸಲಾಗಿದೆ.

ಗುಜರಾತ್‌ನ ಪ್ರವಾಹ ಪರಿಸ್ಥಿತಿ ಯಾವ ಮಟ್ಟದಲ್ಲಿದೆ ಅಂದರೆ ಮಳೆ ನೀರಿನಲ್ಲಿ ಮುಳುಗಿದ ವಾಹನಗಳು ಆಟಿಕೆಯಂತೆ ಕಾಣಿಸುತ್ತಿವೆ. ಸಾಮಾಜಿಕ ಮಾಧ್ಯಮದಲ್ಲಿ ಈ ದೃಶ್ಯಗಳು ವೈರಲ್ ಆಗಿವೆ. ಅನೇಕ ಪ್ರದೇಶಗಳಲ್ಲಿ ರಸ್ತೆಗಳು ಜಲಾವೃತಗೊಂಡಿವೆ. ಪ್ರವಾಹದಿಂದಾಗಿ ಅಂಗಡಿಗಳು ಮುಚ್ಚಲ್ಪಟ್ಟಿವೆ.

Roads flooded, cars submerged due to heavy rain in Gujarat!

ಭಾರತೀಯ ಹವಾಮಾನ ಇಲಾಖೆ (IMD) ಸೌರಾಷ್ಟ್ರದ ಕೆಲವು ಜಿಲ್ಲೆಗಳು ಮತ್ತು ದಕ್ಷಿಣ ಗುಜರಾತ್ ಪ್ರದೇಶಗಳಲ್ಲಿ ಮುಂಬರುವ ದಿನಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆಯ ಮುನ್ಸೂಚನೆ ನೀಡಿದೆ.

ಸ್ಟೇಟ್ ಎಮರ್ಜೆನ್ಸಿ ಆಪರೇಷನ್ ಸೆಂಟರ್ (ಎಸ್‌ಇಒಸಿ) ಪ್ರಕಾರ, ಗಿರ್ ಸೋಮನಾಥ ಜಿಲ್ಲೆಯ ಸೂತ್ರಪದ ತಾಲೂಕಿನಲ್ಲಿ ಮಂಗಳವಾರ ಬೆಳಗ್ಗೆ 6 ಗಂಟೆಯಿಂದ ಕೇವಲ 14 ಗಂಟೆಗಳಲ್ಲಿ 345 ಮಿಮೀ ಮಳೆಯಾಗಿದ್ದು, ರಾಜ್‌ಕೋಟ್ ಜಿಲ್ಲೆಯ ಧೋರಾಜಿ ತಾಲೂಕಿನಲ್ಲಿ 250 ಮಿಮೀ ಮಳೆಯಾಗಿದೆ.

ಕೇವಲ ಎರಡು ಗಂಟೆಗಳಲ್ಲಿ 145 ಮಿಮೀ ದಾಖಲಾಗಿದೆ. ಸೂರತ್‌ನಲ್ಲಿ ಭಾರಿ ಮಳೆಯಾಗಿದ್ದು, ಹಗಲಿನಲ್ಲಿ ಸುಮಾರು 104 ಮಿಮೀ ಮಳೆ ದಾಖಲಾಗಿದೆ. ಜುನಾಗಢ ಜಿಲ್ಲೆಯ ಕೆಲವು ಭಾಗಗಳಲ್ಲಿ ಧಾರಾಕಾರ ಮಳೆಯಾಗಿದೆ. ಭಾರೀ ಪ್ರಮಾಣದ ನೀರಿನ ಒಳಹರಿವಿನಿಂದಾಗಿ ಗುಜರಾತ್‌ನಲ್ಲಿ ಹೈ ಅಲರ್ಟ್‌ ಘೋಷಣೆ ಮಾಡಲಾಗಿದೆ. ಜೊತೆಗೆ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಸ್ತುತ ಮಳೆಯ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಗಳನ್ನು (ಎಸ್‌ಡಿಆರ್‌ಎಫ್) ಹೈ ಅಲರ್ಟ್‌ ಘೋಷಣೆ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+