Delhi Airport: ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1 ರ ಛಾವಣಿ ಕುಸಿತ; ಓರ್ವ ಸಾವು

ನವದೆಹಲಿ, ಜೂನ್. 28: ಇಷ್ಟು ದಿನ ಬಿಸಿಲಿನಿಂದ ತತ್ತರಿಸಿದ್ದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭರ್ಜರಿ ಮಳೆಯಾಗಿದೆ. ಇಡೀ ರಾತ್ರಿ ಸುರಿದ ಭಾರೀ ಮಳೆಯ ಪರಿಣಾಮವಾಗಿ ಶುಕ್ರವಾರ ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1 ರಲ್ಲಿ ಛಾವಣಿ ಕುಸಿದು ಓರ್ವ ಸಾವನ್ನಪ್ಪಿದ್ದಾರೆ. ಆರು ಮಂದಿಗೆ ಗಾಯಗಳಾಗಿವೆ.

ಟರ್ಮಿನಲ್‌ 1 ರಲ್ಲಿ ಬದಿಯಲ್ಲಿ ನಿಲ್ಲಿಸಲಾದ ಟ್ಯಾಕ್ಸಿಗಳ ಮೇಲೆ ಛಾವಣಿ ಬಿದ್ದಿದೆ. ಕಾರು, ಟ್ಯಾಕ್ಸಿಗಳು ಜಖಂ ಆಗಿವೆ. ಘಟನೆಯ ನಂತರ ವಿಮಾನ ನಿಲ್ದಾಣದ ಅಧಿಕಾರಿಗಳು ಟರ್ಮಿನಲ್‌ 1 ರಿಂದ ನಿಂದ ಎಲ್ಲಾ ನಿರ್ಗಮನವನ್ನು ಸ್ಥಗಿತಗೊಳಿಸಿದ್ದಾರೆ. ಮುಂಜಾನೆ 5.30ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Roof Collapse at Delhi Airport s Terminal 1 One person died

"ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್‌ 1 ರ ಛಾವಣಿ ಕುಸಿತದ ಘಟನೆಯನ್ನು ನಾನು ವೈಯಕ್ತಿಕವಾಗಿ ಗಮನಿಸುತ್ತಿದ್ದೇನೆ. ದೆಹಲಿ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಘಟನಾ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದಾರೆ. ಅಲ್ಲದೆ T1 ನಲ್ಲಿ ಎಲ್ಲಾ ಸಂತ್ರಸ್ತ ಪ್ರಯಾಣಿಕರಿಗೆ ಸಹಾಯ ಮಾಡಲು ವಿಮಾನಯಾನ ಸಂಸ್ಥೆಗಳಿಗೆ ಸಲಹೆ ನೀಡಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ" ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಾಪು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

"ಇಂದು ಮುಂಜಾನೆಯಿಂದ ಭಾರೀ ಮಳೆಯಿಂದಾಗಿ, ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1 ರ ಹಳೆಯ ಡಿಪಾರ್ಚರ್ ಫೋರ್ಕೋರ್ಟ್‌ನಲ್ಲಿ ಮೇಲಾವರಣದ ಒಂದು ಭಾಗವು ಮುಂಜಾನೆ 5 ಗಂಟೆಯ ಸುಮಾರಿಗೆ ಕುಸಿದಿದೆ. ಕೆಲವು ಮಂದಿಗೆ ಗಾಯಗಳಾಗಿರುವ ಬಗ್ಗೆ ವರದಿಯಾಗಿವೆ. ತುರ್ತು ಸಿಬ್ಬಂದಿ ಎಲ್ಲಾ ಅಗತ್ಯ ನೆರವು ಮತ್ತು ಗಾಯಾಳುಗಳಿಗೆ ವೈದ್ಯಕೀಯ ನೆರವು ನೀಡಲು ಕೆಲಸ ಮಾಡುತ್ತಿದ್ದಾರೆ" ಎಂದು ದೆಹಲಿ ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್ (DIAL) ವಕ್ತಾರರು ತಿಳಿಸಿದ್ದಾರೆ.

"ಈ ಘಟನೆಯ ಪರಿಣಾಮವಾಗಿ, ಟರ್ಮಿನಲ್ 1 ರಿಂದ ಎಲ್ಲಾ ನಿರ್ಗಮನಗಳನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ. ಸುರಕ್ಷತಾ ಕ್ರಮವಾಗಿ ಚೆಕ್-ಇನ್ ಕೌಂಟರ್‌ಗಳನ್ನು ಮುಚ್ಚಲಾಗಿದೆ. ಈ ಘಟನೆ ಬಗ್ಗೆ ನಾವು ವಿಷಾದಿಸುತ್ತೇವೆ ಮತ್ತು ಉಂಟಾದ ಯಾವುದೇ ಅನಾನುಕೂಲತೆಗಾಗಿ ಕ್ಷಮೆಯಾಚಿಸುತ್ತೇವೆ" ಎಂದು ವಕ್ತಾರರು ಸೇರಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+