ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಎಪಿ, ಬಿಜೆಪಿ ಧರಣಿ ನಾಟಕದಲ್ಲಿ ದೆಹಲಿಗರು ಅತಂತ್ರ: ರಾಹುಲ್

By Sachhidananda Acharya
|
Google Oneindia Kannada News

ನವದೆಹಲಿ, ಜೂನ್ 18: ಆಮ್ ಆದ್ಮಿ ಪಕ್ಷದ ನಾಯಕರು ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ನಿವಾಸದಲ್ಲಿ ಹಮ್ಮಿಕೊಂಡಿರುವ ಧರಣಿಯನ್ನು ಮುಂದುವರಿಸಿರುವ ನಡುವೆಯೇ, ಈ ಪ್ರತಿಭಟನೆಯನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನಾಟಕ ಎಂದು ಕರೆದಿದ್ದಾರೆ.

ಈ ಸಂಬಂಧ ಇಂದು ಟ್ಟೀಟ್ ಮಾಡಿರುವ ರಾಹುಲ್ ಗಾಂಧಿ, "ಎಲ್.ಜಿ. ಕಚೇರಿಯಲ್ಲಿ ದೆಹಲಿ ಮುಖ್ಯಮಂತ್ರಿ ಧರಣಿ ಕೂತಿದ್ದಾರೆ. ಮುಖ್ಯಮಂತ್ರಿ ನಿವಾಸದಲ್ಲಿ ಬಿಜೆಪಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ದೆಹಲಿ ಅಧಿಕಾರಿಗಳು ಪತ್ರಿಕಾಗೋಷ್ಠಿ ನಡೆಸುತ್ತಿದ್ದಾರೆ. ಗೊಂದಲ ಮತ್ತು ಅರಾಜಕತೆಯತ್ತ ಪರಿಹರಿಸುವ ಬದಲು ಇದರತ್ತ ಪ್ರಧಾನಿ ಕುರುಡರಾಗಿದ್ದಾರೆ. ಈ ನಾಟಕ ನಡೆಯುತ್ತಿರುವಾಗ ದೆಹಲಿಯ ಜನರು ಮಾತ್ರ ಸಂತ್ರಸ್ತರಾಗಿದ್ದಾರೆ," ಎಂದು ಅವರು ದೂರಿದ್ದಾರೆ.

ಬೈಜಾಲ್ ಅವರನ್ನು ಭೇಟಿಯಾಗಲು ಕೇಜ್ರಿವಾಲ್, ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಮತ್ತು ಇತರ ಸಚಿವರು ಕಳೆದ ಸೋಮವಾರದಿಂದ ಯತ್ನಿಸುತ್ತಿದ್ದಾರೆ. ಆದರೆ ಇದಕ್ಕೆ ಅನುಮತಿ ನೀಡುತ್ತಿಲ್ಲ. 'ಅಧಿಕಾರಿಗಳ ಪ್ರತಿಭಟನೆ ಕೊನೆಗೊಳಿಸಲು ಲೆಫ್ಟಿನೆಂಟ್ ಗವರ್ನರ್ ಮಧ್ಯ ಪ್ರವೇಶ ಮಾಡಬೇಕು. ಇದಲ್ಲದೆ ಮನೆ ಬಾಗಿಲಿಗೆ ಪಡಿತರ ವಿತರಣೆ ಯೋಜನೆಗೆ ಅನುಮತಿ ನೀಡಬೇಕು' ಎಂಬುದು ಕೇಜ್ರಿವಾಲ್ ಸರಕಾರದ ಬೇಡಿಕೆಯಾಗಿದೆ.

Rrahul Gandhi calls AAP, BJP protests as drama

ಬೈಜಾಲ್ ಭೇಟಿಗೆ ಅವಕಾಶ ನೀಡದೇ ಇದ್ದ ಹಿನ್ನೆಲೆಯಲ್ಲಿ, ಅವರೆಲ್ಲಾ ಬೈಜಾಲ್ ಕಚೇರಿಯ ವೇಯ್ಟಿಂಗ್ ರೂಂನಲ್ಲೇ ಜೂನ್ 11ರಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂಬಂಧ ಮಧ್ಯ ಪ್ರವೇಶ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೂ ಕೇಜ್ರಿವಾಲ್ ಮನವಿ ಮಾಡಿಕೊಂಡಿದ್ದಾರೆ. ಆದರೆ ಇದಕ್ಕೆ ಮೋದಿ ಸ್ಪಂದಿಸಿಲ್ಲ.

ಅರವಿಂದ್ ಕೇಜ್ರಿವಾಲ್ ಧರಣಿಗೆ ದೆಹಲಿ ಹೈಕೋರ್ಟ್ ಛೀಮಾರಿ! ಅರವಿಂದ್ ಕೇಜ್ರಿವಾಲ್ ಧರಣಿಗೆ ದೆಹಲಿ ಹೈಕೋರ್ಟ್ ಛೀಮಾರಿ!

ಕೇಜ್ರಿವಾಲ್ ಜೊತೆಗೆ ಧರಣಿ ಕೂತಿದ್ದ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಮತ್ತು ಆರೋಗ್ಯ ಸಚಿವ ಸತ್ಯೇಂದ್ರನಾಥ್ ಉಪವಾಸ ಧರಣಿಯನ್ನೂ ನಡೆಸುತ್ತಿದ್ದರು. ಇಂದು ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಆದರೆ ಅನಿಲ್ ಬೈಜಾಲ್ ಅವರ ನಿವಾಸದ ವೇಯ್ಟಿಂಗ್ ರೂಂನಲ್ಲಿ ಅರವಿಂದ ಕೇಜ್ರಿವಾಲ್ ಮತ್ತು ಗೋಪಾಲ್ ರೈ ತಮ್ಮ ಪ್ರತಿಭಟನೆ ಮುಂದುವರಿಸಿದ್ದಾರೆ.

English summary
As the AAP’s sit-in protest at Lieutenant Governor Anil Baijal's residence continues, Congress party president Rahul Gandhi on Monday call the protest a 'drama'.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X