ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅತಿ ಹೆಚ್ಚು ಮಕ್ಕಳನ್ನು ಹೊಂದಿರುವ ಪೋಷಕರಿಗೆ 1 ಲಕ್ಷ ರೂ. ಬಹುಮಾನ

|
Google Oneindia Kannada News

ಮಿಜೋರಾಂ, ಜೂನ್ 22: ಅತಿ ಹೆಚ್ಚು ಮಕ್ಕಳನ್ನು ಪಡೆದರೆ 1 ಲಕ್ಷ ರೂ ಬಹುಮಾನ ನೀಡುವುದಾಗಿ ಘೋಷಿಸಿ ಸಚಿವರು ಭಾರಿ ವಿವಾದಕ್ಕೆ ಕಾರಣರಾಗಿದ್ದಾರೆ.

ಸಣ್ಣ ಮಿಝೊ ಸಮುದಾಯಗಳಲ್ಲಿ ಜನಸಂಖ್ಯೆಯ ಬೆಳವಣಿಗೆಯನ್ನು ಉತ್ತೇಜಿಸಲು ಮಿಜೋರಾಂ ಸಚಿವರೊಬ್ಬರು ತಮ್ಮ ಕ್ಷೇತ್ರದಲ್ಲಿ ಅತಿ ಹೆಚ್ಚು ಮಕ್ಕಳನ್ನು ಹೊಂದಿರುವ ಜೀವಂತ ಪೋಷಕರಿಗೆ 1 ಲಕ್ಷ ರೂ. ನಗದು ಪ್ರೋತ್ಸಾಹ ಧನವನ್ನು ನೀಡುವುದಾಗಿ ಘೋಷಿಸಿದ್ದಾರೆ.

 ಮಕ್ಕಳಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಕೇಂದ್ರದ ಮೊದಲ ಕ್ರಮವೇನು? ಮಕ್ಕಳಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಕೇಂದ್ರದ ಮೊದಲ ಕ್ರಮವೇನು?

ಈ ಬಹುಮಾನವನ್ನು ಘೋಷಿಸಿರುವ ಕ್ರೀಡಾ ಸಚಿವ ರಾಬರ್ಟ್ ರೊಮಾವಿಯಾ ರಾಯ್ಟೆ ಕನಿಷ್ಠ ಮಕ್ಕಳ ಸಂಖ್ಯೆಯನ್ನು ಉಲ್ಲೇಖಿಸಿಲ್ಲ.ಭಾರತದ ಹಲವು ರಾಜ್ಯಗಳಲ್ಲಿ ಜನಸಂಖ್ಯಾ ನಿಯಂತ್ರಣ ನೀತಿಯನ್ನು ಪ್ರತಿಪಾದಿಸುತ್ತಿರುವ ಸಮಯದಲ್ಲಿ ಈ ಘೋಷಣೆ ಮಾಡಲಾಗಿದೆ.

Rs.1 Lakh Cash For Parents With HIghest Number Of Children: Mizoram Minister

ಮಿಝೋ ಬುಡಕಟ್ಟು ಪಂಗಡದ ಉಳಿವು ಮತ್ತು ಅಭಿವೃದ್ಧಿಗೆ ಜನಸಂಖ್ಯೆ ಹೆಚ್ಚಿಸುವ ಅಗತ್ಯವಿದೆ. ನಾನು ಈಗಲೂ ಹೇಳಿಕೆ ಬದ್ಧನಾಗಿದ್ದು, ಹೆಚ್ಚು ಮಕ್ಕಳನ್ನು ಹೊಂದಿರುವ ಪೋಷಕರಿಗೆ 1 ಲಕ್ಷ ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಭಾನುವಾರ ಅಪ್ಪಂದಿರ ದಿನ ಸಂದರ್ಭದಲ್ಲಿ ರಾಯ್ಟೆ ಅವರು ತಮ್ಮ ಐಜಾಲ್ ಈಸ್ಟ್‌ 2 ವಿಧಾನಸಭಾ ಕ್ಷೇತ್ರದೊಳಗೆ ಹೆಚ್ಚಿನ ಸಂಖ್ಯೆಯ ಮಕ್ಕಳನ್ನು ಹೊಂದಿರುವ 1 ಲಕ್ಷ ರೂ. ನಗದು ಪ್ರೋತ್ಸಾಹ ಧನ ನೀಡುವುದಾಗಿ ಗೋಷಿಸಿದರು.

ವ್ಯಕ್ತಿಗೆ ಪ್ರಮಾಣಪತ್ರ ಮತ್ತು ಟ್ರೋಫಿ ಕೂಡ ಸಿಗಲಿದೆ ಎಂದು ಸಚಿವರು ಸೋಮವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.

English summary
A Mizoram minister has announced a cash incentive of ₹1 lakh to a living parent with the highest number of children in his constituency to encourage population growth among the demographically small Mizo communities.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X