ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Video: ಮಾಸ್ಕ್ ಧರಿಸದಿದ್ದರೆ 5,000 ರೂ. ದಂಡದ ಜೊತೆ 8 ದಿನ ಜೈಲುಶಿಕ್ಷೆ!

|
Google Oneindia Kannada News

ನವದೆಹಲಿ, ಜುಲೈ 09: ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದಿಲ್ಲ, ನಾವು ಮಾಸ್ಕ್ ಹಾಕುವುದಿಲ್ಲ ಎಂದು ಭಂಡಧೈರ್ಯ ತೋರಿಸಿದರೆ 5,000 ರೂಪಾಯಿ ದಂಡದ ಜೊತೆಗೆ 8 ದಿನ ಜೈಲಿನಲ್ಲಿ ಮುದ್ದೆ ಮುರಿಯಬೇಕಾಗುತ್ತದೆ.

ಈ ಕಠಿಣ ನಿಯಮದ ಜಾರಿಯಲ್ಲಿ ಇರುವುದು ಯಾವುದೇ ವಿದೇಶದಲ್ಲಿ ಅಲ್ಲ. ಹಿಮಾಚಲ ಪ್ರದೇಶದ ಪ್ರಸಿದ್ಧ ಪ್ರವಾಸಿ ತಾಣ ಎನಿಸಿರುವ ಮನಾಲಿಯಲ್ಲಿ ಪ್ರವಾಸಿಗರು ಬೇಕಾಬಿಟ್ಟಿ ಓಡಾಟ ಹೆಚ್ಚಾಗಿರುವ ಹಿನ್ನೆಲೆ ಮತ್ತೊಮ್ಮೆ ಕಟ್ಟುನಿಟ್ಟಿನ ನಿರ್ಬಂಧವನ್ನು ಜಾರಿಗೊಳಿಸಲಾಗಿದೆ. ಸಾಮಾಜಿಕ ಅಂತರವಿಲ್ಲ, ಮಾಸ್ಕ್ ಧರಿಸದೇ ಜನರು ತೀವ್ರ ನಿರ್ಲಕ್ಷ್ಯ ವಹಿಸಿರುವುದು ಫೋಟೋ ಮತ್ತು ವಿಡಿಯೋಗಳಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ.

ಇದು ಅಪಾಯಕಾರಿ ನಡೆ; ಆರೋಗ್ಯ ಸಚಿವಾಲಯದಿಂದ ಜನರಿಗೆ ಎಚ್ಚರಿಕೆಇದು ಅಪಾಯಕಾರಿ ನಡೆ; ಆರೋಗ್ಯ ಸಚಿವಾಲಯದಿಂದ ಜನರಿಗೆ ಎಚ್ಚರಿಕೆ

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಭಯವಿಲ್ಲದೇ ನಡುರಸ್ತೆಗಳಲ್ಲಿ ರಾಜಾರೋಷವಾಗಿ ಮಾಸ್ಕ್ ಧರಿಸದೇ ಓಡಾಡುತ್ತಿದ್ದಾರೆ. ಇದರಿಂದ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಅಪಾಯವಿದೆ. ಅದನ್ನು ಅರಿತುಕೊಂಡು ಪ್ರವಾಸಿಗರಿಗೆ ಬಿಸಿ ಮುಟ್ಟಿಸುವುದಕ್ಕಾಗಿ ಸರ್ಕಾರ ಕಠಿಣ ನಿಯಮವನ್ನು ಮತ್ತೊಮ್ಮೆ ಜಾರಿಗೊಳಿಸಿದೆ.

5 ಸಾವಿರ ರೂ. ದಂಡದ ಜೊತೆ 8 ದಿನ ಜೈಲು

5 ಸಾವಿರ ರೂ. ದಂಡದ ಜೊತೆ 8 ದಿನ ಜೈಲು

ಹಿಮಾಚಲ ಪ್ರದೇಶದ ಮನಾಲಿಯಲ್ಲಿ ಮಾಸ್ಕ್ ಧರಿಸದೇ ಸಾರ್ವಜನಿಕವಾಗಿ ಓಡಾಡಿದರೆ ಅಂಥವರಿಗೆ 5 ಸಾವಿರ ರೂಪಾಯಿ ದಂಡವನ್ನು ವಿಧಿಸಲಾಗುತ್ತದೆ. ಇದರ ಜೊತೆಗೆ ಎಂಟು ದಿನ ಜೈಲು ವಾಸ ಅನುಭವಿಸಬೇಕಾಗುತ್ತದೆ ಎಂದು ಸ್ಥಳೀಯ ಆಡಳಿತ ಮಂಡಳಿ ಎಚ್ಚರಿಕೆ ನೀಡಿದೆ. ಆ ಮೂಲಕ ಮಾಸ್ಕ್ ಬಳಕೆಯನ್ನು ಕಟ್ಟುನಿಟ್ಟುಗೊಳಿಸುವ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಿದೆ.

ಮೊದಲೇ ಎಚ್ಚರಿಕೆ ಸಂದೇಶ ನೀಡಿದ್ದ ಆರೋಗ್ಯ ಕಾರ್ಯದರ್ಶಿ

ಮೊದಲೇ ಎಚ್ಚರಿಕೆ ಸಂದೇಶ ನೀಡಿದ್ದ ಆರೋಗ್ಯ ಕಾರ್ಯದರ್ಶಿ

"ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆ ಇನ್ನೂ ನಿಂತಿಲ್ಲ. ಕೊವಿಡ್-19 ಭೀತಿ ಇಲ್ಲದೇ ಶಿಷ್ಟಾಚಾರವನ್ನು ಪಾಲಿಸದೇ ನಿಯಮಗಳನ್ನು ಉಲ್ಲಂಘಿಸಿದರೆ ಮತ್ತೆ ನಿರ್ಬಂಧ ವಿಧಿಸಲಾಗುವುದು," ಎಂದು ಹಿಮಾಚಲ ಪ್ರದೇಶದ ಆರೋಗ್ಯ ಇಲಾಖೆ ರಾಜ್ಯ ಕಾರ್ಯದರ್ಶಿ ಅನಿಲ್ ಕುಮಾರ್ ಖಾಚಿ ಎರಡು ದಿನಗಳ ಹಿಂದೆಯಷ್ಟೇ ಎಚ್ಚರಿಕೆ ನೀಡಿದ್ದರು. ಕೊರೊನಾವೈರಸ್ ಮಾರ್ಗಸೂಚಿಗಳ ಅಡಿ ಎಲ್ಲ ನಿಯಮ ಕಟ್ಟುನಿಟ್ಟಾಗಿ ಪಾಲನೆ ಆಗುವಂತೆ ನೋಡಿಕೊಳ್ಳಲು ನಾವು ಈಗಾಗಲೇ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. ಎಲ್ಲ ವ್ಯಾಪಾರಿಗಳು ಮತ್ತು ಸಾರ್ವಜನಿಕರು ಈ ಶಿಷ್ಟಾಚಾರಗಳ ಪಾಲನೆ ಮಾಡಬೇಕು," ಎಂದು ಅನಿಲ್ ಕುಮಾರ್ ಖಾಚಿ ಹೇಳಿದ್ದರು.

ಕೇಂದ್ರ ಆರೋಗ್ಯ ಕಾರ್ಯದರ್ಶಿ ಲಾವ್ ಅಗರ್ವಾಲ್ ಎಚ್ಚರಿಕೆ

ಕೇಂದ್ರ ಆರೋಗ್ಯ ಕಾರ್ಯದರ್ಶಿ ಲಾವ್ ಅಗರ್ವಾಲ್ ಎಚ್ಚರಿಕೆ

"ದೇಶದಲ್ಲಿ ಲಾಕ್‌ಡೌನ್‌ ಸಡಿಲಗೊಳಿಸುತ್ತಿದ್ದಂತೆ ಹಿಮಾಚಲ ಪ್ರದೇಶದಲ್ಲಿ ಜನಸಾಗರವೇ ನೆರೆದಿದೆ. ಕೊವಿಡ್-19 ಶಿಷ್ಟಾಚಾರ ಮತ್ತು ನಿಯಮಗಳ ಉಲ್ಲಂಘನೆ ಆಗುತ್ತಿರುವುದು ಇಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ. ಕೇಂದ್ರ ಸರ್ಕಾರದ ಸೂಚನೆಗಳು ಪಾಲನೆ ಆಗದಿದ್ದರೆ ನಾವು ಮತ್ತೆ ಲಾಕ್‌ಡೌನ್‌ ಜಾರಿಗೊಳಿಸುತ್ತೇವೆ," ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್ ಅಗರ್ವಾಲ್ ಎಚ್ಚರಿಸಿದ್ದಾರೆ.

Recommended Video

ಸಲುಗೆ ಕೊಟ್ಟಿದ್ದು ಜಾಸ್ತಿ ಆಯ್ತಾ ಎಂದು ಅಭಿಮಾನಿ ತಲೆಗೆ ಹೊಡೆದ ಡಿಕೆಶಿ | Oneindia Kannada

ಹಿಮಾಚಲ ಪ್ರದೇಶದಲ್ಲಿ ಕೊವಿಡ್-19 ಸೋಂಕಿತರು

ಕಳೆದ 24 ಗಂಟೆಗಳಲ್ಲಿ ಹಿಮಾಚಲ ಪ್ರದೇಶದಲ್ಲಿ 128 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2,03,245ಕ್ಕೆ ಏರಿಕೆಯಾಗಿದೆ. ಒಟ್ಟು 1307 ಸಕ್ರಿಯ ಪ್ರಕರಣಗಳಿದ್ದು, 3470 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.

English summary
Rs 5,000 Fine And 8 Days Jail For Tourists Found Without Face Masks At Manali.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X