ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತ್ ನೆಟ್ ಯೋಜನೆ: ಭಾರತದ ಮನೆ ಮನೆಗೂ ಇಂಟರ್ ನೆಟ್ ಸೇವೆ!

|
Google Oneindia Kannada News

Recommended Video

Union Budget 2020 IT : Digital India is finally happening | Digital India | IOT | Nirmala Sitharam

ನವದೆಹಲಿ, ಫೆಬ್ರವರಿ.01: ಡಿಜಿಟಲ್ ಇಂಡಿಯಾದ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಗ್ರಾಮೀಣ ಭಾಗಗಳಲ್ಲಿ ಇಂಟರ್ ನೆಟ್ ಸೇವೆಯನ್ನು ಒದಗಿಸುವ ಭಾರತ್ ನೆಟ್ ಯೋಜನೆಗೆ ಬಲ ತುಂಬುವ ನಿರ್ಧಾರವನ್ನು ಘೋಷಿಸಿದೆ.

2020-21ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಭಾರತ್ ನೆಟ್ ಯೋಜನೆ ಅಡಿ ದೇಶದ ಒಂದು ಲಕ್ಷ ಗ್ರಾಮ ಪಂಚಾಯಿತಿಗಳಿಗೆ 6 ಸಾವಿರ ಕೋಟಿ ರೂಪಾಯಿ ಒದಗಿಸುವುದಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ವೇಳೆ ಘೋಷಿಸಿದ್ದಾರೆ.

ಪ್ರಧಾನಮಂತ್ರಿ ಕುಸುಮ್ ಯೋಜನೆ ವಿಸ್ತರಣೆ: ರೈತರಿಗೆ ಏನು ಲಾಭ? ಪ್ರಧಾನಮಂತ್ರಿ ಕುಸುಮ್ ಯೋಜನೆ ವಿಸ್ತರಣೆ: ರೈತರಿಗೆ ಏನು ಲಾಭ?

ಗ್ರಾಮೀಣ ಭಾಗಗಳಲ್ಲಿ ಡಿಜಿಟಲ್ ಇಂಡಿಯಾ ಕನಸನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಭಾರತ್ ನೆಟ್ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. 2017ರಲ್ಲಿ ಜಾರಿಗೊಳಿಸಿದ ಯೋಜನೆಗೆ ಇದೀಗ ಕೇಂದ್ರ ಸರ್ಕಾರ ಭರ್ಜರಿ ಅನುದಾನ ನೀಡಿದೆ.

Rs 6000 Crore Boost For Internet Connectivity Under Bharat Net Project

ಎಲ್ಲ ಮನೆಗಳಿಗೂ ಬ್ರಾಂಡ್ ಬ್ಯಾಂಡ್ ಸಂಪರ್ಕ:

ಗ್ರಾಮೀಣ ಭಾಗಗಳಲ್ಲಿ ಗ್ರಾಮ ಪಂಚಾಯಿತಿ ಮೂಲಕ ಮನೆ ಮನೆಗೆ ಬ್ರಾಂಡ್ ಬ್ಯಾಂಡ್ ಮೂಲಕ ಇಂಟರ್ ನೆಟ್ ಸೇವೆಯನ್ನು ನೀಡುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ. ಈ ಉದ್ದೇಶದಿಂದ ಭಾರತ್ ನೆಟ್ ಯೋಜನೆ ಅನುಷ್ಠಾನಗೊಳಿಸಲಾಗಿದೆ.

ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್:

ಗ್ರಾಮೀಣ ಭಾಗಗಳಲ್ಲಿ ಪೌಷ್ಠಕಾಂಶದ ಬಗ್ಗೆ ಮಾಹಿತಿ ಸಂಗ್ರಹಿಸಲು ಕೇಂದ್ರ ಸರ್ಕಾರ ಮತ್ತೊಂದು ಘೋಷಣೆ ಮಾಡಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಬಂಪರ್ ಕೊಡುಗೆಯನ್ನು ಕೊಟ್ಟಿರುವ ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್, ದೇಶದ 6 ಲಕ್ಷ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ನೀಡುವುದಾಗಿ ಘೋಷಿಸಿದ್ದಾರೆ.

English summary
Union Budget 2020: Rs 6000 Crore Boost For Internet Connectivity Under Bharat Net Project. New Smartphones For 6 Lakh Anganawadi Workers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X