3ವರ್ಷಗಳಲ್ಲಿ ರೂ. 71,941 ಕೋಟಿ ಅಕ್ರಮ ಆಸ್ತಿ ಪತ್ತೆ-ಕೇಂದ್ರ ಸರ್ಕಾರ
ನವದೆಹಲಿ, ಜುಲೈ 23: ಕಳೆದ ಮೂರು ವರ್ಷಗಳಲ್ಲಿ ಆದಾಯ ತೆರಿಗೆ ಇಲಾಖೆ ನಡೆಸಿರುವ ದಾಳಿಯಲ್ಲಿ ರೂಪಾಯಿ 71,941 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿರುವುದಾಗಿ ಸುಪ್ರೀಂ ಕೋರ್ಟ್ಗೆ ಕೇಂದ್ರ ಸರಕಾರ ತಿಳಿಸಿದೆ.
ಇನ್ನು ದಾಳಿ ವೇಳೆ ಸಂಗ್ರಹಿಸಲಾಗಿದ್ದ ಅಘೋಷಿತ ಹಣದ ಮಾಹಿತಿಯನ್ನು ಮಾಲಿಕರು ತಿರುಚಲು ಯತ್ನಿಸಿದ್ದಾರೆ. ಇದಕ್ಕೆ ಸಂಬಂಧಿಸಿದ 400 ಪ್ರಕರಣಗಳನ್ನು ಸಿಬಿಐ ಹಾಗೂ ಜಾರಿ ನಿರ್ದೇಶನಾಲಯಕ್ಕೆ ವರ್ಗಾಯಿಸಲಾಗಿದೆ ಎಂದೂ ಸರ್ವೋಚ್ಛ ನ್ಯಾಯಾಲಯಕ್ಕೆ ಸಲ್ಲಿಸಿದ ಮಾಹಿತಿಯಲ್ಲಿ ಕೇಂದ್ರ ಸರಕಾರ ಹೇಳಿದೆ.

ಇದೇ ವೇಳೆ ನವೆಂಬರ್ 8, 2016ರಿಂದ ಜನವರಿ 10, 2017ರ ಅಪನಗದೀಕರಣದ ಅವಧಿಯಲ್ಲಿ 5,400 ಕೋಟಿ ರೂಪಾಯಿ ಅಘೋಷಿತ ಆದಾಯ ಪತ್ತೆ ಹಚ್ಚಲಾಗಿದೆ. ಜತೆಗೆ 303.3 ಕೆ.ಜಿ. ಚಿನ್ನವನ್ನೂ ಪತ್ತೆಹಚ್ಚಿ ಜಪ್ತಿ ಮಾಡಲಾಗಿದೆ ಎಂದು ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ ಅಫಿಡವಿಟ್ ನಲ್ಲಿ ಹಣಕಾಸು ಸಚಿವಾಲಯ ಹೇಳಿದೆ.
ಅಪನಗದೀಕರಣದ ನಂತರದ ದಾಳಿ ಸಂದರ್ಭ ಒಟ್ಟು 513 ಕೋಟಿ ರೂಪಾಯಿ ಮೌಲ್ಯದ ನಗದು ಜಪ್ತಿ ಮಾಡಲಾಗಿದ್ದು, ಇದರಲ್ಲಿ 110 ಕೋಟಿ ರೂ. ಹೊಸ ನೋಟುಗಳಾಗಿವೆ. ಇದೇ ಅವಧಿಯಲ್ಲಿ ಇದರ ಜತೆಗೆ 2890 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಆಸ್ತಿಯನ್ನೂ ವಶಕ್ಕೆ ಪಡೆಯಲಾಗಿದೆ ಎಂದು ಕೇಂದ್ರ ಸರಕಾರ ನ್ಯಾಯಾಲಯಕ್ಕೆ ಹೇಳಿದೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ












Click it and Unblock the Notifications