• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಭಾರತದಲ್ಲಿ ಕೊರೊನಾವೈರಸ್ ಲಸಿಕೆಗಾಗಿ 9,725.15 ಕೋಟಿ ರೂಪಾಯಿ ಖರ್ಚು!

|
Google Oneindia Kannada News

ನವದೆಹಲಿ, ಜುಲೈ 23: ಕೊರೊನಾವೈರಸ್ ಲಸಿಕೆ ಉತ್ಪಾದಿಸುವ ವಾಣಿಜ್ಯ ಕಂಪನಿಗಳ ಜೊತೆಗೆ ಒಪ್ಪಂದದಲ್ಲಿ ಯಾವುದೇ ರೀತಿ ವಿಳಂಬ ನೀತಿ ಅನುಸರಿಸಿಲ್ಲ ಎಂದು ಆರೋಗ್ಯ ಇಲಾಖೆ ರಾಜ್ಯ ಸಚಿವ ಡಾ. ಭಾರತಿ ಪ್ರವೀಣ್ ಪವಾರ್ ತಿಳಿಸಿದ್ದಾರೆ.

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು ಟಿಎಂಸಿ ಸಂಸದ ಮಾಲಾ ರಾಯ್ ಕೇಳಿದ ಪ್ರಶ್ನೆಗೆ ಸಚಿವೆ ಭಾರತಿ ಪ್ರವೀಣ್ ಪವಾರ್ ಲಿಖಿತ ಉತ್ತರ ನೀಡಿದರು. ಶುಕ್ರವಾರ ಲೋಕಸಭೆಯಲ್ಲಿ ಮಾತನಾಡಿದ ಅವರು, ಕೊರೊನಾವೈರಸ್ ಲಸಿಕೆ ಪೂರೈಕೆಗೂ ಮೊದಲೇ ಕೇಂದ್ರ ಸರ್ಕಾರದಿಂದ ಮುಂಗಡ ಹಣವನ್ನು ಪಾವತಿ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ದೇಶದಲ್ಲಿ 35,342 ಹೊಸ ಕೊರೊನಾ ಪ್ರಕರಣ ದಾಖಲು; ಚೇತರಿಕೆ ಪ್ರಮಾಣ ಏರಿಕೆದೇಶದಲ್ಲಿ 35,342 ಹೊಸ ಕೊರೊನಾ ಪ್ರಕರಣ ದಾಖಲು; ಚೇತರಿಕೆ ಪ್ರಮಾಣ ಏರಿಕೆ

ಭಾರತದಲ್ಲಿ 2021ರ ಆಗಸ್ಟ್ ತಿಂಗಳಾಂತ್ಯದ ವೇಳೆಗೆ 135 ಕೋಟಿ ಡೋಸ್ ಕೊರೊನಾವೈರಸ್ ಲಸಿಕೆಯು ಲಭ್ಯವಾಗಿರಲಿದೆ. 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಡಿಸೆಂಬರ್ ಅಂತ್ಯದ ವೇಳೆಗೆ ಲಸಿಕೆ ವಿತರಿಸುವ ಉದ್ದೇಶವನ್ನು ಹೊಂದಲಾಗಿದೆ ಎಂದು ಆರೋಗ್ಯ ಇಲಾಖೆ ರಾಜ್ಯ ಸಚಿವ ಡಾ. ಭಾರತಿ ಪ್ರವೀಣ್ ಪವಾರ್ ತಿಳಿಸಿದ್ದಾರೆ.

9,725.15 ಕೋಟಿ ರೂಪಾಯಿ ಕೊವಿಡ್-19 ಲಸಿಕೆಗಾಗಿ ಖರ್ಚು

9,725.15 ಕೋಟಿ ರೂಪಾಯಿ ಕೊವಿಡ್-19 ಲಸಿಕೆಗಾಗಿ ಖರ್ಚು

ಭಾರತದಲ್ಲಿ ಕೊರೊನಾವೈರಸ್ ಲಸಿಕೆ ಖರೀದಿ, ಸರಬರಾಜು ಮತ್ತು ಪೂರೈಕೆ ಜೊತೆಗೆ ವಿತರಣೆ ಅಭಿಯಾನಕ್ಕಾಗಿ ಈವರೆಗೂ 9,725.15 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ರಾಜ್ಯ ಸಚಿವ ಡಾ. ಭಾರತಿ ಪ್ರವೀಣ್ ಪವಾರ್ ಹೇಳಿದ್ದಾರೆ.

18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆ

18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆ

"ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದ್ದು, ಇಷ್ಟು ದಿನಗಳಲ್ಲೇ ಲಸಿಕೆ ವಿತರಣೆ ಅಭಿಯಾನ ಪೂರ್ಣಗೊಳ್ಳಬೇಕು ಎಂಬ ಯಾವುದೇ ಷರತ್ತುಗಳಿಲ್ಲ. ಅದಾಯ್ಯೂ, ದೇಶದಲ್ಲಿ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಡಿಸೆಂಬರ್ ತಿಂಗಳಾಂತ್ಯದ ವೇಳೆಗೆ ಲಸಿಕೆಯನ್ನು ನೀಡುವ ಗುರಿಯನ್ನು ಹೊಂದಲಾಗಿದೆ," ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕೇಂದ್ರ ಸರ್ಕಾರದಿಂದ ಶೇ.75ರಷ್ಟು ಲಸಿಕೆ ಖರೀದಿಸಿ ಪೂರೈಕೆ

ಕೇಂದ್ರ ಸರ್ಕಾರದಿಂದ ಶೇ.75ರಷ್ಟು ಲಸಿಕೆ ಖರೀದಿಸಿ ಪೂರೈಕೆ

ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಕೊರೊನಾವೈರಸ್ ಲಸಿಕೆಯ ಶೇ.75ರಷ್ಟು ಪ್ರಮಾಣವನ್ನು ಕೇಂದ್ರ ಸರ್ಕಾರವೇ ಕಂಪನಿಗಳಿಂದ ನೇರವಾಗಿ ಖರೀದಿಸುತ್ತದೆ. ಹೀಗೆ ಖರೀದಿಸಿದ ಲಸಿಕೆಯನ್ನು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಸರಬರಾಜು ಮಾಡಲಾಗುತ್ತದೆ. ದೇಶದಲ್ಲಿ ಪ್ರತಿಯೊಬ್ಬರಿಗೆ ಕೊವಿಡ್-19 ಲಸಿಕೆ ಸಿಗಬೇಕು ಎನ್ನುವ ಉದ್ದೇಶದಿಂದ ಉಚಿತ ಲಸಿಕೆ ವಿತರಣೆ ಅಭಿಯಾನವನ್ನು ನಡೆಸಲಾಗುತ್ತಿದೆ.

ಕೊವಿಡ್-19 ಲಸಿಕೆ ಪೂರೈಕೆ ಮತ್ತು ಲಭ್ಯತೆ ಪಟ್ಟಿ

ಕೊವಿಡ್-19 ಲಸಿಕೆ ಪೂರೈಕೆ ಮತ್ತು ಲಭ್ಯತೆ ಪಟ್ಟಿ

2021ರ ಜುಲೈ 23ರ ಅಂಕಿ-ಅಂಶಗಳ ಪ್ರಕಾರ, ದೇಶದಲ್ಲಿ ಎಷ್ಟು ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.

ಕೊರೊನಾವೈರಸ್ ಲಸಿಕೆ ಪೂರೈಕೆ ಮತ್ತು ಲಭ್ಯತೆ ಪಟ್ಟಿ:

* ಪೂರೈಕೆಯಾದ ಲಸಿಕೆ ಪ್ರಮಾಣ - 43,87,50,190

* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 71,40,000

* ಬಳಕೆ ಆಗಿರುವ ಲಸಿಕೆ ಪ್ರಮಾಣ - 41,12,30,353

* ಕೊವಿಡ್-19 ಲಸಿಕೆಯ ಲಭ್ಯತೆ - 2,75,19,837

42 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಣೆ

42 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಣೆ

ದೇಶದಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 188 ದಿನಗಳಲ್ಲಿ 42 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ. ಗುರುವಾರ ರಾತ್ರಿ 7 ಗಂಟೆ ವೇಳೆಗೆ 48,86,103 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಈವರೆಗೂ 42,28,26,035 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

English summary
Rs 9725.15 Crore Fund Spent To Covid-19 Vaccine From Central Govt, Minister Dr Bharati Pawar Answer In Lok Sabha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X