ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ವಿಷಕಾರಿ; ಮಲ್ಲಿಕಾರ್ಜುನ ಖರ್ಗೆ

ಪುದುಚೇರಿ, ಏಪ್ರಿಲ್ 2: ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಸಿದ್ಧಾಂತಗಳು ವಿಷಕಾರಿ. ಅದನ್ನು ಜನರು ತಮಿಳುನಾಡು ಹಾಗೂ ಪುದುಚೇರಿಗೆ ಪ್ರವೇಶಿಸಲು ಅನುಮತಿ ನೀಡಬಾರದು ಎಂದು ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಪುದುಚೇರಿಗೆ ಭೇಟಿ ನೀಡಿದ್ದ ಸಂದರ್ಭ ಗುರುವಾರ ಜನರನ್ನುದ್ದೇಶಿಸಿ ಮಾತನಾಡಿದ ಅವರು,"ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ವಿಷವಿದ್ದಂತೆ. ಅದರ ರುಚಿ ನೋಡಿದರೆ ನೀವು ಸಾಯುತ್ತೀರಿ. ಅದು ಹೇಗೋ ಇವು ಕರ್ನಾಟಕಕ್ಕೆ ಸೇರಿವೆ. ಆದರೆ ತಮಿಳುನಾಡು ಹಾಗೂ ಪುದುಚೇರಿಗೆ ಆ ಅವಕಾಶ ಕೊಡಬೇಡಿ. ಇಲ್ಲಿಯೂ ಆ ವಿಷವನ್ನು ಅವರು ಉಗುಳುತ್ತಾರೆ" ಎಂದು ಕಿಡಿಕಾರಿದ್ದಾರೆ.

RSS And BJPs Ideology Is Poisonous Commented Congress Leader Mallikarjuna Kharge

ಪುದುಚೇರಿಯ 30 ಕ್ಷೇತ್ರಗಳಿಗೆ ಏಪ್ರಿಲ್ 6ರಂದು ಚುನಾವಣೆ ನಡೆಯಲಿದೆ. ತಮಿಳುನಾಡಿನಲ್ಲಿಯೂ 234 ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 6ರಂದು ಚುನಾವಣೆ ನಡೆಯಲಿದೆ. ತಮಿಳುನಾಡಿನಲ್ಲಿ ಬಿಜೆಪಿ-ಎಐಎಡಿಎಂಕೆ ಮೈತ್ರಿಯಲ್ಲಿದ್ದರೆ, ಡಿಎಂಕೆ-ಕಾಂಗ್ರೆಸ್ ಮೈತ್ರಿಯಲ್ಲಿವೆ. ಈ ಎರಡರ ನಡುವೆಯೂ ಹಣಾಹಣಿ ಏರ್ಪಟ್ಟಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+