ಆರೆಸ್ಸೆಸ್ ಮಾನನಷ್ಟ ಪ್ರಕರಣ: ರಾಹುಲ್ ಗಾಂಧಿ ಜಾಮೀನು

Posted By:
Subscribe to Oneindia Kannada

ಭಿವಂಡಿ(ಮಹಾರಾಷ್ಟ್ರ), ನವೆಂಬರ್ 16: ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಭಿವಂಡಿ ಕೋರ್ಟಿನಿಂದ ಬುಧವಾರ ಜಾಮೀನು ಮಂಜೂರಾಗಿದೆ. 'ಮಹಾತ್ಮಾ ಗಾಂಧಿ ಅವರನ್ನು ಕೊಂದಿದ್ದು ಆರೆಸ್ಸೆಸ್ ನಾಯಕರು' ಎಂದು ರಾಹುಲ್ ಅವರು ನೀಡಿದ್ದ ಹೇಳಿಕೆಯನ್ನು ಖಂಡಿಸಿ, ರಾಹುಲ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭಿವಂಡಿ ಕೋರ್ಟಿಗೆ ರಾಹುಲ್ ಗಾಂಧಿ ಖುದ್ದು ಹಾಜರಾಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ವೈಯಕ್ತಿಕ ಶ್ಯೂರಿಟಿ ಪಡೆದು ರಾಹುಲ್ ಗಾಂಧಿ ಅವರಿಗೆ ಮಾನನಷ್ಟ ಮೊಕದ್ದಮೆ ಕೇಸಿನಲ್ಲಿ ಜಾಮೀನು ಮಂಜೂರು ಮಾಡಿದೆ. ಮುಂದಿನ ವಿಚಾರಣೆಯನ್ನು ಜನವರಿ 28, 2017ಕ್ಕೆ ಮುಂದೂಡಲಾಗಿದೆ.

RSS defamation case: Rahul Gandhi gets bail Bhiwandi

2014ರ ಲೋಕಸಭಾ ಚುನಾವಣೆಯಲ್ಲಿ ಮಹಾತ್ಮ ಗಾಂಧಿಯನ್ನು ಕೊಂದಿದ್ದು ಆರ್‌ ಎಸ್‌ ಎಸ್‌ ಎಂದು ರಾಹುಲ್ ಚುನಾವಣಾ ಪ್ರಚಾರವೊಂದರಲ್ಲಿ ಆರೋಪಿಸಿದ್ದರು.

ಈ ಕುರಿತು ಆರ್‌ ಎಸ್‌ ಎಸ್‌ ಕಾರ್ಯಕರ್ತರೊಬ್ಬರು ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಕೇಸ್‌ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲೂ ವಿಚಾರಣೆ ನಡೆದಿದ್ದು ರಾಹುಲ್ ತಮ್ಮ ಹೇಳಿಕೆಗೆ ಬದ್ಧವಾಗಿರುವುದಾಗಿ ಹೇಳಿದ್ದರು

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Congress vice-president Rahul Gandhi was granted bail by a Bhiwandi court Wednesday in a criminal defamation case filed against him for his alleged remarks on RSS’ alleged involvement in the Mahatma Gandhi’s murder.
Please Wait while comments are loading...