ಆರೆಸ್ಸೆಸ್ ಮಾನನಷ್ಟ ಮೊಕದ್ದಮೆ, ಕೋರ್ಟಿಗೆ ಇಂದು ರಾಹುಲ್ ಹಾಜರ್
Recommended Video

ಮಾನನಷ್ಟ ಮೊಕದ್ದಮೆ ಹಿನ್ನಲೆಯಲ್ಲಿ ಇಂದು ರಾಹುಲ್ ನ್ಯಾಯಾಲಯಕ್ಕೆ | Oneindia kannada
ಮುಂಬೈ, ಜೂನ್ 12: ಮಹಾರಾಷ್ಟ್ರದ ಭಿವಾಂಡಿ ನ್ಯಾಯಾಲಯದ ಮುಂದೆ ಇಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಜರಾಗಲಿದ್ದಾರೆ.
ಆರ್.ಎಸ್.ಎಸ್ ಕಾರ್ಯಕರ್ತ ರಾಜೇಶ್ ಕುಂಟೆ ಎಂಬವರು ಅವರ ವಿರುದ್ಧ ದಾಖಲಿಸಿದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ವಿಚಾರಣೆಗೆ ಹಾಜರಾಗಲಿದ್ದಾರೆ. ಕಳೆದ ತಿಂಗಳೇ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಅವರ ವಕೀಲರು ಖುದ್ದು ಹಾಜರಿಯಿಂದ ವಿನಾಯಿತಿ ಕೋರಿದ್ದರು. ಇದನ್ನು ನ್ಯಾಯಾಲಯ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಅವರು ಇಂದು ವಿಚಾರಣೆಗೆ ಹಾಜರಾಗುತ್ತಿದ್ದಾರೆ.
ರಾಹುಲ್ ಗಾಂಧಿ ಮಹಾತ್ಮಾ ಗಾಂಧಿ ಹತ್ಯೆ ಹಿಂದೆ ಆರ್.ಎಸ್.ಎಸ್ ಇದೆ ಎನ್ನುವ ಹೇಳಿಕೆ ನೀಡಿದ್ದರು. ಈ ಹೇಳಿಕೆ ಸಂಬಂಧ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಲಾಗಿತ್ತು.

ಇಂದು ಭಿವಾಂಡಿ ನ್ಯಾಯಾಲಯ ರಾಹುಲ್ ಗಾಂಧಿ ವಿರುದ್ಧ ಆರೋಪಗಳನ್ನು ದಾಖಲು ಮಾಡಿಕೊಳ್ಳುವ ಸಾಧ್ಯತೆ ಇದೆ.
ನ್ಯಾಯಾಲಯಕ್ಕೆ ಹಾಜರಾಗಲು ಈಗಾಗಲೇ ರಾಹುಲ್ ಗಾಂಧಿ ಮುಂಬೈಗೆ ಬಂದಿಳಿದಿದ್ದಾರೆ. ಇಂದು ಅವರು ಕೋರ್ಟ್ ಗೆ ಹಾಜರಾಗಲಿದ್ದಾರೆ.












Click it and Unblock the Notifications