ವಿಶಿಷ್ಟ ರೀತಿಯಲ್ಲಿ RSSಗೆ ಸ್ವಾತಂತ್ರ್ಯೋತ್ಸವದ ಶುಭ ಕೋರಿದ ಕಾಂಗ್ರೆಸ್
ಬೆಂಗಳೂರು, ಆಗಸ್ಟ್ 15: ದೇಶವ್ಯಾಪ್ತಿ ಸ್ವಾತಂತ್ರ್ಯ ದಿನಾಚರಣೆಗಳು ಅದ್ಧೂರಿಯಾಗಿ ನಡೆದಿದೆ. ಈ ಮಧ್ಯೆ ಧ್ವಜಾರೋಹಣ ವಿಚಾರವಾಗಿ ಕೇರಳ ಕಾಂಗ್ರೆಸ್ ಪಕ್ಷವು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ವಿರುದ್ಧ ಲೇವಡಿ ಮಾಡಿದೆ. 77ನೇ ಸ್ವಾತಂತ್ರ್ಯೋವದ ಸಂದರ್ಭದಲ್ಲಿ ಆರ್‌ಎಸ್‌ಎಸ್‌ಗೆ 21 ನೇ ವಾರ್ಷಿಕೋತ್ಸವದ ಶುಭಾಶಯಗಳು ಎಂದು ತಿಳಿಸಿದೆ.
ಈ ಕುರಿತು ಮಂಗಳವಾರ ಕೇರಳ ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಅದರಲ್ಲಿ ಪಿಟಿಐ ಹಾಗೂ ದಿ ಇಂಡಿಯನ್ ಎಕ್ಸ್‌ಪ್ರೆಸ್ ಈ ಹಿಂದಿನ ವರದಿಯನ್ನು ಉಲ್ಲೇಖಿಸಿ ಟಾಂಗ್ ನೀಡಿದೆ.

ಇಂದು ನಾಗಪುರದಲ್ಲಿರುವ ತಮ್ಮ ಪ್ರಧಾನ ಕಛೇರಿಯಲ್ಲಿ ಭಾರತೀಯ ಧ್ವಜವನ್ನು ಹಾರಿಸಿದ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ನಿಮಗೆ 21 ನೇ ವಾರ್ಷಿಕೋತ್ಸವದ ಶುಭಾಶಯಗಳು ಎಂದು ಕಾಂಗ್ರೆಸ್ ಪೋಸ್ಟ್ ಮಾಡಿದೆ.
ಪತ್ರಿಕಾ ವರದಿಯ ಪ್ರಕಾರ, RSS 1947ರಂದು ಆಗಸ್ಟ್ 15 ರಂದು ನಾಗಪುರದ ತನ್ನ ಪ್ರಧಾನ ಕಚೇರಿಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿತ್ತು. ಅದಾದ ನಂತರ 1950ರಂದು ಜನವರಿ 26 ರಂದು ಗಣರಾಜ್ಯೋತ್ಸವ ವೇಳೆ ತ್ರಿವರ್ಣ ಧ್ವಜಾರೋಹಣ ಮಾಡಿತ್ತು. ಅದಾಗಿನಿಂದ ಮತ್ತೆ ಆಚರಣೆ ಮಾಡಲೇ ಇಲ್ಲ ಎಂದು ಕಾಂಗ್ರೆಸ್ ಹೇಳಿದೆ.
Wishing Rashtriya Swayamsevak Sangh (RSS) on the 21st anniversary of hoisting the Indian Flag at their headquarters in Nagpur. pic.twitter.com/bY87A3top8
— Congress Kerala (@INCKerala) August 15, 2023
RSS ವಿರುದ್ಧವಾಗಿ ಮೂವರಿಂದ ಧ್ವಜಾರೋಹಣ
1950 ನಂತರ, 2001ರ ಜನವರಿ 26 ರವರೆಗೆ RSSನ ನಾಗರಪುರದ ಪ್ರಧಾನ ಕಛೇರಿಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಲಾಗಿಲ್ಲ. ರಾಷ್ಟ್ರಪ್ರೇಮಿ ಯುವದಳದ ಮೂವರು ಸದಸ್ಯರು ಆರ್‌ಎಸ್‌ಎಸ್ ಆಡಳಿತದ ಆಶಯಕ್ಕೆ ವಿರುದ್ಧವಾಗಿ ಆರ್‌ಎಸ್‌ಎಸ್ ಸ್ಮೃತಿ ಭವನದಲ್ಲಿ ಬಲವಂತವಾಗಿ ರಾಷ್ಟ್ರಧ್ವಜವನ್ನು ಹಾರಿಸಿದರು. ಆದರೆ ಆ ಮೂವರ ವಿರುದ್ಧ ಕ್ರಮ ಕೈಗೊಳ್ಳಲಾಯಿತು ಎಂದು ವರದಿ ಆಗಿದೆ.
ಈ ಘಟನೆಯ ಕುರಿತು 2013ರಲ್ಲಿ ಪಿಟಿಐ ವರದಿ ಮಾಡಿತ್ತು, ಆರ್‌ಎಸ್‌ಎಸ್ ಆವರಣದಲ್ಲಿ ಧ್ವಜ ಹಾರಿಸಲು ಬಂದಿದ್ದ ಉಸ್ತುವಾರಿ ಸುನಿಲ್ ಕಥ್ಲೆ ಅವರನ್ನು ಬರದಂತೆ ತಡೆಯಲು ಪ್ರಯತ್ನಿಸಲಾಯಿತು. ನಂತರ ಆವರಣದಲ್ಲಿ ತ್ರಿವರ್ಣ ಧ್ವಜ ಹಾರಿಸಿದಂತೆ ತಡೆಯಲಾಗಿತ್ತು ಎನ್ನಲಾಗಿದೆ.

2001ರ ಬಳಿಕ RSS ತನ್ನ ಸ್ವಂತ ಇಚ್ಛೆಯಿಂದ ಬಹುವರ್ಷಗಳ ಬಳಿಕ 2002ರ ಜನವರಿ 26 ರಂದು ಗಣರಾಜ್ಯೋತ್ಸವ ಆಚರಿಸಲು ನಿರ್ಧರಿಸಿ ತನ್ನ ಪ್ರಧಾನ ಕಛೇರಿಯಲ್ಲಿ ರಾಷ್ಟ್ರೀಯ ತ್ರಿವರ್ಣ ಧ್ವಜವನ್ನು ಹಾರಿಸಿತು. ಈ ಮೂಲಕ ಪ್ರತಿ ಬಾರಿಯು ದೇಶಪ್ರೇಮದ ಬಗ್ಗೆ ಮಾತನಾಡುವ ಆರ್‌ಎಸ್‌ಎಸ್‌ನ 1950ರಿಂದ 2001ರವರೆಗೆ ಆರ್‌ಎಸ್‌ಎಸ್ ಸ್ವಾತಂತ್ರ್ಯೋತ್ಸವ ಆಚರಣೆ ಮಾಡದಿರುವುದಕ್ಕೆ ಕಾಂಗ್ರೆಸ್ ಪ್ರಶ್ನೆ ಮಾಡಿ ಕುಟುಕಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications