RSS ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ, ಸೀತಾರಾಮ್ ಯಚೂರಿಗೆ ಆಹ್ವಾನ?

Recommended Video

      ರಾಹುಲ್ ಗಾಂಧಿಗೆ ಆರ್ ಎಸ್ ಎಸ್ ನ ಕಾರ್ಯಕ್ರಮವೊಂದಕ್ಕೆ ಆಮಂತ್ರಣ ಸಾಧ್ಯತೆ | Oneindia Kannada

      ನವದೆಹಲಿ, ಆಗಸ್ಟ್ 27: ಇತ್ತೀಚೆಗಷ್ಟೇ ಮಾಜಿ ರಾಷ್ಟ್ರಪತಿ ಪ್ರಣಜ್ ಮುಖರ್ಜಿ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದು, ಕಾಂಗ್ರೆಸ್ ಪಾಳೆಯದಲ್ಲಿ ಸಾಕಷ್ಟು ಚರ್ಚೆ ಎಬ್ಬಿಸಿತ್ತು.

      ಹೊಸ ಬೆಳವಣಿಗೆಯಲ್ಲಿ ಮುಂದಿನ ತಿಂಗಳು ನವದೆಹಲಿಯಲ್ಲಿ ನಡೆಯಲಿರುವ ಆರೆಸ್ಸೆಸ್ ಕಾರ್ಯಕ್ರಮವೊಂದಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಮುಖ್ಯ ಅತಿಥಿಯನ್ನಾಗಿ ಆಮಂತ್ರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

      ಸೆಪ್ಟೆಂಬರ್ 17 ರಿಂದ 19ರವರೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಅವರನ್ನು ಮಾತ್ರವಲ್ಲದೆ, ವಿರೋಧಪಕ್ಷದ ವಿವಿಧ ಮುಖಂಡರು, ಸಿಪಿಐಎಂ ಮುಖಂಡ ಸೀತಾರಾಮ್ ಯಚೂರಿ ಅವರನ್ನೂ ಆಮಂತ್ರಿಸಲಾಗಿದೆ ಎಂದು ಕೆಲವು ಮೂಲಗಳು ತಿಳಿಸಿವೆ.

      RSS planning to invite Rahul Gandhi to an event, Sources said

      ಆದರೆ ಈ ಕುರಿತು ಸ್ಪಷ್ಟನೆ ನೀಡಿದ ಆರೆಸ್ಸೆಸ್ ಪ್ರಚಾರ ಪ್ರಮುಖ್ ಅರುಣ್ ಕುಮಾರ್ 'ಈ ಸುದ್ದಿ ಸುಳ್ಳು' ಎಂದಿದ್ದಾರೆ.

      "The India of the future" ಎಂಬ ವಿಷಯದ ಕುರಿತು ಈ ಕಾರ್ಯಕ್ರಮದಲ್ಲಿ ಚರ್ಚೆ ನಡೆಯಲಿದೆ.

      ಕಳೆದ ಜೂನ್ ನಲ್ಲಿ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ ಆರೆಸ್ಸೆಸ್ ಕಾರ್ಯಕ್ರಮವೊಂದರಲ್ಲಿ ಮಾಜಿ ರಾಷ್ತ್ರಪತಿ ಪ್ರಣಬ್ ಮುಖರ್ಜಿ ಭಾಗವಹಿಸಿದ್ದರು. ಅವರು ನೀಡಿದ ಭಾಷಣ ದೇಶಾದ್ಯಂತ ಚರ್ಚೆಗೊಳಪಟ್ಟಿತ್ತು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+