ಕೇರಳದ ಕಣ್ಣೂರಿನಲ್ಲಿ ಆರೆಸ್ಸೆಸ್ ಕಾರ್ಯಕರ್ತನ ಮೇಲೆ ಹಲ್ಲೆ
ಕಣ್ಣೂರು, ಡಿಸೆಂಬರ್ 20: ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರೊಬ್ಬರ ಮೇಲೆ ಕೇರಳದ ಕಣ್ಣೂರಿನಲ್ಲಿ ಅಪರಿಚಿತ ದುಷ್ಕರ್ಮಿಗಳು ದಾಳಿ ನಡೆಸಿದ ಪರಿಣಾಮ ಅವರ ಸ್ಥಿತಿ ಚಿಂತಾಜನಕವಾಗಿದೆ.
ಡಿ.19 ರಂದು ಸಂಜೆ ಬೈಕಿನಲ್ಲಿ ಬಂದ ಕೆಲ ಅಪರಿಚಿತರು ಮಾರಕಾಸ್ತ್ರಗಳಿಂದ ಆರೆಸ್ಸೆಸ್ ಕಾರ್ಯಕರ್ತ ಪ್ರವೀಣ್ ಎಂಬುವವರ ಮೇಲೆ ದಾಳಿ ನಡೆಸಿದ್ದು, ದಾಳಿಕೋರರು ಮುಖವಾಡ ಧರಿಸಿದ್ದರಿಂದ ಅವರ ಗುರುತು ಪತ್ತೆಯಾಗಿಲ್ಲ.

ದಾಳಿಯ ನಂತರ ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ್ ಅವರನ್ನು ಕೊಳಿಕೊಡೆ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕಳೆದ ತಿಂಗಳಷ್ಟೇ ಕಣ್ಣೂರು ಜಿಲ್ಲೆಯಲ್ಲೇ ನಾಲ್ಕು ಆರೆಸ್ಸೆಸ್ ಕಾರ್ಯಕರ್ತರ ಮೇಲೆ ದಾಳಿಯಾಗಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.












Click it and Unblock the Notifications