ಭಾರತದಲ್ಲಿ ಸಿಂಗಲ್ ಡೋಸ್ ಸ್ಪುಟ್ನಿಕ್ ಕೊರೊನಾ ಲಸಿಕೆಯಿಂದ ಮೂಡಿದೆ ಹೊಸ ಭರವಸೆ
ನವದೆಹಲಿ, ಜೂನ್ 02: ರಷ್ಯಾದ ಸಿಂಗಲ್ ಡೋಸ್ ಸ್ಟುಟ್ನಿಕ್ ಕೊರೊನಾ ಲಸಿಕೆ ಬಗ್ಗೆ ಭಾರತದಲ್ಲಿ ಹೊಸ ಭರವಸೆ ಮೂಡಿದೆ. ಒಂದೊಮ್ಮೆ ದೇಶಕ್ಕೆ ಸಿಂಗಲ್ ಡೋಸ್ ಸ್ಪುಟ್ನಿಕ್ ಬಂದರೆ ಪ್ರತಿಯೊಬ್ಬರಿಗೂ ಬೇಗ ಲಸಿಕೆ ದೊರೆಯಲಿದೆ ಎನ್ನುವುದು ಖುಷಿಯ ಸಂಗತಿಯಾಗಿದೆ.
Recommended Video
ದೇಶದಲ್ಲಿ ಶೀಘ್ರದಲ್ಲೇ ಸಿಂಗಲ್ ಡೋಸ್ ಕೋವಿಡ್-19 ಲಸಿಕೆ ಸ್ಪುಟ್ನಿಕ್ ಲೈಟ್ ಚಾಲನೆಗೊಳ್ಳುವ ನಿರೀಕ್ಷೆಯಲ್ಲಿ ಸರ್ಕಾರವಿದೆ. ದೇಶದಲ್ಲಿ ಲಸಿಕಾಕರಣವನ್ನು ಹೆಚ್ಚಿಸಲು ತ್ವರಿತಗತಿಯಲ್ಲಿ ಆಪ್ಲಿಕೇಷನ್ ಮತ್ತು ನಿಯಂತ್ರಕ ಅನುಮೋದನೆ ಕಾರ್ಯವಿಧಾನಕ್ಕಾಗಿ ರಷ್ಯಾದ ಉತ್ಪಾದಕರು ಸೇರಿದಂತೆ ಎಲ್ಲಾ ಪಾಲುದಾರರು ಮತ್ತು ಅದರ ಭಾರತೀಯ ಪಾಲುದಾರಿಗೆ ನಿರ್ದೇಶನ ನೀಡಲಾಗಿದೆ ಎಂದು ಮೂಲಗಳು ಗುರುವಾರ ತಿಳಿಸಿವೆ.
ಮುಂದಿನ ಎರಡು ವಾರಗಳಲ್ಲಿ ಸ್ಪುಟ್ನಿಕ್ ಲೈಟ್‌ಗಾಗಿ ನಿಯಂತ್ರಕ ಅನುಮೋದನೆ ಕೋರಿ ಅರ್ಜಿ ಸಲ್ಲಿಸುವ ನಿರೀಕ್ಷೆಯಿದೆ ಮತ್ತು ಇದು ದೇಶದಲ್ಲಿ ಚಾಲನೆಯಾಗುವ ಸಿಂಗಲ್ ಡೋಸ್‌ನ ಮೊದಲ ಲಸಿಕೆಯಾಗಬಹುದು ಎಂದು ಇತ್ತೀಚಿಗೆ ಕೋವಿಡ್-19 ಲಸಿಕೆ ಲಭ್ಯ ಹೆಚ್ಚಿಸಲು ಉನ್ನತ ಅಧಿಕಾರಿಗಳ ನಡುವೆ ನಡೆದ ಚರ್ಚೆಯನ್ನು ಉಲ್ಲೇಖಿಸಿ ಮೂಲಗಳು ಹೇಳಿವೆ.

ಕಳೆದ ವಾರ ಸಂಪುಟ ಕಾರ್ಯದರ್ಶಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸ್ಪುಟ್ನಿಕ್ ಲೈಟ್ ನಿಯಂತ್ರಕ ಅನುಮೋದನೆಗಾಗಿ ಕೂಡಲೇ ಬಯೋ ಟೆಕ್ನಾಲಜಿ ಇಲಾಖೆ ಕಾರ್ಯದರ್ಶಿ,ಡಿಸಿಜಿಐ, ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪ್ರತಿನಿಧಿಗಳು, ಕೇಂದ್ರ ಆರೋಗ್ಯ ಸಚಿವಾಲಯದ ಅಧಿಕಾರಿಗಳು, ಆರ್ ಡಿಐಎಫ್, ಮತ್ತು ದೇಶಿಯ ಉತ್ಪಾದಕರು ಒಳಗೊಂಡಂತೆ ಎಲ್ಲಾ ಸಂಬಂಧಿತ ಪಾಲುದಾರರ ಸಭೆಯನ್ನು ನಡೆಸುವಂತೆ ಸಲಹೆ ನೀಡಲಾಗಿದೆ.
ರಷ್ಯಾ ಈಗಾಗಲೇ ಸ್ಪುಟ್ನಿಕ್ ಲೈಟ್ ಬಗ್ಗೆ ಅನುಮೋದನೆ ನೀಡಿದ್ದು, ಇತರ ರಾಷ್ಟ್ರಗಳಲ್ಲಿ ಪ್ರಯೋಗ ನಡೆಯುತ್ತಿರುವುದರ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ.ಇನ್ನೂ ಎರಡ್ಮೂರು ವಾರಗಳಲ್ಲಿ ಸ್ಪುಟ್ನಿಕ್ ಲೈಟ್ ನಿಯಂತ್ರಕ ಅನುಮೋದನೆಗಾಗಿ ಅರ್ಜಿ ಸಲ್ಲಿಸುವುದಾಗಿ ಡಿಸಿಜಿಐ ಮಾಹಿತಿ ನೀಡಿದೆ.
ಸಿಂಗಲ್ ಡೋಸ್ ಕೊರೊನಾ ಲಸಿಕೆ ಸ್ಪುಟ್ನಿಕ್ ಲೈಟ್ ಅನ್ನು ಶೀಘ್ರದಲ್ಲೇ ಭಾರತದಲ್ಲಿ ಪರಿಚಯಿಸುವ ಯೋಜನೆಯಿದೆ ಎಂದು ಹೇಳಲಾಗಿದೆ.
ಸ್ಪುಟ್ನಿಕ್ ವಿ ರಷ್ಯನ್-ಭಾರತೀಯ ಲಸಿಕೆ. ಭಾರತದಲ್ಲಿ ಇದರ ಉತ್ಪಾದನೆಯನ್ನು ಕ್ರಮೇಣ ವರ್ಷಕ್ಕೆ 850 ಮಿಲಿಯನ್ ಡೋಸ್‌ಗಳವರೆಗೆ ಹೆಚ್ಚಿಸಲಾಗುವುದು ಎಂದು ನಾವು ನಿರೀಕ್ಷಿಸುತ್ತೇವೆ. ಸಿಂಗಲ್ ಡೋಸ್ ಕೊರೊನಾ ಲಸಿಕೆ ಸ್ಪುಟ್ನಿಕ್ ಲೈಟ್ ಶೀಘ್ರದಲ್ಲೇ ಭಾರತಕ್ಕೆ ಬರಲಿದೆ.
ಸ್ಪುಟ್ನಿಕ್ ವಿ ಯ ಪರಿಣಾಮಕಾರಿತ್ವವು ಪ್ರಪಂಚದಲ್ಲಿ ಚಿರಪರಿಚಿತವಾಗಿದೆ. ರಷ್ಯಾದಲ್ಲಿ, 2020 ರ ದ್ವಿತೀಯಾರ್ಧದಿಂದ ನಾಗರಿಕರಿಗೆ ಲಸಿಕೆ ನೀಡಲು ಇದನ್ನು ಯಶಸ್ವಿಯಾಗಿ ಬಳಸಲಾಗುತ್ತಿದೆ. ಹೊಸ ಕೊರೊನಾ ತಳಿಗಳ ವಿರುದ್ಧವೂ ಇದು ಪರಿಣಾಮಕಾರಿ ಎಂದು ರಷ್ಯಾದ ತಜ್ಞರು ಘೋಷಿಸಿದ್ದಾರೆ ಎಂದು ಹೇಳಲಾಗಿದೆ.
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ಬೆಂಗಳೂರಿನಲ್ಲಿ ಇಂದು ಶ್ರೀ ಎಂ ಅವರ "ಉಪನಿಷತ್ತುಗಳು ಮತ್ತು ಜೆ.ಕೃಷ್ಣಮೂರ್ತಿ" ಹೊಸ ಕೃತಿ ಬಿಡುಗಡೆ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ











Click it and Unblock the Notifications