EAM S Jaishankar: ಸುಡಾನ್ ವಿಷಯವನ್ನು ರಾಜಕೀಯಗೊಳಿಸಬೇಡಿ; ಸಿದ್ದರಾಮಯ್ಯಗೆ ಜೈಶಂಕರ್ ಆಗ್ರಹ
ನವದೆಹಲಿ, ಏಪ್ರಿಲ್. 18: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸುಡಾನ್‌ನಲ್ಲಿರುವ ಬುಡಕಟ್ಟು ಸಮುದಾಯದ 31 ಸದಸ್ಯರನ್ನು ರಕ್ಷಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ಪರಿಸ್ಥಿತಿಯನ್ನು ರಾಜಕೀಯಗೊಳಿಸದಂತೆ ಒತ್ತಾಯಿಸಿದ್ದಾರೆ.
ಮಂಗಳವಾರ ಸುಡಾನ್‌ನಲ್ಲಿ ಸೇನಾ ಪಡೆಗಳು ಹಾಗೂ ನಾಗರಿಕರ ಸಂಘರ್ಷದಲ್ಲಿ ಕರ್ನಾಟಕದ ಬುಡಕಟ್ಟು ಜನರು ಸಿಲುಕಿಕೊಂಡಿದ್ದು ಅವರನ್ನು ಕೂಡಲೇ ಸುರಕ್ಷಿತವಾಗಿ ಕರೆತರುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದರು. ಈ ಬಗ್ಗೆ ಟ್ವೀಟ್ ಮಾಡಿದ್ದ ಅವರು, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ಮತ್ತು ಕೇಂದ್ರ ಗೃಹ ಮತ್ತು ವಿದೇಶಾಂಗ ಸಚಿವಾಲಯಗಳನ್ನು ಟ್ವೀಟ್‌ನಲ್ಲಿ ಟ್ಯಾಗ್ ಮಾಡಿದ್ದರು.

"ಹಕ್ಕಿ ಪಿಕ್ಕಿ ಬುಡಕಟ್ಟು ಜನಾಂಗಕ್ಕೆ ಸೇರಿದ ಕರ್ನಾಟಕದ 31 ಜನರು ಅಂತರ್ಯುದ್ಧದಿಂದ ತೊಂದರೆಗೊಳಗಾಗಿರುವ ಸುಡಾನ್‌ನಲ್ಲಿ ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ. ಸುಡಾನ್‌ನಲ್ಲಿರುವ ಹಕ್ಕಿ ಪಿಕ್ಕಿಗಳು ಕಳೆದ ಕೆಲವು ದಿನಗಳಿಂದ ಆಹಾರವಿಲ್ಲದೆ ಸಿಲುಕಿಕೊಂಡಿದ್ದಾರೆ. ಅವರನ್ನು ಮರಳಿ ಕರೆತರಲು ಸರ್ಕಾರ ಇನ್ನೂ ಕ್ರಮ ಕೈಗೊಂಡಿಲ್ಲ. ಬಿಜೆಪಿ ಸರ್ಕಾರವು ತಕ್ಷಣವೇ ರಾಜತಾಂತ್ರಿಕ ಚರ್ಚೆಗಳನ್ನು ಮಾಡಿ ಹಕ್ಕಿ ಪಿಕ್ಕಿ ಜನರ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಬೇಕು. ಅದಕ್ಕಾಗಿ ಅಂತಾರಾಷ್ಟ್ರೀಯ ಏಜೆನ್ಸಿಗಳಿಗೆ ಸೂಚಿಸಬೇಕು" ಎಂದಿದ್ದರು.
ರಾಜ್ಯ ವಿಧಾನಸಭಾ ಚುನಾವಣೆಗೆ ಮೂರು ವಾರಗಳು ಬಾಕಿಯಿರುವಾಗ ಘಟನೆ ಕುರಿತು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಇದಕ್ಕೆ ಕೆಲವು ಗಂಟೆಗಳ ನಂತರ ಪ್ರತಿಕ್ರಿಯೆ ನೀಡಿರುವ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ "ನಿಮ್ಮ ಟ್ವೀಟ್ ನೋಡಿ ಗಾಬರಿಯಾಯಿತು. ಅಲ್ಲಿ ಜೀವಗಳು ಅಪಾಯದಲ್ಲಿದೆ. ರಾಜಕೀಯ ಮಾಡಬೇಡಿ" ಎಂದಿದ್ದಾರೆ.
"ಏಪ್ರಿಲ್ 14 ರಿಂದ ಅಲ್ಲಿ ಹೋರಾಟ ಪ್ರಾರಂಭವಾಗಿದೆ. ಅಂದಿನಿಂದ ಖಾರ್ಟೂಮ್‌ನಲ್ಲಿರುವ ಭಾರತದ ರಾಯಭಾರ ಕಚೇರಿಯು ಸುಡಾನ್‌ನಲ್ಲಿರುವ ಹೆಚ್ಚಿನ ಭಾರತೀಯ ಪ್ರಜೆಗಳು ಮತ್ತು ಪಿಐಒಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದೆ. ಅವರಿಗೆ ಸಂಬಂಧಿಸಿದ ಯೋಜನೆಗಳು ಬಹಳ ಸಂಕೀರ್ಣವಾಗಿದ್ದು, ಭದ್ರತಾ ಸನ್ನಿವೇಶವನ್ನು ಗಣನೆಗೆ ತೆಗೆದುಕೊಳ್ಳಬೇಕು" ಎಂದು ಮಾಹಿತಿ ನೀಡಿದ್ದಾರೆ.
"ಭಾರತದ ರಾಯಭಾರ ಕಚೇರಿಯು ಸುಡಾನ್‌ನಲ್ಲಿರುವ ಹೆಚ್ಚಿನ ಭಾರತೀಯ ಪ್ರಜೆಗಳು ಮತ್ತು ಪಿಐಒಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದೆ. ಭದ್ರತಾ ಕಾರಣಗಳಿಗಾಗಿ ಅವರ ವಿವರಗಳು ಮತ್ತು ಸ್ಥಳಗಳನ್ನು ಸಾರ್ವಜನಿಕಗೊಳಿಸಲಾಗುವುದಿಲ್ಲ" ಎಂದು ಅವರು ಬರೆದಿದ್ದಾರೆ.
ಮಂಗಳವಾರ ರಾತ್ರಿ ಮತ್ತೆ ಜೈಶಂಕರ್ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ " ಎಸ್.ಜೈಶಂಕರ್ ನೀವು ವಿದೇಶಾಂಗ ಸಚಿವರಾಗಿದ್ದ ಕಾರಣ ನಾನು ನಿಮ್ಮ ಸಹಾಯಕ್ಕಾಗಿ ಮನವಿ ಮಾಡಿದ್ದೇನೆ. ನೀವು ದಿಗಿಲುಗೊಳ್ಳುವಲ್ಲಿ ನಿರತರಾಗಿದ್ದರೆ ದಯವಿಟ್ಟು ನಮ್ಮ ಜನರನ್ನು ಮರಳಿ ಕರೆತರಲು ನಮಗೆ ಯಾರು ಸಹಾಯ ಮಾಡುತ್ತಾರೋ ಆ ವ್ಯಕ್ತಿಯನ್ನು ನಮಗೆ ಸೂಚಿಸಿ" ಎಂದು ಟೀಕಿಸಿದ್ದಾರೆ.
Since you are the External Affairs Minister @DrSJaishankar I have appealed you for help.
— Siddaramaiah (@siddaramaiah) April 18, 2023
If you are busy getting appalled please point us to the person who can help us bring our people back. https://t.co/B21Lndvxit
ಇನ್ನು, ಸುಡಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮಂಗಳವಾರ ಮತ್ತೊಂದು ಸಲಹೆಯನ್ನು ನೀಡಿದ್ದು, ಲೂಟಿಯ ಕಾರಣದಿಂದಾಗಿ ಭಾರತೀಯ ಪ್ರಜೆಗಳು ಹೊರಗೆ ಹೋಗಬಾರದು. ಪರಿಸ್ಥಿತಿ ಇನ್ನೂ ಕೆಲವು ದಿನ ಮುಂದುವರಿಯಬಹುದು. ದಯವಿಟ್ಟು ನಿಮ್ಮ ನೆರೆಹೊರೆಯವರಿಂದ ಸಹಾಯ ಪಡೆಯಲು ಪ್ರಯತ್ನಿಸಿ. ದಯವಿಟ್ಟು ಮನೆಯಲ್ಲೇ ಸುರಕ್ಷಿತವಾಗಿರಿ" ಎಂದಿದೆ. ಹಲವು ದಿನಗಳಿಂದ ವಿದ್ಯುತ್, ನೀರು ಇಲ್ಲದೇ ಇಲ್ಲಿನ ನಿವಾಸಿಗಳು ಮನೆಯೊಳಗೆ ಪರದಾಡುವಂತಾಗಿದೆ.
ಶನಿವಾರದಿಂದ ಸುಡಾನ್ ಮಿಲಿಟರಿ ಮತ್ತು ಅರೆಸೈನಿಕ ಕ್ಷಿಪ್ರ ಬೆಂಬಲ ಪಡೆ (RSF) ನಡುವೆ ತೀವ್ರವಾದ ಹೋರಾಟ ನಡೆಯುತ್ತಿದೆ. ಇದರ ಪರಿಣಾಮವಾಗಿ ಕನಿಷ್ಠ 185 ಸಾವು ಸಂಭವಿಸಿದೆ ಮತ್ತು ಸರಿಸುಮಾರು 1800 ಮಂದಿ ಗಾಯಗೊಂಡಿದ್ದಾರೆ. ಸೋಮವಾರ, ಯುಎಸ್ ರಾಜತಾಂತ್ರಿಕ ಬೆಂಗಾವಲು ಪಡೆ ಮೇಲೆ ಆರ್‌ಎಸ್‌ಎಫ್‌ಗೆ ಸಂಬಂಧಿಸಿದ ಹೋರಾಟಗಾರರು ಗುಂಡು ಹಾರಿಸಿದ್ದಾರೆ. ಸುಡಾನ್‌ನಲ್ಲಿರುವ ಭಾರತೀಯ ಸಮುದಾಯವು ಸರಿಸುಮಾರು 4,000 ವ್ಯಕ್ತಿಗಳನ್ನು ಒಳಗೊಂಡಿದೆ ಎಂದು ಭಾರತೀಯ ರಾಯಭಾರ ಕಚೇರಿ ಅಂದಾಜಿಸಿದೆ.
-
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral












Click it and Unblock the Notifications