Sabarimala Issues: ಸಮಸ್ಯೆ ಪರಿಹಾರಕ್ಕೆ ಅನುಭವಿಗಳ ನೇಮಕಕ್ಕೆ ಎನ್‌ಎಸ್‌ಎಸ್ ಆಗ್ರಹ, ಕಾರ್ಯದರ್ಶಿ ಹೇಳಿದ್ದೇನು?
ಬೆಂಗಳೂರು, ಡಿಸೆಂಬರ್ 14: ಈ ಬಾರಿ ಶಬರಿಮಲೆಯಲ್ಲಿ ಮಾಲಾಧಾರಿಗಳು/ಭಕ್ತರ ಜನಸಂದಣಿ ನಿರ್ವಹಣಾ ಕ್ರಮಗಳ ಬಗ್ಗೆ ಸರ್ಕಾರವು ಸಾರ್ವಜನಿಕರಿಗೆ ಭರವಸೆ ನೀಡಲು ಪ್ರಯತ್ನಿಸುತ್ತಿದೆ. ಈ ಮಧ್ಯೆ ನಾಯರ್ ಸರ್ವೀಸ್ ಸೊಸೈಟಿ (NSS) ಬುಧವಾರ ಪವಿತ್ರ ಶಬರಿಮಲ ಬೆಟ್ಟದ ಇಂದಿನ ಪರಿಸ್ಥಿತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಕ್ರಮಕ್ಕೆ ಒತ್ತಾಯಿಸಿದೆ.
ಈ ಕುರಿತು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ನಾಯರ್ ಸರ್ವೀಸ್ ಸೊಸೈಟಿಯ ಪ್ರಧಾನ ಕಾರ್ಯದರ್ಶಿ ಜಿ.ಸುಕುಮಾರನ್ ನಾಯರ್ ಅವರು, ಶಬರಿಮಲೆಯಲ್ಲಿನ ಪರಿಸ್ಥಿತಿಯನ್ನು ಪುನಃಸ್ಥಾಪಿಸಲು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಸದ್ಯ ಶಬರಿಮಲೆಯಲ್ಲಿ ದರ್ಶನಕ್ಕೆ ನೂಕು ನುಗ್ಗಲು ಉಂಟಾಗಿದೆ. ಊಟ ನೀರಿಲ್ಲದೇ ಭಕ್ತರು ಪರದಾಡುಂತಾಗಿದೆ. ಕೆಲವರು ದರ್ಶನವಿಲ್ಲದೇ ದಿನಗಟ್ಟಲೆ ಕಾದು ವಾಪಾಸ್ ಮರಳಿದ್ದಾರೆ. ಇಂತಹ ಇನ್ನಿತರ ಸಮಸ್ಯೆಗಳನ್ನು ಪರಿಹರಿಸಲು ಸಮರ್ಥ ಮತ್ತು ಅನುಭವಿ ಅಧಿಕಾರಿಗಳನ್ನು ಸರ್ಕಾರ ಬೆಟ್ಟದಲ್ಲಿ ನಿಯೋಜಿಸುವ ಅಗತ್ಯತೆ ಇದೆ ಎಂದು ಅವರು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.
ಸಮರ್ಥ ಅಧಿಕಾರಿಗಳನ್ನು ನೇಮಿಸಿ
ಶಬರಿಮಲೆಗೆ ಸಮರ್ಥ ಮತ್ತು ದಕ್ಷ ಅಧಿಕಾರಿಗಳನ್ನು ನೇಮಿಸುವ ಮೂಲಕ ಭಕ್ತರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪರಿಹರಿಸಬಹುದು ಎಂದು ಅವರು ಕೇರಳ ಸರ್ಕಾರವನ್ನು ಕೇಳಿಕೊಂಡಿದ್ದಾರೆ. ಸರ್ಕಾರ ಮತ್ತು ತಿರುವಾಂಕೂರು ದೇವಸ್ವಂ ಮಂಡಳಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಮ್ಮ ಹೇಳಿಕೆಯಲ್ಲಿ ಅವರು ಉಲ್ಲೇಖಿಸಿದ್ದಾರೆ.

ಯಾವತ್ತು ನಡೆಯದ ಅಸ್ತವೆಸ್ತತೆ ಈ ಬಾರಿ ಶಬರಿಮಲೆಯಲ್ಲಿ ನಡೆದಿದೆ. ಈ ವಿಚಾರ ಭಾರಿ ಸದ್ದು ಮಾಡುತ್ತಿದೆ. ಅಸ್ತವ್ಯಸ್ತವಾಗಿರುವ ಪರಿಸ್ಥಿತಿಗೆ ಅಧಿಕಾರಿಗಳ ದುರಾಡಳಿತವೇ ಕಾರಣ ಎಂದು ಅವರು ಆರೋಪಿಸಿದ್ದಾರೆ.
18 ಮೆಟ್ಟಿಲು ಏರುವಲ್ಲಿ ಅತ್ಯಧಿಕ ದಟ್ಟಣೆ
ಸದ್ಯದ ಪರಿಸ್ಥಿತಿಯಲ್ಲಿ ಅಯ್ಯಪ್ಪನ ದರ್ಶನ, ಪೂಜೆ ಪುನಸ್ಕಾರಗಳಿಗಾಗಿ ಪವಿತ್ರ 18 ಮೆಟ್ಟಿಲುಗಳನ್ನು ಏರುವ ಯಾತ್ರಿಕರ ಹರಿವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವಲ್ಲಿ ಅಧಿಕಾರಿಗಳು ವಿಫಲವಾಗಿದ್ದಾರೆ. ಹಿಂದಿನ ವರ್ಷಗಳಲ್ಲಿ ಪ್ರತಿ ನಿಮಿಷಕ್ಕೆ ಸರಿಸುಮಾರು 90 ಯಾತ್ರಿಕರು ಈ ಮೆಟ್ಟಿಲು ಏರಲು ಸಾಧ್ಯವಾಗುತ್ತಿತ್ತು. ಆದರೆ ಈಗ ಈ ಸಂಖ್ಯೆ ಪ್ರತಿ ನಿಮಿಷಕ್ಕೆ 50-60 ಯಾತ್ರಿಗಳಿಗೆ ಮಾತ್ರ ಸಾಧ್ಯವಾಗುತ್ತಿದೆ. ಅಷ್ಟರ ಮಟ್ಟಿನ ಪರಿಸ್ಥಿತಿ ಅಲ್ಲಿದೆ ಎಂದು ಅವರು ವಿವರಿಸಿದರು.
ಯಾತ್ರಾರ್ಥಿಗಳಿಗೆ ಪಂಪಾ ತಲುಪಲು KSRTC ಬಸ್‌ಗಳನ್ನು ಅವಲಂಬಿಸುವಂತೆ ಮಾಡಿದ್ದಾರೆ. ಈ ಬಸ್‌ಗಳು ಆಗಾಗ್ಗೆ ಕಿಕ್ಕಿರಿದು ತುಂಬಿರುತ್ತವೆ ಅಲ್ಲದೇ ಯಾತ್ರಾರ್ಥಿಗಳ ಮೇಲೆ ದುಬಾರಿ ಶುಲ್ಕವನ್ನು ವಿಧಿಸುತ್ತವೆ. ಸಾಕಷ್ಟು ಸಂಖ್ಯೆಯ ಬಸ್‌ಗಳ ಕೊರತೆಯೂ ನೀಲಕಲ್‌ನಲ್ಲಿ ದಟ್ಟಣೆಗೆ ಕಾರಣವಾಗಿದೆ.
ಪಾರ್ಕಿಂಗ್ ವ್ಯವಸ್ಥೆ ಇಲ್ಲ: ಭಕ್ತರಿಗೆ ಮೂಲಸೌಕರ್ಯ ಸಿಗುತ್ತಿಲ್ಲ
ಇನ್ನೂ ಪಂಪಾ ಸೇರಿದಂತೆ ಬೆಟ್ಟದಲ್ಲಿ ವಾಹನಗಳಿಗೆ ಸೂಕ್ತ ನಿಲುಗಡೆಗೆ ವ್ಯವಸ್ಥೆ ಇಲ್ಲದಾಗಿದೆ. ಈ ಕಾರಣದಿಂದಲೇ ಅನೇಕ ವಾಹನಗಳು ಮಾರ್ಗಮಧ್ಯೆದಲ್ಲಿಯೇ ನಿಲ್ಲುವ ಅನಿವಾರ್ಯತೆ ಎದುರಾಗಿದೆ. ಇಲ್ಲಿ ಮಕ್ಕಳು ಸೇರಿದಂತೆ ಭಕ್ತರು ಕನಿಷ್ಠ ಮೂಲಭೂತ ಸೌಕರ್ಯಗಳು ಸಿಗದೇ ಪರಡಾಡುವ ಸ್ಥಿತಿ ನಿರ್ಮಾಣವಾಗಿದೆ.
ಪಂಪಾದಲ್ಲಿ ಸಣ್ಣ ವಾಹನಗಳಿಗೆ ಪಾರ್ಕಿಂಗ್ ಸೌಲಭ್ಯಗಳನ್ನು ಸ್ಥಾಪಿಸುವುದು ನಿರ್ಣಾಯಕ ಪಾತ್ರ ವಹಿಸುತ್ತದೆ. ಕಾರಣ ಇದು ವಾಹನ ದಟ್ಟಣೆ ಕಡಿಮೆ ಮಾಡಲು ಸಾಧ್ಯವಾಗುತ್ತದೆ. ಈ ಬಾರಿ ಇದು ಸಹ ಸಾಧ್ಯವಾಗಿಲ್ಲ. ಆದ್ದರಿಂದ ಹಾಲಿ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ತರ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಪುನರುಚ್ಚರಿಸಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್












Click it and Unblock the Notifications