Sabarimala online ticket: ಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರು ಗಮನಿಲೇಬೇಕಾದ ಮಹತ್ವದ ಮಾಹಿತಿ ಇಲ್ಲಿದೆ
Sabarimala online ticket: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ್ ಪಡೆಯಲಿ ತೆರಳುವ ಭಕ್ತರಿಗೆ ಕೇರಳ ಸರ್ಕಾರ ಮಹತ್ವದ ಸಂದೇಶದವೊಂದನ್ನು ಹೊರಡಿಸಿದೆ. ಶಬರಿಮಲೆ ಯಾತ್ರೆಗೆ ಇನ್ನು ಆನ್‌ಲೈಕ್ ಬುಕಿಂಗ್ ಕಡ್ಡಾಯ ಮಾಡಲಾಗಿದ್ದು, ಪ್ರತಿದಿನ 80,000 ಭಕ್ತರಿಗೆ ಅವಕಾಶ ಇರುತ್ತದೆ. ದಟ್ಟಣೆಯನ್ನು ನಿಯಂತ್ರಿಸಲು ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ.
ಪ್ರಸಿದ್ಧ ಶಬರಿಮಲೆ ದೇವಾಲಯದ ವಾರ್ಷಿಕ ಮಂಡಲಂ ಮಕರವಿಳಕ್ಕು ಯಾತ್ರೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ವರ್ಷ ಆನ್ಲೈನ್ ನಲ್ಲಿ ಬುಕ್ ಮಾಡಿದವರಿಗೆ ಮಾತ್ರ ಶಬರಿಮಲೆಗೆ ಪ್ರವೇಶ ನೀಡಲು ಕೇರಳ ಸರ್ಕಾರ ನಿರ್ಧಾರ ಕೈಗೊಂಡಿದೆ.

ಕಳೆದ ವರ್ಷ ಲಕ್ಷಾಂತರ ಭಕ್ತರು ದರ್ಶನಕ್ಕೆ ಆಗಮಿಸಿದ್ದರು. ಆದ್ದರಿಂದ ನಿರ್ವಹಿಸಲು ಸೂಕ್ತ ವ್ಯವಸ್ಥೆ ಮಾಡಿಕೊಳ್ಳದ ಕಾರಣ ಭಾರಿ ಅವ್ಯವಸ್ಥೆ ಉಂಟಾಗಿತ್ತು. ಭಕ್ತರು ದಿನಗಟ್ಟಲೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಸರ್ಕಾರದ ವಿರುದ್ಧ ಆಕ್ರೋಶಗಳು ಭುಗಿಲೆದ್ದಿದ್ದವು. ಈ ಹಿನ್ನೆಲೆ ಭಕ್ತರ ನಿರ್ವಹಣೆ ಸಮರ್ಪಕ ಆಗಿಸುವ ಹಿನ್ನೆಲೆ ಆನ್‌ಲೈನ್‌ನಲ್ಲಿ ಟಿಕೆಟ್ ಬುಕ್ ಮಾಡಿದವರಿಗೆ ಮಾತ್ರ ಅವಕಾಶ ಕಲ್ಪಿಸಲು ಸರ್ಕಾರ ನಿರ್ಧರಿಸಿದೆ.
ಕೇವಲ ಮೂರೇ ದಿನಕ್ಕೆ 1.23 ಕೋಟಿ ಆದಾಯ: ಹಾನೂರು ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮೂರು ದಿನಗಳ ಕಾಲ ಮಹಾಲಯ ಅಮವಾಸ್ಯೆ ಜಾತ್ರಾ ಮಹೋತ್ಸವ ಆಚರಣೆ ಮಾಡಿದ್ದರು. ಈ ಸಮಯದಲ್ಲಿ ಆಗಮಿಸಿದ್ದ ಲಕ್ಷಾಂತರ ಭಕ್ತಾದಿಗಳಿಂದ ಕೇವಲ ಮೂರು ದಿನಗಳ ಅವಧಿಯಲ್ಲಿ 1.23 ಕೋಟಿ ಆದಾಯ ಹರಿದುಬಂದಿದೆ.
ಸೆಪ್ಟೆಂಬರ್ 30, ಅಕ್ಟೋಬರ್ 1 ಹಾಗೂ 2ರ ಅವಧಿಯಲ್ಲಿ ನಡೆದ ಮಹಾಲಯ ಅಮಾವಾಸ್ಯೆ ಜಾತ್ರಾ ಮಹೋತ್ಸವ ದಿನಗಳಲ್ಲಿ ಹೆಚ್ಚಿನ ಭಕ್ತಾದಿಗಳು ಆಗಮಿಸಿ ಚಿನ್ನದ ರಥೋತ್ಸವ, ಬೆಳ್ಳಿ ರಥೋತ್ಸವ ಹುಲಿ ವಾಹನ, ರುದ್ರಾಕ್ಷಿ ವಾಹನ ಬಸವ ಮಂಟಪ, ಲಾಡು ಮಾರಾಟ, ವಿವಿಧ ಸೇವೆಗಳು ಅಕ್ಕಿ ಸೇವೆ, ಮಿಶ್ರ ಪ್ರಸಾದ, ಪುದುವಟ್ಟು, ಮಾಹಿತಿ ಕೇಂದ್ರ ಹಾಗೂ ತಾಳಬೆಟ್ಟ ಭವನಗಳಿಂದ, ಪಾರ್ಕಿಂಗ್, ಕಲ್ಲುಸಕ್ಕರೆ, ತೀರ್ಥ, ಬ್ಯಾಗ್ ಮಾರಾಟದಿಂದ 1,23,91,458 ರೂಪಾಯಿ ಆದಾಯ ಬಂದಿದೆ.
ಮೂರು ದಿನಗಳ ಅವಧಿಯಲ್ಲಿ ವಿವಿಧ ಉತ್ಸವಗಳಾದ 468 ಚಿನ್ನದ ರಥೋತ್ಸವ, 34 ಬೆಳ್ಳಿ ರಥೋತ್ಸವ, 574 ಬಸವ ವಾಹನ, 7,112 ಹುಲಿ ವಾಹನ, 288 ರುದ್ರಾಕ್ಷಿ ವಾಹನದ ಹರಕೆ ಸಲ್ಲಿಕೆ ಮೂಲಕ 38,48,251 ರೂಪಾಯಿ ಆದಾಯ ಬಂದಿದೆ. ಅಕ್ಟೋಬರ್ 3ರಿಂದ ನವರಾತ್ರಿ ಪ್ರಾರಂಭವಾಗಿದ್ದು, ದೀಪಾವಳಿ ಕಾರ್ತಿಕ ಮಾಸ ಪ್ರಯುಕ್ತ ಶ್ರೀ ಕ್ಷೇತ್ರಕ್ಕೆ ಹೆಚ್ಚಿನ ಭಕ್ತಾದಿಗಳು ಆಗಮಿಸುವ ನಿರೀಕ್ಷೆ ಇರುವುದರಿಂದ ಇನ್ನು ಹೆಚ್ಚಿನ ಆದಾಯ ನಿರೀಕ್ಷಿಸಲಾಗಿದೆ.
ಅಕ್ಟೋಬರ್ 3ರಿಂದ ನವರಾತ್ರಿ ಪೂಜೆ ಮಹೋತ್ಸವ ಪ್ರಾರಂಭವಾಗಿದ್ದು, ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಮಹಾನವಮಿ ಆಯುಧ ಪೂಜೆ, ವಿಜಯದಶಮಿ, ದೀಪಾವಳಿ ಜಾತ್ರಾ ಮಹೋತ್ಸವ ಕಾರ್ತಿಕ ಮಾಸ ಪ್ರಾರಂಭವಾಗುವುದರಿಂದ ಲಕ್ಷಾಂತರ ಭಕ್ತಾದಿಗಳು ಆಗಮಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಪ್ರಾಧಿಕಾರದ ಅಧ್ಯಕ್ಷರಾದ ಮುಖ್ಯಮಂತ್ರಿಗಳು, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಹಾಗೂ ಜಿಲ್ಲಾಡಳಿತದ ಸಹಕಾರದ ವತಿಯಿಂದ ಮಹಾಲಯ ಜಾತ್ರಾ ಅಮಾವಾಸ್ಯೆ ಯಶಸ್ವಿಯಾಗಿ ನೆರವೇರಿದೆ. ಮುಂದಿನ ದಿನಗಳಲ್ಲಿ ವಿಜಯದಶಮಿ ಹಾಗೂ ದೀಪಾವಳಿ ಜಾತ್ರಾ ಮಹೋತ್ಸವ ಇರುವ ಹಿನ್ನೆಲೆ ಭಕ್ತರಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಈಗಿನಿಂದಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಎ.ಈ.ರಘು ತಿಳಿಸಿದ್ದಾರೆ.












Click it and Unblock the Notifications