Sabarimala pilgrimage: ಶಬರಿಮಲೆ ಯಾತ್ರಿಗಳ ಗಮನಕ್ಕೆ- ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಈ ನಿಲ್ದಾಣದಲ್ಲಿ ನಿಲುಗಡೆ, ಮಾಹಿತಿ,
ತಿರುವನಂತಪುರಂ, ಅಕ್ಟೋಬರ್ 20: ಮುಂಬರುವ ಶಬರಿಮಲೆ ಯಾತ್ರೆಯನ್ನು ಗಮನದಲ್ಲಿಟ್ಟುಕೊಂಡು ಮಹತ್ವದ ಬದಲಾವಣೆಯನ್ನು ಮಾಡಲಾಗಿದೆ. ಶಬರಿಮಲೆ ಸಮೀಪದ ಚೆಂಗನ್ನೂರಿನಲ್ಲಿ ಕಾಸರಗೋಡು-ತಿರುವನಂತಪುರಂ ವಂದೇ ಭಾರತ್ ರೈಲನ್ನು ನಿಲ್ಲಿಸಲು ಭಾರತೀಯ ರೈಲ್ವೆ ಇಲಾಖೆ ಒಪ್ಪಿಗೆ ನೀಡಿದೆ. ಈ ಸಂಬಂಧ ರೈಲ್ವೆ ಇಲಾಖೆಯಿಂದ ದಕ್ಷಿಣ ರೈಲ್ವೇಗೆ ಅಧಿಸೂಚನೆ ಕಳುಹಿಸಲಾಗಿದೆ.
ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಮಾಹಿತಿ ಹಂಚಿಕೊಂಡಿರುವ ಕೇಂದ್ರ ರಾಜ್ಯ ರೈಲ್ವೆ ಸಚಿವ ಮತ್ತು ಬಿಜೆಪಿ ನಾಯಕ ವಿ ಮುರಳೀಧರನ್ ಅಧಿಸೂಚನೆಯನ್ನು ಪೋಸ್ಟ್ ಮಾಡಿದ್ದಾರೆ.

ಅಧಿಸೂಚನೆಯ ಪ್ರಕಾರ, ಚೆಂಗನ್ನೂರಿನಲ್ಲಿ ನಿಲ್ದಾಣದಲ್ಲಿ ಪರಿಶೀಲನೆ ಮಾಡಲಾಗುತ್ತದೆ. ಟಿಕೆಟ್‌ಗಳ ಮಾರಾಟದ ಮೇಲೆ ತೀವ್ರ ನಿಗಾ ಇರಿಸಲಾಗುತ್ತದೆ.
ಸೆಪ್ಟೆಂಬರ್‌ನಲ್ಲಿ ಮುರಳೀಧರನ್ ಅವರು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಚೆಂಗನ್ನೂರು ರೈಲು ನಿಲ್ದಾಣದಲ್ಲಿ ನಿಲುಗಡೆಗೆ ಅವಕಾಶ ನೀಡುವಂತೆ ಮನವಿ ಮಾಡಿದರು.
'ಚೆಂಗನ್ನೂರ್ ರೈಲು ನಿಲ್ದಾಣವು ಪ್ರಾಥಮಿಕವಾಗಿ ನಾಲ್ಕು ಜಿಲ್ಲೆಗಳಿಗೆ ಅವಕಾಶ ಕಲ್ಪಿಸುತ್ತದೆ. ಅಲಪ್ಪುಳ, ಕೊಲ್ಲಂ, ಪತ್ತನಂತಿಟ್ಟ ಮತ್ತು ಕೊಟ್ಟಾಯಂಗೆ ಇದು ಸೇವೆ ಸಲ್ಲಿಸುತ್ತದೆ. 2009 ರಲ್ಲಿ ಚೆಂಗನ್ನೂರ್ ರೈಲು ನಿಲ್ದಾಣವನ್ನು 'ಗೇಟ್‌ವೇ ಆಫ್ ಶಬರಿಮಲೆ' ಎಂದು ಭಾರತೀಯ ರೈಲ್ವೆ ಘೋಷಿಸಿದೆ.

ಶಬರಿಮಲೆಯು ಭಗವಾನ್ ಅಯ್ಯಪ್ಪನ ಪವಿತ್ರ ವಾಸಸ್ಥಾನವಾಗಿದೆ. ಇದು ದೇಶದ ಪ್ರಮುಖ ಹಿಂದೂ ಯಾತ್ರಾ ಕೇಂದ್ರಗಳಲ್ಲಿ ಒಂದಾಗಿದೆ ಎಂದು ಮುರುಳಿದರನ್ ಅವರು ಪತ್ರದಲ್ಲಿ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಚೆಂಗನ್ನೂರ್ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ನಿಲ್ಲಿಸಲು ಮನವಿ ಮಾಡಿದ್ದರು.
ಈ ಕುರಿತು ಟ್ವೀಟ್ ಮಾಡಿರುವ ಅವರು, 'ಅಯ್ಯಪ್ಪ ದೇವರ ಭಕ್ತರಿಗೆ ಒಳ್ಳೆಯ ಸುದ್ದಿ. ವಿನಂತಿಯನ್ನು ಪರಿಗಣಿಸಿ ಕಾಸರಗೋಡಿಗೆ ಅನುಕೂಲ ಕಲ್ಪಿಸಿದ್ದಕ್ಕಾಗಿ ಗೌರವಾನ್ವಿತ ಕೇಂದ್ರ ರೈಲ್ವೆ ಸಚಿವ ಅಶ್ವೀನಿ ವೈಷ್ಣವ್ ಅವರಿಗೆ ಧನ್ಯವಾದಗಳು. ಶಬರಿಮಲೆಯ ಹೆಬ್ಬಾಗಿಲು ಎಂದು ಕರೆಯಲ್ಪಡುವ ಚೆಂಗನ್ನೂರಿನಲ್ಲಿ ವಂದೇ ಭಾರತ್ ರೈಲು ನಿಲುಗಡೆಯಾಗಲಿದೆ' ಎಂದು ಮುರಳೀಧರನ್ 'ಎಕ್ಸ್' ನಲ್ಲಿ ಬರೆದುಕೊಂಡಿದ್ದಾರೆ.
ಹೊಸ ನಿಲ್ದಾಣವು ಶಬರಿಮಲೆ ಯಾತ್ರಾರ್ಥಿಗಳಿಗೆ ಭಾರೀ ಅನುಕಲು ಮಾಡಿಕೊಡಲಿದೆ. ಆಲಪ್ಪುಳ, ಕೊಲ್ಲಂ, ಪತ್ತನಂತಿಟ್ಟ ಮತ್ತು ಕೊಟ್ಟಾಯಂನ ಜನರ ಪ್ರಯಾಣವನ್ನು ಸುಗಮಗೊಳಿಸುತ್ತದೆ ಎಂದು ಮುರಳೀಧರನ್ ಹೇಳಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕೇರಳದ ಜನರ ಕಲ್ಯಾಣಕ್ಕಾಗಿ ಹೊಂದಿರುವ ಕಾಳಜಿಯನ್ನು ಈ ನಿರ್ಧಾರವು ಪ್ರತಿಬಿಂಬಿಸುತ್ತದೆ ಎಂದು ಬರೆಕೊಂಡಿದ್ದಾರೆ.

ಹೊಸ ನಿಲ್ದಾಣದ ಪರಿಚಯದೊಂದಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಸಮಯ ಬದಲಾಗುತ್ತದೆ. ಶಬರಿಮಲೆಯ ವಾರ್ಷಿಕ ಮಂಡಲ-ಮಕರವಿಳಕ್ಕು ಋತುವು ನವೆಂಬರ್ 17 ರಂದು ಪ್ರಾರಂಭವಾಗುತ್ತದೆ.












Click it and Unblock the Notifications