ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Sabarimala Verdict: ವಿಸ್ತೃತ ಪೀಠಕ್ಕೆ ಶಬರಿಮಲೆ ಪ್ರಕರಣ ವರ್ಗಾವಣೆ

|
Google Oneindia Kannada News

ನವದೆಹಲಿ, ನವೆಂಬರ್ 14: ಕೇರಳದ ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಹೇರಿದ್ದ ನಿರ್ಬಂಧವನ್ನು ತೆರವುಗೊಳಿಸಿದ್ದ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಸಲ್ಲಿಸಲಾದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.

2018 ರ ಸೆಪ್ಟೆಂಬರ್ ನಲ್ಲಿ ಸುಪ್ರೀಂ ಕೋರ್ಟ್ ಶಬರಿಮಲೆಗೆ ಮಹಿಳೆಯರು ಪ್ರವೇಶಿಸಲು ಅನುಮತಿ ನೀಡಿತ್ತು. ಆದರೆ ಈ ತೀರ್ಪನ್ನು ಮರುಪರಿಶೀಲಿಸಬೇಕು ಎಂದು ಒಟ್ಟು 56 ಅರ್ಜಿಗಳು ಸಲ್ಲಿಕೆಯಾಗಿದ್ದವು. ಅವೆಲ್ಲವುಗಳ ವಿಚಾರಣೆಯನ್ನು ಕೋರ್ಟು ಮುಗಿಸಿದ್ದು, ಇಂದು ತೀರ್ಪು ಪ್ರಕಟಿಸಬೇಕಿತ್ತು.

ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಅನುಮತಿ: ಸುಪ್ರೀಂನಿಂದ ಐತಿಹಾಸಿಕ ತೀರ್ಪು

ದೇವಸ್ಥಾನದ ಆಡಳಿತ ಮಂಡಳಿಯ ನಿಯಮಾವಳಿ ಪ್ರಕಾರ 10ರಿಂದ 50 ವರ್ಷ ವಯಸ್ಸಿನ ಮಹಿಳೆಯರು ದೇವಸ್ಥಾನದ ಆವರಣಕ್ಕೆ ಭೇಟಿ ನೀಡಲು ಅವಕಾಶವಿರಲಿಲ್ಲ. ಋತುಮತಿಯಾಗುವ ವಯಸ್ಸಿನ ಹೆಣ್ಣುಮಕ್ಕಳು ದೇವಾಲಯದ ಆವರಣಕ್ಕೆ ಪ್ರವೇಶಿಸಿದರೆ ಮಂದಿರದ ಪಾವಿತ್ರ್ಯಕ್ಕೆ ಧಕ್ಕೆಯಾಗುತ್ತದೆ ಎಂಬುದು ದೇವಾಲಯದ ಆಡಳಿತ ಮಂಡಳಿಯ ವಾದವಾಗಿತ್ತು. ಆದರೆ 2018 ರ ಸೆಪ್ಟೆಂಬರ್ ನಲ್ಲಿ ಈ ನಿಷೇಧವನ್ನು ತೆರವುಗೊಳಿಸಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿತ್ತು. ಮಹಿಳೆಯರು ದೇವಾಲಯ ಪ್ರವೇಶಿಸಬಹುದು ಎಂದತ್ತು.

Sabarimala Verdict Live Updates: Supreme Court To Deliver Judgement

ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿಯ ತೀರ್ಪಿನ ಕುರಿತ ಕ್ಷಣ ಕ್ಷಣದ ಮಾಹಿತಿಯನ್ನು 'ಒನ್ ಇಂಡಿಯಾ ಕನ್ನಡ' ಇಲ್ಲಿ ನೀಡಲಿದೆ.

Newest FirstOldest First
10:59 AM, 14 Nov

ಏಳು ನ್ಯಾಯಮೂರ್ತಿಗಳ ವಿಸ್ತೃತ ಪೀಠದಲ್ಲಿ ಮುಂದಿನ ಮುಖ್ಯನ್ಯಾಯಮೂರ್ತಿ ಎಸ್.ವೆ.ಬೊಬ್ಡೆ ಅವರೂ ಇರಲಿದ್ದಾರೆ.
10:52 AM, 14 Nov

3:2 ಅನುಪಾತದಲ್ಲಿ ನ್ಯಾಯಮೂರ್ತಿಗಳು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಬೇಕೆಂದು ಅಭಿಪ್ರಾಯಪಟ್ಟಿದ್ದಾರೆ.
10:42 AM, 14 Nov

ವಿಸ್ತೃತ ಪೀಠಕ್ಕೆ ಶಬರಿಮಲೆ ಪ್ರಕರಣ ವರ್ಗಾವಣೆ
10:41 AM, 14 Nov

ಒಂದೇ ಧರ್ಮದ ಎರಡೂ ಪಂಗಡಗಳಿಗೂ ದೇವಾಲಯ ಪ್ರವೇಶಕ್ಕೆ ಅವಕಾಶವಿದೆ: ಸುಪ್ರೀಂ ಕೋರ್ಟ್
10:39 AM, 14 Nov

ದೇವಾಲಯ ಪ್ರವೇಶಕ್ಕೆ ಮಹಿಳೆ ಮತ್ತು ಪುರುಷರಿಗೆ ಸಮಾನ ಹಕ್ಕಿದೆ: ಸುಪ್ರೀಂ ಕೋರ್ಟ್
10:38 AM, 14 Nov

ತೀರ್ಪು ಓದುತ್ತಿರುವ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್
10:37 AM, 14 Nov

ತೀರ್ಪಿಗೆ ಐವರು ನ್ಯಾಯಮೂರ್ತಿಗಳೂ ಸಹಿ ಹಾಕಿದ್ದಾರೆ.
Advertisement
10:36 AM, 14 Nov

ತೀರ್ಪು ಓದಲು ಆರಂಭಿಸಿದ ನ್ಯಾಯಮೂರ್ತಿಗಳು
10:29 AM, 14 Nov

ಕೆಲವೇ ಕ್ಷಣಗಳಲ್ಲಿ ತೀರ್ಪು ಪ್ರಕಟ
10:07 AM, 14 Nov

ಇಂದು ಬೆಳಿಗ್ಗೆ 10:30 ಕ್ಕೆ ತೀರ್ಪು ಬಿಡುಗಡೆಯಾಗಲಿದೆ.
9:55 AM, 14 Nov

ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಇದುವರೆಗೆ ಸುಮಾರು 50ಕ್ಕೂ ಹೆಚ್ಚು ಮಹಿಳೆಯರು ದೇವಾಲಯ ಪ್ರವೇಶ ಮಾಡಿದ್ದಾರೆ ಎಂದು ಕೇರಳ ಸರ್ಕಾರ ಮಾಹಿತಿ ನೀಡಿತ್ತು.
9:21 AM, 14 Nov

ಋತುಮತಿಯಾಗುವ ವಯಸ್ಸಿನ ಹೆಣ್ಣುಮಕ್ಕಳು ದೇವಾಲಯದ ಆವರಣಕ್ಕೆ ಪ್ರವೇಶಿಸಿದರೆ ಮಂದಿರದ ಪಾವಿತ್ರ್ಯಕ್ಕೆ ಧಕ್ಕೆಯಾಗುತ್ತದೆ ಎಂಬುದು ದೇವಾಲಯದ ಆಡಳಿತ ಮಂಡಳಿಯ ವಾದವಾಗಿತ್ತು.
Advertisement
9:07 AM, 14 Nov

ದೇವಸ್ಥಾನದ ಆಡಳಿತ ಮಂಡಳಿಯ ನಿಯಮಾವಳಿ ಪ್ರಕಾರ 10ರಿಂದ 50 ವರ್ಷ ವಯಸ್ಸಿನ ಮಹಿಳೆಯರು ದೇವಸ್ಥಾನದ ಆವರಣಕ್ಕೆ ಭೇಟಿ ನೀಡಲು ಅವಕಾಶವಿರಲಿಲ್ಲ.
8:47 AM, 14 Nov

ಇದೀಗ ಮೇಲ್ಮನವಿ ಅರ್ಜಿ ತೀರ್ಪು ನೀಡಲಿರುವ ಪಂಚ ಸದಸ್ಯ ಸಾಂವಿಧಾನಿಕ ಪೀಠದಲ್ಲಿ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯ್, ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ, ಆರ್.ಎಫ್. ನಾರಿಮನ್, ಎ.ಎಂ.ಖಾನ್ವಿಲ್ಕರ್ ಮತ್ತು ಇಂದು ಮಲ್ಹೋತ್ರಾ ಅವರಿದ್ದಾರೆ. ಗುರುವಾರ ಬೆಳಿಗ್ಗೆ 10:30 ಕ್ಕೆ ತೀರ್ಪು ಹೊರಬೀಳುವ ಸಾಧ್ಯತೆ ಇದೆ.
8:34 AM, 14 Nov

ಮಹಿಳೆಯಾಗಿ ನೀವು ಪುರುಷರಂತೆಯೇ ಪೂಜಿಸುವ ಹಕ್ಕನ್ನು ಹೊಂದಿದ್ದೀರಿ. ಇದಕ್ಕೆ ಕಾನೂನಿನ ಬೆಂಬಲ ಪಡೆಯುವ ಅವಶ್ಯಕತೆಯಿಲ್ಲ. ಇದು ಸಂವಿಧಾನದಲ್ಲಿಯೇ ಇದೆ ಎಂದು ಅದು ಹೇಳಿತ್ತು.
8:17 AM, 14 Nov

ದೇವಸ್ಥಾನದೊಳಗೆ ಪ್ರವೇಶ ನಿರಾಕರಿಸುವ ಮಂಡಳಿ ನಿಯಮಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಸುಪ್ರೀಂ ಕೋರ್ಟ್, ಭಾರತೀಯ ಸಂವಿಧಾನದ 25 (1) ವಿಧಿಯ ಅಡಿ ಕಾನೂನು ಪೂಜಿಸುವ ಹಕ್ಕನ್ನು ಪ್ರತಿಯೊಬ್ಬರಿಗೂ ಸಮಾನವಾಗಿ ನೀಡಿದೆ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.
8:01 AM, 14 Nov

ಅಚ್ಚರಿ ಯೆಂದರೆ 4:1 ಅನುಪಾತದ ಈ ತೀರ್ಪನ್ನು ಪಂಚಸದಸ್ಯ ಪೀಠದಲ್ಲಿದ್ದ ಏಕೈಕ ಮಹಿಳೆ ಇಂದು ಮಲ್ಹೋತ್ರಾ ವಿರೋಧಿಸಿದ್ದರು!
7:45 AM, 14 Nov

ಸುಪ್ರೀಂ ಕೋರ್ಟ್ ನ ಅಂದಿನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾಯಮೂರ್ತಿಗಳಾದ ಆರ್‌ಎಫ್ ನಾರಿಮನ್, ಎಎಂ ಖಾನ್ವಿಲ್ಕರ್, ಡಿವೈ ಚಂದ್ರಚೂಡ ಮತ್ತು ಇಂದೂ ಮಲ್ಹೋತ್ರಾ ಅವರನ್ನೊಳಗೊಂಡ ಪಂಚ ಸದಸ್ಯ ಪೀಠ, ಮಹಿಳೆಯರಿಗೆ ಪ್ರವೇಶ ನೀಡುವಂತೆ ಆದೇಶ ನೀಡಿತ್ತು.
7:31 AM, 14 Nov

2018 ರ ಸೆಪ್ಟೆಂಬರ್ ನಲ್ಲಿ ಮಹತ್ವದ ತೀರ್ಪು ನೀಡಿದ್ದ ನ್ಯಾಯಾಲಯ ಸುಮಾರು 800 ವರ್ಷಗಳಿಂದ ದೇವಾಯ ಪ್ರವೇಶಕ್ಕೆ ಹೇರಿದ್ದ ನಿರ್ಬಂಧವನ್ನು ತೆರವುಗೊಳಿಸಿತ್ತು. ಇದನ್ನು ವಿರೋಧಿಸಿ ಸುಮಾರು 56 ಮೇಲ್ಮನವಿಗಳು ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದವು. ಈ ಎಲ್ಲವುಗಳ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, ಮಹತ್ವದ ತೀರ್ಪು ನೀಡಲಿದೆ.

English summary
Sabarimala Review Petition Verdict Live Updates in Kannada: Supreme Court Refers The Case To Larger Bench.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X