ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಬರಿಮಲೆ ದೇವಸ್ಥಾನ: ಮಹಿಳೆಯರಿಗೆ ಪ್ರವೇಶ ನೀಡಲು ಕೇರಳ ಸರ್ಕಾರ ಒಲವು

|
Google Oneindia Kannada News

ನವದೆಹಲಿ, ಆಗಸ್ಟ್ 1: ಪ್ರಸಿದ್ಧ ಶಬರಿಮಲೆ ದೇವಸ್ಥಾನದ ಒಳಗೆ 10-50 ವರ್ಷದ ಮಹಿಳೆಯರಿಗೆ ಪ್ರವೇಶ ನಿಷೇಧಿಸಲು ಸಂವಿಧಾನದ ಅಡಿಯಲ್ಲಿ ಅವಕಾಶವಿಲ್ಲ ಎಂದು ಕೇರಳ ಸರ್ಕಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ.

ಅಲ್ಲದೆ, ಮಹಿಳೆಯರಿಗೆ ಪ್ರವೇಶಾವಕಾಶ ನಿಷೇಧಿಸಲು ದೇವಸ್ಥಾನದ ಆಡಳಿತ ಮಂಡಳಿಯು ಹಕ್ಕು ಪ್ರತಿಪಾದಿಸಲು ಸಾಧ್ಯವಿಲ್ಲ ಎಂದು ಸಹ ಸರ್ಕಾರ ಹೇಳಿದೆ.

ಶಬರಿಮಲೆ ದೇವಸ್ಥಾನದೊಳಗೆ ಮಹಿಳೆಯರಿಗೆ ಪ್ರವೇಶ ನಿರಾಕರಿಸುವಂತಿಲ್ಲಶಬರಿಮಲೆ ದೇವಸ್ಥಾನದೊಳಗೆ ಮಹಿಳೆಯರಿಗೆ ಪ್ರವೇಶ ನಿರಾಕರಿಸುವಂತಿಲ್ಲ

ಶಬರಿಮಲೆ ದೇವಸ್ಥಾನದೊಳಗೆ ಮಹಿಳೆಯರಿಗೆ ಪ್ರವೇಶ ನಿಷೇಧಿಸುವ ವಿವಾದದ ಕುರಿತಾದ ವಾದಗಳನ್ನು ಪೂರ್ಣಗೊಳಿಸಿರುವ ತೀರ್ಪನ್ನು ಸುಪ್ರೀಂಕೋರ್ಟ್ ಬುಧವಾರ ಕಾಯ್ದಿರಿಸಿದೆ.

sabarimala women entry supreme court reserved verdict

ದೇವಸ್ಥಾನದ ಒಳಗೆ ಮಹಿಳೆಯರಿಗೆ ಪ್ರವೇಶ ನಿರಾಕರಿಸಲು ಬ್ರಹ್ಮಚರ್ಯದ ನೆಪವೊಡ್ಡಲು ಸಾಧ್ಯವಿಲ್ಲ ಎಂದಿರುವ ಕೇರಳ ಸರ್ಕಾರ ಅದಕ್ಕೆ ಶಂಕರಾಚಾರ್ಯರ ಉದಾಹರಣೆಯನ್ನು ನೀಡಿದೆ.

ಕೇರಳದ ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶ ನಿರಾಕರಿಸುವುದು ಕಾನೂನಿಗೆ ವಿರುದ್ಧ ಎಂದು ಸುಪ್ರೀಂಕೋರ್ಟ್ ಹೇಳಿತ್ತು.

ಶಬರಿಮಲೆಗೆ ಬರುವ ಪುರುಷ ಭಕ್ತರ ಪರಿಶುದ್ಧತೆಗೆ ಪರೀಕ್ಷಿಸಿ: ಟ್ವಿಂಕಲ್ಶಬರಿಮಲೆಗೆ ಬರುವ ಪುರುಷ ಭಕ್ತರ ಪರಿಶುದ್ಧತೆಗೆ ಪರೀಕ್ಷಿಸಿ: ಟ್ವಿಂಕಲ್

ಯಾವ ಆಧಾರದಲ್ಲಿ ನೀವು ಮಹಿಳೆಯರಿಗೆ ಪ್ರವೇಶ ನಿರಾಕರಿಸಿದ್ದೀರಿ ಎಂದು ದೇವಸ್ಥಾನದ ಆಡಳಿತ ಮಂಡಳಿಯನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು.

English summary
Supreme Court on August 1 reserved its verdict on the case of controversial ban of entry for women in to Sabarimala Temple of Kerala.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X