ಸಾಯಿಬಾಬಾ ಸಮಾಧಿ ಶತಮಾನೋತ್ಸವಕ್ಕೆ ಸಚಿನ್, ಬಿಗ್ ಬಿ ರಾಯಭಾರಿ?
ಶ್ರೀ ಸಾಯಿಬಾಬಾ ಅವರು ಸಮಾಧಿಗ್ರಸ್ಥರಾಗಿ ನೂರು ವರ್ಷ ಪೂರೈಸುತ್ತಿರುವ ಹಿನ್ನೆಲೆ. ಈ ಮಹೋತ್ಸವಕ್ಕೆ ಅಮಿತಾಭ್ ಬಚ್ಚನ್ ಅಥವಾ ಸಚಿನ್ ತೆಂಡೂಲ್ಕರ್ ಅವರಲ್ಲೊಬ್ಬರನ್ನು ರಾಯಭಾರಿಯನ್ನಾಗಿಸಲು ಮಂಡಳಿ ನಿರ್ಧಾರ.
ಮುಂಬೈ, ಜುಲೈ 5: ಶಿರಡಿ ಸಾಯಿಬಾಬಾ ಅವರ ಸಮಾಧಿ ಸ್ಥಿತಿಗೊಳಪಟ್ಟು ನೂರು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಇದೇ ತಿಂಗಳ ಅಕ್ಟೋಬರ್ ನಿಂದ ಒಂದು ವರ್ಷಗಳ ಕಾಲ ಮಹೋತ್ಸವವನ್ನು ಆಚರಿಸಲು ಶಿರಡಿ ಸಾಯಿಬಾಬಾ ದೇಗುಲದ ಆಡಳಿತ ಮಂಡಳಿಯಾದ ಶ್ರೀ ಶಿರಡಿ ಸಾಯಿಬಾಬಾ ಸಂತಾನಂ ಟ್ರಸ್ಟ್ (ಎಸ್ಎಸ್ಎಸ್ ಟಿ) ನಿರ್ಧರಿಸಿದೆ.
ಈ ಒಂದು ವರ್ಷದ ಮಹೋತ್ಸವಕ್ಕೆ ಬಾಲಿವುಡ್ ನ ಹಿರಿಯ ನಟ ಅಮಿತಾಭ್ ಬಚ್ಚನ್ ಹಾಗೂ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರಲ್ಲಿ ಒಬ್ಬರನ್ನು ರಾಯಭಾರಿಗಳನ್ನಾಗಿಸಲು ಮಂಡಳಿ ನಿರ್ಧರಿಸಿದೆ.

ಈ ಹಿನ್ನೆಲೆಯಲ್ಲಿ, ಈ ಇಬ್ಬರನ್ನೂ ಸಂಪರ್ಕಿಸಿರುವ ಮಂಡಳಿಯು ತನ್ನ ಮನವಿಯನ್ನು ಅವರಿಬ್ಬರ ಮುಂದಿಟ್ಟಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆಡಳಿತ ಮಂಡಳಿಯ ಅಧ್ಯಕ್ಷ ಸುರೇಶ್ ಹವಾರೆ, ''ಬಾಬಾ ಅವರ ಸಮಾಧಿ ಸ್ಥಿತಿಗೊಳಪಟ್ಟ ಶತಮಾನೋತ್ಸವ ಮಹೋತ್ಸವವನ್ನು ಜನಪ್ರಿಯಗೊಳಿಸಲು ಸಚಿನ್ ಹಾಗೂ ಬಿಗ್ ಬಿ ಅವರಲ್ಲೊಬ್ಬರನ್ನು ರಾಯಭಾರಿಗಳನ್ನಾಗಿಸಲು ನಿರ್ಧರಿಸಿದ್ದೇವೆ. ಈ ಬಗ್ಗೆ ಇಬ್ಬರಿಗೂ ಮನವಿ ಸಲ್ಲಿಸಲಾಗಿದೆ. ಈ ಬಗ್ಗೆ ಮಾತುಕತೆ ನಡೆಯುತ್ತಿದ್ದು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಾಗುತ್ತದೆ'' ಎಂದಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications