ಬ್ರಿಜ್ ಭೂಷಣ್ ಆಪ್ತ ಡಬ್ಲ್ಯುಎಫ್‌ಐ ಅಧ್ಯಕ್ಷನಾದ ಕೆಲವೇ ಗಂಟೆಗಳಲ್ಲಿ ಕುಸ್ತಿಗೆ ವಿದಾಯ ಹೇಳಿದ ಸಾಕ್ಷಿ ಮಲಿಕ್
ನವದೆಹಲಿ, ಡಿಸೆಂಬರ್ 21: ಭಾರತೀಯ ಕುಸ್ತಿ ಫೆಡರೇಶನ್‌ನ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ನೂತನ ಅಧ್ಯಕ್ಷನಾಗಿ ಆಯ್ಕೆಯಾದ ಕೆಲವೇ ಗಂಟೆಗಳಲ್ಲಿ ಮನನೊಂದ ಒಲಂಪಿಕ್ ಪದಕ ವಿಜೇತೆ ಸಾಕ್ಷಿ ಮಲಿಕ್ ತಾವು ಕುಸ್ತಿಯನ್ನೇ ತ್ಯಜಿಸುವ ನಿರ್ಧಾರ ಪ್ರಕಟಿಸಿದ್ದಾರೆ.
ಸಾಕ್ಷಿ ಮಲಿಕ್ ಗುರುವಾರ ಕುಸ್ತಿಯಿಂದ ನಿವೃತ್ತಿ ಘೋಷಿಸಿದ್ದಾರೆ. ಲೈಗಿಂಕ ಕಿರುಕುಳ ಆರೋಪಿ, ಫೆಡರೇಶನ್ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಅವರು ಗೆದ್ದಿದ್ದರಿಂದ ವ್ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಚುನಾವಣೆಯ ನಂತರ ಸಾಕ್ಷಿ ಅವರು ಈ ನಿರ್ಧಾರ ಘೋಷಿಸಿದ್ದಾರೆ.

ಬ್ರಿಜ್ ಭೂಷಣ್ ಸಿಂಗ್ ಅವರ ನಿಷ್ಠಾವಂತರ ಅಧ್ಯಕ್ಷತೆಯಲ್ಲಿ ಸ್ಪರ್ಧಿಸಲು ತಾನು ಇಚ್ಛಿಸುವುದಿಲ್ಲ ಎಂದು ಈ ಸಂದರ್ಭದಲ್ಲಿ ಅವರು ಹೇಳಿದ್ದಾರೆ. ಮಾಜಿ ಮುಖ್ಯಸ್ಥ ಭೂಷಣ್ ಶರಣ್ ಸಿಂಗ್ ಅವರು ಕುಸ್ತಿ ಸಂಸ್ಥೆಯ ಮೇಲೆ ಪರೋಕ್ಷ ಹಿಡಿತ ಸಾಧಿಸಿ ನಂತರ ನೆಡೆದ ಚುನಾವಣೆಯಲ್ಲಿ ಸಂಜಯ್ ಸಿಂಗ್ ಅವರ ಸಮಿತಿಯು ಹೆಚ್ಚಿನ ಅಧಿಕಾರವನ್ನು ಪಡೆದುಕೊಂಡಿತು.
ಯುಪಿ ವ್ರೆಸ್ಲಿಂಗ್ ಅಸೋಸಿಯೇಷನ್ ಉಪಾಧ್ಯಕ್ಷ ಸ್ಥಾನವನ್ನು ಹೊಂದಿರುವ ಸಂಜಯ್ ಅವರು ತಮ್ಮ ಪ್ರತಿಸ್ಪರ್ಧಿ ಅನಿತಾ ಶೆಯೊರನ್ ಅವರು ಏಳು ಮತಗಳನ್ನು ಪಡೆದರೆ ಸಂಜಯ್ 40 ಮತಗಳನ್ನು ಪಡೆದರು. ಸಿಡಬ್ಲ್ಯೂಜಿ ಪದಕ ವಿಜೇತ ಪಟುಗಳು ಮಹಿಳಾ ಅಧ್ಯಕ್ಷರ ನೇಮಕವಾಗಬೇಕೆಂದು ಬಯಸಿದ್ದರು, ಆದರೆ ಅದು ಆಗಲಿಲ್ಲ. ಆದ್ದರಿಂದ ಕ್ರೀಡೆ ತ್ಯಜಿಸಲು ನಿರ್ಧರಿಸಿದರು ಎಂದು ಹೇಳಿದರು.
ಬ್ರಿಜ್ ಭೂಷಣ್ ಬಣದ ಭಾಗವಾಗಿರುವ ಸಂಜಯ್, ವಾರಣಾಸಿಯಿಂದ ಬಂದವರು ಮತ್ತು ಮಾಜಿ ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಅವರ ನಿಕಟ ಸಹವರ್ತಿ ಎಂದು ತಿಳಿದುಬಂದಿದೆ. ಬ್ರಿಜ್ ಭೂಷಣ್ ಅವಧಿಯು ಲೈಂಗಿಕ ಕಿರುಕುಳದ ಆರೋಪಗಳ ನಡುವೆ ಕೊನೆಗೊಂಡಿತು. ಸಾಕ್ಷಿ ನಿವೃತ್ತಿಯ ಕುರಿತು ಪ್ರತಿಕ್ರಿಯಿಸಿದ ಸಹ ಕುಸ್ತಿಪಟು ಬಜರಂಗ್ ಪುನಿಯಾ, ಯಾವುದೇ ಬ್ರಿಜ್ ಭೂಷಣ್ ನಿಷ್ಠಾವಂತರು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂಬ ಮಾತಿಗೆ ಸರ್ಕಾರ ನಿಲ್ಲದಿರುವುದು ಅತ್ಯಂತ ದುರದೃಷ್ಟಕರ ಎಂದು ಹೇಳಿದರು.
ಬ್ರಿಜ್ ಭೂಷಣ್ ಸಿಂಗ್ ಗದ್ದಲದ ನಂತರ ಮಾಜಿ ಮುಖ್ಯಸ್ಥರ ಯಾವುದೇ ನಿಷ್ಠಾವಂತರು ಡಬ್ಲ್ಯುಎಫ್‌ಐ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದಿಲ್ಲ ಎಂದು ಸರ್ಕಾರ ಭರವಸೆ ನೀಡಿತ್ತು. ನಾವು ನಮ್ಮ ಹೃದಯದಿಂದ ಹೋರಾಡಿದ್ದೇವೆ. ಆದರೆ ಬ್ರಿಜ್ ಭೂಷಣ್ ಅವರಂತಹ ವ್ಯಕ್ತಿ, ಅವರ ವ್ಯಾಪಾರ ಪಾಲುದಾರ ಮತ್ತು ನಿಕಟ ಸಹಾಯಕರು ಡಬ್ಲ್ಯುಎಫ್‌ಐ ಅಧ್ಯಕ್ಷರಾಗಿ ಆಯ್ಕೆಯಾದರೆ, ನಾನು ಕುಸ್ತಿಯನ್ನು ತ್ಯಜಿಸುತ್ತೇನೆ" ಎಂದು ಕಣ್ಣೀರಿಟ್ಟ ಸಾಕ್ಷಿ ತನ್ನ ಬೂಟುಗಳನ್ನು ಮೇಜಿನ ಮೇಲೆ ಇರಿಸಿದರು.
ಸಾಕ್ಷಿ ಮಲಿಕ್ ಅವರ ಸಾಧನೆಗಳು:
2014 ರಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಕ್ಷಿ ಅವರ ಮೊದಲ ಪ್ರಮುಖ ಸಾಧನೆಗಳಲ್ಲಿ ಒಂದಾಗಿದೆ. 2014 ರಲ್ಲಿ ಗ್ಲಾಸ್ಗೋದಲ್ಲಿ ನಡೆದ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಅವರು ಬೆಳ್ಳಿ ಪದಕವನ್ನು ಪಡೆದರು.
2016ರ ರಿಯೊ ಒಲಿಂಪಿಕ್ಸ್‌ನಲ್ಲಿ ಗೆದ್ದ ಪ್ರತಿಷ್ಠಿತ ಕಂಚಿನ ಪದಕ ಗೆಲುವು ಮತ್ತೊಂದು ದೊಡ್ಡ ಸಾಧನೆಯಾಗಿದೆ. 58 ಕೆಜಿ ವಿಭಾಗದ ಫ್ರೀಸ್ಟೈಲ್ ಸ್ಪರ್ಧೆಯಲ್ಲಿ ಅವರು ಕಂಚಿನ ಪದಕವನ್ನು ಗೆದ್ದಿದ್ದಾರೆ.
ಗೋಲ್ಡ್ ಕೋಸ್ಟ್‌ನಲ್ಲಿ ಕಾಮನ್‌ವೆಲ್ತ್ ಗೇಮ್ಸ್ 2018ರಲ್ಲಿ ನಡೆದ 62 ಕೆಜಿ ಫ್ರೀಸ್ಟೈಲ್ ಪಂದ್ಯದಲ್ಲಿ ಕಂಚಿನ ಪದಕವನ್ನು ಪಡೆದುಕೊಂಡಿದ್ದರು.
ಭಾರತೀಯ ಕುಸ್ತಿಪಟು 2016 ರಲ್ಲಿ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಪಡೆದರು. ನಂತರ 2017 ರಲ್ಲಿ ಅವರು ಪದ್ಮಶ್ರೀ ಪ್ರಶಸ್ತಿಯನ್ನು ಪಡೆದರು. ಇದು ಭಾರತದಲ್ಲಿ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾಗಿದೆ.












Click it and Unblock the Notifications