ಸಲ್ಮಾನ್‌ ಖಾನ್‌ಗೆ ಜಾಮೀನು: ಕೋರ್ಟ್‌ ವಿಧಿಸಿದ ಷರತ್ತುಗಳೇನು?

ಬೆಂಗಳೂರು, ಏಪ್ರಿಲ್ 07: ಬಾಲಿವುಡ್‌ ನಟ ಸಲ್ಮಾನ್ ಖಾನ್‌ಗೆ ಜಾಮೀನು ಮಂಜೂರು ಮಾಡಲಾಗಿದ್ದರೂ ಅವರು ಚಿತ್ರೀಕರಣ ಅಥವಾ ವೈಯಕ್ತಿಕ ಕಾರಣಗಳಿಗಾಗಿ ಅನುಮತಿಯಿಲ್ಲದೆ ದೇಶದಿಂದ ಹೊರಹೋಗುವಂತಿಲ್ಲ.

ವಿವಿಧ ಷರತ್ತುಗಳನ್ನು ವಿಧಿಸಿ ನ್ಯಾಯಾಲಯ ಸಲ್ಮಾನ್‌ ಖಾನ್‌ಗೆ ಜಾಮೀನು ನೀಡಿದೆ.

* 25,000 ರೂಪಾಯಿ ಮೊತ್ತದ ಎರಡು ವೈಯಕ್ತಿಕ ಬಾಂಡ್‌ಗಳನ್ನು ನೀಡಬೇಕು.

* ಸಿನಿಮಾ ಚಿತ್ರೀಕರಣ ಅಥವಾ ಇತರೆ ವೈಯಕ್ತಿಕ ಕಾರಣಗಳಿಗಾಗಿ ವಿದೇಶಕ್ಕೆ ತೆರಳಬೇಕೆಂದರೆ ನ್ಯಾಯಾಲಯದಿಂದ ಅನುಮತಿ ಪಡೆದುಕೊಳ್ಳುವುದು ಕಡ್ಡಾಯ

* ಮೇ 7ರಂದು ಮತ್ತೆ ವಿಚಾರಣೆ ನಡೆಯಲಿದ್ದು, ಅದಕ್ಕಾಗಿ ನ್ಯಾಯಾಲಯದಲ್ಲಿ ಖುದ್ದು ಹಾಜರಾಗಬೇಕು.

salman gets bail in blackbuck poaching case

ಬಿಶ್ನೋಯಿ ಸಮುದಾಯ ಅಸಮಾಧಾನ
ಸಲ್ಮಾನ್ ಖಾನ್‌ಗೆ ಜೋಧಪುರ ಜೆಎಂಸಿ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದಾಗ ಸಂಭ್ರಮಿಸಿದ್ದ ಬಿಶ್ನೋಯಿ ಸಮುದಾಯ, ಜಾಮೀನು ದೊರೆತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದೆ.

ಸಲ್ಮಾನ್‌ಗೆ ಜಾಮೀನು ಮಂಜೂರು ಮಾಡಿದ ಸೆಷನ್ಸ್ ನ್ಯಾಯಾಲಯದ ತೀರ್ಪಿನ ವಿರುದ್ಧ ರಾಜಸ್ಥಾನ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಬಿಶ್ನೋಯಿ ಸಮುದಾಯ ತೀರ್ಮಾನಿಸಿದೆ.

1998ರಲ್ಲಿ ಸಲ್ಮಾನ್ ಖಾನ್ ಮತ್ತು ಅವರ ಸಹನಟರು 'ಹಮ್ ಸಾತ್ ಸಾತ್ ಹೈ' ಚಿತ್ರದ ಚಿತ್ರೀಕರಣದ ವೇಳೆ ಎರಡು ಕೃಷ್ಣಮೃಗಗಳನ್ನು ಕೊಂದ ಆರೋಪ ಎದುರಿಸುತ್ತಿದ್ದರು. ಪ್ರಕರಣ ಸಂಬಂಧ ಸಲ್ಮಾನ್ ಮತ್ತಿತರರ ವಿರುದ್ಧ ಕಾನೂನು ಹೋರಾಟ ನಡೆಸಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+