ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೃಷ್ಣಮೃಗ ಬೇಟೆ ಪ್ರಕರಣ: ಸಲ್ಮಾನ್ ಗೆ ಶುರುವಾಯ್ತು ತೀರ್ಪಿನ ಭೀತಿ

By Mahesh
|
Google Oneindia Kannada News

ಜೋಧಪುರ, ಫೆ.12: ಬಾಲಿವುಡ್ ನ ಜನಪ್ರಿಯ ನಟ ಸಲ್ಮಾನ್ ಖಾನ್ ಆರೋಪಿಯಾಗಿರುವ ಕೃಷ್ಣಮೃಗ ಬೇಟೆ ಪ್ರಕರಣ ಕೊನೆಗೂ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ಪ್ರಕರಣ ವಿಚಾರಣೆ ಮತ್ತೊಮ್ಮೆ ನಡೆಸಲಾಗಿದ್ದು, ಫೆ.25ಕ್ಕೆ ಅಂತಿಮ ತೀರ್ಪು ನೀಡುವುದಾಗಿ ಮುಖ್ಯ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಅವರು ಹೇಳಿದ್ದಾರೆ. ಸುಮಾರು 16 ವರ್ಷಗಳ ನಂತರ ಪ್ರಕರಣದ ತೀರ್ಪು ಹೊರ ಬರುತ್ತಿದ್ದು, ಈ ಕಾಯ್ದಿಟ್ಟ ತೀರ್ಪಿನಲ್ಲಿ ಏನಿದೆಯೋ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ.

ಈ ನಡುವೆ ಶೂಟಿಂಗ್ ಗಾಗಿ ಬ್ರಿಟನ್ ಗೆ ತೆರಳಲು ಅನುಮತಿ ನೀಡುವಂತೆ ಸಲ್ಮಾನ್ ಕೋರಿದ್ದು, ಕೋರ್ಟ್ ಅದಕ್ಕೆ ನಿರಾಕರಿಸಿದ್ದು ಎಲ್ಲರಿಗೂ ಗೊತ್ತೇ ಇದೆ. ಭಜರಂಗಿ ಭಾಯ್ ಜಾನ್, ರಾಮ್ ರತನ ಧನ್ ಪಾವೋ ಚಿತ್ರಗಳಲ್ಲಿ ಸಲ್ಮಾನ್ ನಿರತರಾಗಿದ್ದಾರೆ. [ಸಲ್ಮಾನ್ 'ಫಾರೀನ್ ಟೂರಿಗೆ ಕಂಟಕ]

ಇತ್ತೀಚೆಗೆ ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಮತ್ತೊಮ್ಮೆ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸುವಂತೆ ರಾಜಸ್ಥಾನ ಹೈಕೋರ್ಟಿಗೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿತ್ತು. ತೀರ್ಪು ಪ್ರಕಟಣೆ ವೇಳೆ ಖಾನ್‌ ಖುದ್ದು ಹಾಜರಿರಬೇಕು ಎಂದು ಕೋರ್ಟ್ ಸೂಚಿಸಿರುವುದರಿಂದ ಸದ್ಯಕ್ಕೆ ಸಲ್ಮಾನ್ ಖಾನ್ ಅವರ ವಿದೇಶ ಯಾತ್ರೆ ಕನಸಾಗಲಿದೆ.

Salman Khan Blackbuck case: Court verdict on 25 February

1998ರ ಅಕ್ಟೋಬರ್ 1-2ರಂದು ಕಂಕಾನಿ ಗ್ರಾಮದಲ್ಲಿ ಹಮ್ ಸಾಥ್ ಸಾಥ್ ಹೈ ಚಿತ್ರೀಕರಣದ ಸಂದರ್ಭದಲ್ಲಿ ರಾಜಸ್ಥಾನದ ಕಾಡೊಂದರಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಕೃಷ್ಣ ಮೃಗ ಬೇಟೆಯಾಡಿದ್ದರು. ಸಲ್ಮಾನ್ ಖಾನ್ ಅವರ ಜೊತೆಯಲ್ಲಿ ನಟಿ ಸೋನಾಲಿ ಬೇಂದ್ರೆ, ತಬು, ನೀಲಂ, ಸೈಫ್ ಅಲಿ ಖಾನ್ ಮುಂತಾದವರಿದ್ದರು. ಎಲ್ಲರ ಮೇಲೆ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿಯಲ್ಲಿ ಲೂನಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. [ಗುದ್ದೋಡು ಪ್ರಕರಣ: ಸಲ್ಮಾನ್ ಇನ್ ಟ್ರಬಲ್]

ಎಲ್ಲರ ವಿರುದ್ಧ ರಾಜಸ್ಥಾನ ಸರ್ಕಾರ ಪ್ರಕರಣ ದಾಖಲಿಸಿಕೊಂಡಿತ್ತು. ಕೆಳ ಹಂತದ ನ್ಯಾಯಲಯದಲ್ಲಿ ಆರೋಪಿಗಳ ಆರೋಪ ಸಾಬೀತಾಗಿತ್ತು ಆದರೆ, ಮರು ವರ್ಷವೇ ಹೈಕೋರ್ಟಿನಲ್ಲಿ ತಡೆಯಾಜ್ಞೆ ಸಿಕ್ಕಿತ್ತು. ಈಗ ಸುಪ್ರೀಂಕೋರ್ಟಿನಲ್ಲಿ ಪ್ರಕರಣ ಅಂತಿಮ ಹಂತ ತಲುಪಿತ್ತು. ನಂತರ ಸುಪ್ರೀಂಕೋರ್ಟ್ ನಿರ್ದೇಶನದಂತೆ ಫೆ.5ರಂದು ವಿಚಾರಣೆ ಮುಗಿಸಿದ ರಾಜಸ್ಥಾನ ಕೋರ್ಟ್ ಈಗ ಅಂತಿಮ ತೀರ್ಪು ನೀಡಲು ಸಜ್ಜಾಗಿದೆ.

ಇದಕ್ಕೂ ಮುನ್ನ ಕೃಷ್ಣಮೃಗ ಬೇಟೆಯಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟಿನಲ್ಲಿ ವಿಚಾರಣೆ ಮುಕ್ತಾಯವಾಗಿದೆ. ಜಸ್ಟೀಸ್ ಎಸ್ ಜೆ ಮುಖ್ಯೋಪಾಧ್ಯಾಯ್ ಹಾಗೂ ಎಕೆ ಗೋಯಲ್ ಅವರಿದ್ದ ನ್ಯಾಯಪೀಠ ಆದೇಶವನ್ನು ಕಾಯ್ದಿರಿಸಿತ್ತು. ಬ್ರಿಟನ್ ವೀಸಾ ಪಡೆಯಲು ಆರೋಪಿಗೆ ಅನುಕೂಲವಾಗಲೆಂದು ಶಿಕ್ಷೆ ಬಗ್ಗೆ ಆದೇಶವನ್ನು ತಡೆ ಹಿಡಿಯಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಆದೇಶಿಸಿದ್ದನ್ನು ಇಲ್ಲಿ ಸ್ಮರಿಸಬಹುದು. (ಪಿಟಿಐ)

English summary
The judgement in the case against Bollywood actor Salman Khan under Arms Act, an offshoot of the Blackbuck poaching incident 16 years ago, will be pronounced on 25 February.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X