5 ಕೋಟಿ ಕೊಡದೇ ಇದ್ದರೆ.... ಸಲ್ಮಾನ್ ಖಾನ್ ಜೀವಕ್ಕೆ ಮತ್ತೆ ಅಪಾಯ?
ಬಾಲಿವುಡ್ ಅಂದ್ರೆ ಹಿಂದಿ ಸಿನಿಮಾ ರಂಗದ ಸ್ಟಾರ್ ಸಲ್ಮಾನ್ ಖಾನ್ ಅವರ ಜೀವಕ್ಕೆ ಇದೀಗ ಪದೇ ಪದೇ ಬೆದರಿಕೆ ಕರೆಗಳು ಬರುತ್ತಿವೆ ಎಂಬ ಆರೋಪ ಇದೆ. ಅದರಲ್ಲೂ ಸಲ್ಮಾನ್ ಖಾನ್ ಹತ್ಯೆಗೆ ತುಂಬಾ ದೊಡ್ಡ ಮಟ್ಟದಲ್ಲೇ ಸ್ಕೆಚ್ ಹಾಕಲಾಗಿದ್ದು, ಹಲವರನ್ನು ಅರೆಸ್ಟ್ ಮಾಡಿ ಪೊಲೀಸರು ವಿಚಾರಣೆ ಕೂಡ ನಡೆಸುತ್ತಿದ್ದಾರೆ. ಇಷ್ಟೆಲ್ಲಾ ಸೂಕ್ಷ್ಮವಾಗಿರುವ ಪರಿಸ್ಥಿತಿ ಮಧ್ಯೆ ಸಲ್ಮಾನ್ ಖಾನ್ ಅಭಿಮಾನಿಗಳಿಗೆ ಮತ್ತೊಂದು ಆಘಾತ ಎದುರಾಗಿದೆ, ಅದು ಏನು ಅಂದ್ರೆ...
ಸಲ್ಮಾನ್ ಖಾನ್ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ಕಾರಣ ಅವರಿಗೆ ದೊಡ್ಡ, ಬಹುದೊಡ್ಡ ಬೆಂಬಲಿಗರ ಪಡೆ ಇದೆ. ಆದರೆ ಕೆಲವು ದಿನಗಳಿಂದ ಸಲ್ಮಾನ್ ಖಾನ್ ಅವರು ಹತ್ಯೆ ಆಗಲಿದ್ದಾರೆ ಎಂಬ ಸುದ್ದಿ ಹಬ್ಬಿರುವುದು ದೊಡ್ಡ ಸಂಚಲನ ಸೃಷ್ಟಿ ಮಾಡಿದೆ. ಹೀಗೆ ಭಯ ಇರುವುದು ಯಾಕಂದ್ರೆ ಸಲ್ಮಾನ್ ಖಾನ್ ಅವರಿಗೆ ಜೀವ ಭಯ ಕಾಡುತ್ತಿದೆ. ಸಲ್ಮಾನ್ ಖಾನ್ ಕೊಲೆ ಮಾಡಲು ಸುಪಾರಿ ನೀಡಿದ್ದ ಆರೋಪ ಕೂಡ ಕೇಳಿ ಬಂದಿತ್ತು. ಇಷ್ಟೆಲ್ಲದರ ನಡುವೆ ಇದೀಗ ಸಲ್ಮಾನ್ ಖಾನ್ ಅವರಿಗೆ 5 ಕೋಟಿ ರೂಪಾಯಿಗೆ....

ಸಲ್ಮಾನ್ ಖಾನ್ ಅವರಿಗೆ 5 ಕೋಟಿ...
ಹೌದು, ಬಾಲಿವುಡ್ ಸ್ಟಾರ್ ಸಲ್ಮಾನ್ ಮತ್ತೆ ಜೀವ ಬೆದರಿಕೆ ಎದುರಿಸಿದ್ದಾರೆ. ನಟ ಸಲ್ಮಾನ್ ಜೀವಂತವಾಗಿ ಇರಬೇಕಾದರೆ 5 ಕೋಟಿ ಹಣ ನೀಡಿ, ಇಲ್ಲವಾದ್ರೆ ಬಾಬಾ ಸಿದ್ದಿಕಿಗಿಂತ ಭಯಾನಕ ಸಾವು ಸಂಭವಿಸುತ್ತೆ ಎಂಬ ಥ್ರೆಟ್ ಮಾಡಲಾಗಿದೆ ಎಂದು ಆರೋಪ ಮಾಡಲಾಗಿದೆ. ಇದರ ಬಗ್ಗೆ ವಾಟ್ಸಾಪ್ ಸಂದೇಶ ಒಂದು ಬಂದಿದೆ.
ವಾಟ್ಸಾಪ್ ಸಂದೇಶದಲ್ಲಿ, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಮೆಂಬರ್ ಮುಂಬೈ ಟ್ರಾಫಿಕ್ ಪೊಲೀಸರಿಗೆ ಬೆದರಿಕೆ ಸಂದೇಶ ಕಳುಹಿಸಿದ್ದಾನೆ ಎನ್ನಲಾಗಿದೆ. ಲಾರೆನ್ಸ್ ಬಿಷ್ಣೋಯ್ ಜೊತೆಗೆ ಇರುವ ದ್ವೇಷ ಕೊನೆಗೊಳಿಸಲು ಬಯಸಿದರೆ, 5 ಕೋಟಿ ರೂಪಾಯಿ ಕೊಡಬೇಕು ಎನ್ನುವ ಡಿಮ್ಯಾಂಡ್ ಇಟ್ಟಿದ್ದಾರೆ ಎಂದು ಆರೋಪ ಮಾಡಲಾಗಿದೆ. ಮುಂಬೈ ಪೊಲೀಸರು ಪ್ರಕರಣ ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಕೂಡ ಆರಂಭ ಮಾಡಿದ್ದಾರೆ.
ಹತ್ಯೆಗೆ ಹಲವು ಬಾರಿ ಪ್ರಯತ್ನ?
ಇದೀಗ ಸಲ್ಮಾನ್ ಖಾನ್ ಅವರ ಹತ್ಯೆ ಸಂಚು ವಿಚಾರದಲ್ಲಿ ಸ್ಫೋಟಕ ಮಾಹಿತಿ ಬಯಲಾಗಿ ಭಾರತದಲ್ಲಿ ಸಂಚಲನ ಸೃಷ್ಟಿಯಾಗಿದೆ. ಸಿನಿಮಾ ಮಂದಿ ಈಗ ನಡುಗಿ ಹೋಗಿದ್ದು, ತಾವು ಕೂತ ಜಾಗದಲ್ಲೇ ಈ ಸುದ್ದಿ ಕೇಳಿ ಬೆವತು ಹೋಗಿದ್ದಾರೆ. ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ ಹತ್ಯೆಗೆ ಬರೋಬ್ಬರಿ 25 ಲಕ್ಷ ರೂಪಾಯಿ ಸುಪಾರಿ ನೀಡಲಾಗಿತ್ತು. ಮಹಾರಾಷ್ಟ್ರದ ಪನ್ವೇಲ್ ಪ್ರದೇಶದಲ್ಲಿರುವ ಫಾರ್ಮ್ ಹೌಸ್‌ನಲ್ಲಿ ಸಲ್ಮಾನ್ ಖಾನ್ ಅವರನ್ನು ಹತ್ಯೆ ಮಾಡಲು ಸ್ಕೆಚ್ ಹಾಕಲಾಗಿತ್ತು ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಮುಂಬೈ ಪೊಲೀಸರು ಈಗ ನ್ಯಾಯಾಲಯಕ್ಕೆ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಸ್ಫೋಟಕ ಆರೋಪ ಬಯಲಾಗಿದೆ.












Click it and Unblock the Notifications