ನಟ ಸಲ್ಮಾನ್ ಖಾನ್‌ಗೆ ಐದು ವರ್ಷ ಜೈಲು ಶಿಕ್ಷೆ ಪ್ರಕಟ
ಬೆಂಗಳೂರು, ಏಪ್ರಿಲ್ 05: ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಜೋಧಪುರ ನ್ಯಾಯಾಲಯ ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ 5 ವರ್ಷ ಜೈಲು ಶಿಕ್ಷೆ ಹಾಗೂ 10000 ರೂಪಾಯಿ ದಂಡ ವಿಧಿಸಲಾಗಿದೆ.
ಜೋದ್‌ಪುರ ಕೋರ್ಟ್ ಶಿಕ್ಷೆಯ ಪ್ರಮಾಣವನ್ನು ಪ್ರಕಟ ಮಾಡಿದ್ದು, ತೀರ್ಪು ಪ್ರಶ್ನಿಸಿ ಸಲ್ಮಾನ್ ಖಾನ್ ಹೈಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ಹೆಚ್ಚಿಗಿದೆ.

ಸಲ್ಮಾನ್ ಖಾನ್ ಅವರನ್ನು ಜೋದ್‌ಪುರ ಕೇಂದ್ರ ಕಾರಗೃಹಕ್ಕೆ ಕರೆದೊಯ್ಯಲಾಗುತ್ತದೆ. ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿ ಜಾಮೀನು ದೊರೆಯುವವರೆಗೂ ಸಲ್ಮಾನ್ ಖಾನ್ ಜೈಲು ವಾಸ ಮಾಡಬೇಕಾಗಿದೆ.
ಸಲ್ಮಾನ್ ಪರ ವಕೀಲರು ಈಗಲೇ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದ್ದು, ಜಾಮೀನು ಕೊಡಿಸಲು ಪ್ರಯತ್ನ ಮಾಡಲಾಗುತ್ತಿದೆ.
1998ರಲ್ಲಿ ನಡೆದಿದ್ದ ಕೃಷ್ಣಮೃಗ ಬೇಟೆ ಪ್ರಕರಣದ ತೀರ್ಪು ಇದಾಗಿದ್ದು, ಪ್ರಕರಣದ ಉಳಿದ ಆರೋಪಿಗಳಾದ ಸೈಫ್ ಅಲಿ ಖಾನ್, ರವೀನಾ ಟಂಡನ್, ನೀಲಂ, ಟಬು ಮತ್ತು ಒಬ್ಬ ಗೈಡ್ ಅವರನ್ನು ಪ್ರಕರಣದಿಂದ ಖುಲಾಸೆ ಮಾಡಲಾಗಿದೆ.












Click it and Unblock the Notifications