ಸಲ್ಮಾನ್ ತೀರ್ಪು ಶನಿವಾರ: ಇನ್ನೂ ಒಂದು ದಿನ ಜೈಲಿನಲ್ಲೇ ಕಳೆಯಬೇಕು
ಬೆಂಗಳೂರು, ಏಪ್ರಿಲ್ 6: ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಒಳಗಾಗಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಜಾಮೀನು ಅರ್ಜಿಯ ತೀರ್ಪನ್ನು ಶನಿವಾರಕ್ಕೆ ಕಾಯ್ದಿರಿಸಲಾಗಿದೆ.
ರಾಜಸ್ಥಾನದ ಕಂಕನಿ ಗ್ರಾಮದಲ್ಲಿ ಕೃಷ್ಣಮೃಗಗಳನ್ನು ಬೇಟೆಯಾಡಿದ ಪ್ರಕರಣದಲ್ಲಿ ಸಲ್ಮಾನ್ ಖಾನ್ ತಪ್ಪಿತಸ್ಥ ಎಂದು ಜೋಧಪುರ ನ್ಯಾಯಾಲಯ ಗುರುವಾರ ತೀರ್ಪು ನೀಡಿತ್ತು.
ಸಲ್ಮಾನ್ ಖಾನ್‌ಗೆ 5 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ಅದರ ಬೆನ್ನಲ್ಲೇ ಸಲ್ಮಾನ್ ಪರ ವಕೀಲರು ಸೆಷನ್ಸ್ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು.

ಜಾಮೀನು ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಂಡ ಸೆಷನ್ಸ್ ನ್ಯಾಯಾಲಯ, ಅರ್ಜಿಯ ತೀರ್ಪನ್ನು ಶನಿವಾರಕ್ಕೆ ಮುಂದೂಡಿತು.
ಶುಕ್ರವಾರ ಬೆಳಿಗ್ಗೆ 10.30ಕ್ಕೆ ತೀರ್ಪು ಪ್ರಕಟವಾಗುವ ಸಾಧ್ಯತೆ ಇದೆ. ಹೀಗಾಗಿ, ಗುರುವಾರ ಸಂಜೆಯಿಂದ ಜೋಧಪುರ ಕೇಂದ್ರ ಕಾರಾಗೃಹದಲ್ಲಿ ದಿನ ಕಳೆದಿರುವ ಸಲ್ಮಾನ್, ಇನ್ನೂ ಒಂದು ದಿನ ಜೈಲಿನಲ್ಲಿಯೇ ಇರುವುದು ಅನಿವಾರ್ಯವಾಗಿದೆ.












Click it and Unblock the Notifications