• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Mulayam Singh Yadav : ಐಸಿಯುನಲ್ಲಿ ಮುಲಾಯಂ ಸಿಂಗ್ ಯಾದವ್ ದಾಖಲು

|
Google Oneindia Kannada News

ಲಕ್ನೋ, ಸೆಪ್ಟೆಂಬರ್ 03: ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅನ್ನು ಪ್ರಸ್ತುತ ಮೇದಾಂತ್ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ದಾಖಲಿಸಲಾಗಿದ್ದು, ತಜ್ಞರ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಹೇಳಿಕೆಯಲ್ಲಿ ತಿಳಿಸಿದೆ.

ಭಾನುವಾರ ರಾತ್ರಿ ಮುಲಾಯಂ ಸಿಂಗ್ ಯಾದವ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಗುರುಗ್ರಾಮ್‌ನ ಮೇದಾಂತ್ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ (ಐಸಿಯು) ಸ್ಥಳಾಂತರಿಸಲಾಗಿತ್ತು. ಕೆಲವು ದಿನಗಳ ಹಿಂದೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದರೂ, ಅವರ ಸ್ಥಿತಿ ಹದಗೆಟ್ಟ ನಂತರ ಐಸಿಯುಗೆ ಸ್ಥಳಾಂತರಿಸಲಾಗಿತ್ತು.

Mulayam Singh Yadav Health : ಮುಲಾಯಂ ಸಿಂಗ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲುMulayam Singh Yadav Health : ಮುಲಾಯಂ ಸಿಂಗ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲು

ಈ ನಡುವೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮೇದಾಂತ್ ಆಸ್ಪತ್ರೆಗೆ ಆಗಮಿಸಿದ್ದು, ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ, ಅಖಿಲೇಶ್ ಯಾದವ್ ಅನ್ನು ಭೇಟಿ ಮಾಡಿ ಅವರ ತಂದೆಯ ಆರೋಗ್ಯ ವಿಚಾರಿಸಿದರು.

ಮೇದಾಂತ್ ಆಸ್ಪತ್ರೆ ಪ್ರಕಟಣೆಯಲ್ಲಿ ಏನಿದೆ?:

ಮುಲಾಯಂ ಸಿಂಗ್ ಯಾದವ್ ಆರೋಗ್ಯದ ಕುರಿತು ಮೇದಾಂತ ಆಸ್ಪತ್ರೆ ನೀಡಿದ ಹೇಳಿಕೆಯ ಪ್ರತಿಯನ್ನು ಸಮಾಜವಾದಿ ಪಕ್ಷವು ಹಂಚಿಕೊಂಡಿದೆ. "ಗೌರವಾನ್ವಿತ ನೇತಾಜಿ ಅವರನ್ನು ಗುರುಗ್ರಾಮದ ಮೇದಾಂತ ಆಸ್ಪತ್ರೆಯ 'ಕ್ರಿಟಿಕಲ್ ಕೇರ್ ಯೂನಿಟ್'ಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ನೇತಾಜಿ ಅವರನ್ನು ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ದಯವಿಟ್ಟು ಆಸ್ಪತ್ರೆಗೆ ಬರಬೇಡಿ ಎಂದು ನಿಮ್ಮೆಲ್ಲರಲ್ಲಿ ವಿನಮ್ರ ವಿನಂತಿ. ನೇತಾಜಿ ಅವರ ಆರೋಗ್ಯದ ಬಗ್ಗೆ ಕಾಲಕಾಲಕ್ಕೆ ಮಾಹಿತಿ ನೀಡಲಾಗುವುದು," ಎಂದು ಆಸ್ಪತ್ರೆಯ ಪ್ರಕಟಣೆಯಲ್ಲಿ ಹೇಳಿದೆ.

ಭಾನುವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅಖಿಲೇಶ್ ಯಾದವ್ ಜೊತೆ ಮಾತನಾಡಿದ್ದಾರೆ. ಈ ಮಧ್ಯೆ ಮುಲಾಯಂ ಸಿಂಗ್ ಯಾದವ್ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಸಮಾಜವಾದಿ ಪಕ್ಷ ಭಾನುವಾರ ರಾತ್ರಿ ತಿಳಿಸಿತ್ತು.

English summary
Samajwadi Party founder Mulayam Singh Yadav in critical care unit, says hospital.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X