ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಸಂಸದೆಯಾಗಿ ಪ್ರಮಾಣವಚನ ಸ್ವಿಕರಿಸಿದ ಡಿಂಪಲ್ ಯಾದವ್

|
Google Oneindia Kannada News

ನವದೆಹಲಿ, ಡಿ. 12: ಸಮಾಜವಾದಿ ಪಕ್ಷದ ಡಿಂಪಲ್ ಯಾದವ್ ಅವರು ಲೋಕಸಭೆಯ ಸಂಸದರಾಗಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.

ಕಳೆದ ಅಕ್ಟೋಬರ್‌ನಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರ ನಿಧನದಿಂದ ಉತ್ತರ ಪ್ರದೇಶದ ಮೈನ್‌ಪುರಿ ಕ್ಷೇತ್ರದಲ್ಲಿ ಉಪಚುನಾವಣೆ ನಡೆದಿತ್ತು. ಮೈನ್‌ಪುರಿ ಸಂಸದೀಯ ಸ್ಥಾನದಿಂದ ಆಯ್ಕೆಯಾದ ನಂತರ ಸೋಮವಾರ ಸಂಸದೆಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ 2022: ಕ್ಷೇತ್ರವಾರು ವಿಜೇತರ ಸಂಪೂರ್ಣ ಪಟ್ಟಿ ಇಲ್ಲಿದೆವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ 2022: ಕ್ಷೇತ್ರವಾರು ವಿಜೇತರ ಸಂಪೂರ್ಣ ಪಟ್ಟಿ ಇಲ್ಲಿದೆ

ಪತಿ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರೊಂದಿಗೆ ದೆಹಲಿಯ ಸಂಸತ್ ಭವನವನ್ನು ತಲುಪಿದ್ದರು. ಸದನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಡಿಂಪಲ್ ಯಾದವ್ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಪಾದ ಮುಟ್ಟಿ ಆಶೀರ್ವಾದ ಪಡೆದರು.

Samajwadi Partys Dimple Yadav takes oath as Lok Sabha MP

ಮುಲಾಯಂ ಸಿಂಗ್ ಯಾದವ್ ಅವರಿಂದ ತೆರವಾಗಿದ್ದ ಸ್ಥಾನಕ್ಕೆ ಅವರ ಹಿರಿಯ ಸೊಸೆ ಡಿಂಪಲ್ ಯಾದವ್ ಮತ್ತು ಬಿಜೆಪಿಯ ರಘುರಾಜ್ ಸಿಂಗ್ ಶಾಕ್ಯಾ ನಡುವೆ ಕಠಿಣ ಸ್ಪರ್ಧೆ ನಡೆದಿತ್ತು. ಮೈನ್‌ಪುರಿ ಉಪಚುನಾವಣೆಯಲ್ಲಿ ಡಿಂಪಲ್ ಅವರು ಬಿಜೆಪಿಯ ರಘುರಾಜ್ ಶಾಕ್ಯಾ ಅವರನ್ನು 2,88,461 ಮತಗಳ ಅಂತರದಿಂದ ಸೋಲಿಸಿ ಭರ್ಜರಿ ಜಯ ಗಳಿಸಿದ್ದಾರೆ. ಮೈನ್‌ಪುರಿ ಸ್ಥಾನಕ್ಕಾಗಿ ಬಿಜೆಪಿ ಮಾಡಿದ್ದ ಎಲ್ಲಾ ರಾಜಕೀಯ ಲೆಕ್ಕಾಚಾರಗಳು ವಿಫಲವಾಗಿವೆ.

ತನ್ನ ಭರ್ಜರಿ ಗೆಲುವಿನ ನಂತರ ಮಾತನಾಡಿದ ಡಿಂಪಲ್ ಯಾದವ್, 'ಮೈನ್‌ಪುರಿ ಜನರಿಗೆ ಮತ್ತು ನಮ್ಮನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದಗಳು. ಮೈನ್‌ಪುರಿ ಜನರು ಇತಿಹಾಸ ಸೃಷ್ಟಿಸಿದ್ದಾರೆ. ಈ ಗೆಲುವು ನೇತಾಜಿಯವರ (ಮುಲಾಯಂ ಸಿಂಗ್ ಯಾದವ್) ವಿಜಯವಾಗಿದ್ದು, ನಮ್ಮ ಈ ವಿಜಯವನ್ನು ನೇತಾಜಿ ಅವರಿಗೆ ಅರ್ಪಿಸಿ ಅವರಿಗೆ ಗೌರವ ಸಲ್ಲಿಸಲಾಗಿದೆ" ಎಂದಿದ್ದರು.

Samajwadi Partys Dimple Yadav takes oath as Lok Sabha MP

ಡಿಂಪಲ್ ಯಾದವ್ ಗೆಲುವಿನ ನಂತರ ಉತ್ತರ ಪ್ರದೇಶದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಅಖಿಲೇಶ್ ಯಾದವ್ ಅವರ ಚಿಕ್ಕಪ್ಪ ಮತ್ತು ಪ್ರಗತಿಪರ ಸಮಾಜವಾದಿ ಪಕ್ಷದ ಮುಖ್ಯಸ್ಥ ಶಿವಪಾಲ್ ಯಾದವ್ ಅವರು ತಮ್ಮ ಪಕ್ಷವನ್ನು ಎಸ್‌ಪಿಯೊಂದಿಗೆ ವಿಲೀನಗೊಳಿಸಿದ್ದಾರೆ.

English summary
Samajwadi Party's Dimple Yadav takes oath as Lok Sabha MP. She elected from Mainpuri parliamentary seat. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X