ಭ್ರಷ್ಟಾಚಾರವನ್ನು ಬಿಜೆಪಿ ಎಂದಿಗೂ ಸಹಿಸುವುದಿಲ್ಲ: ಬಿಜೆಪಿ ವಕ್ತಾರ ಸಂಬಿತ್ ಪಾತ್ರ
ರಾಯ್‌ಪುರ, ಜುಲೈ 26: ಕಾಂಗ್ರೆಸ್ ಪಕ್ಷದವರು ತಮಗೆ ಲೂಟಿ ಮಾಡಲು ಅಧಿಕಾರ ಇದೆ ಎಂದು ಭಾವಿಸಿದ್ದಾರೆ. ಲೂಟಿ ಮಾಡಿದರೂ ಅವರನ್ನು ಯಾರೂ ಪ್ರಶ್ನಿಸಬಾರದು ಎಂದು ಕಾಂಗ್ರೆಸ್ ಮುಖಂಡರು ಅಂದುಕೊಳ್ಳುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ ಮಂಗಳಾರ ಕಾಂಗ್ರೆಸ್ ಪ್ರತಿಭಟನೆ ವಿರುದ್ಧ ಕಿಡಿಕಾರಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಪ್ರಶ್ನಿಸಿದ್ದನ್ನು ವಿರೋಧಿಸಿ ಕಾಂಗ್ರೆಸ್ ನಡೆಸುತ್ತಿರುವ ಸತ್ಯಾಗ್ರಹದ ವಿರುದ್ಧ ಸಂಬಿತ್ ಪಾತ್ರ ವಾಗ್ದಾಳಿ ನಡೆಸಿದ್ದಾರೆ. ಎರಡನೇ ಸುತ್ತಿನ ವಿಚಾರಣೆಗಾಗಿ ಸೋನಿಯಾ ಗಾಂಧಿ ಮಂಗಳವಾರ ದೆಹಲಿಯಲ್ಲಿ ಇಡಿ ಮುಂದೆ ಹಾಜರಾಗಿದ್ದರು.
ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದ ಬಿಜೆಪಿ ಕಚೇರಿ ಕುಶಾಬೌ ಠಾಕ್ರೆ ಪರಿಸರದಲ್ಲಿ ಮಾಧ್ಯಮ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪಾತ್ರಾ, "ಕಾಂಗ್ರೆಸ್ ಇ.ಡಿ ಎಂದರೆ 'ಡಕಾಯಿತಿ ಮಾಡಲು ಅನುಮತಿ' (entitlement for dacoity) ಎಂದು ಭಾವಿಸಿದೆ ಎನಿಸುತ್ತದೆ. ಮತ್ತು ಅವರು ಮಾಡುವ ಡಕಾಯಿತಿ ಬಗ್ಗೆ ಯಾರೂ ಪ್ರಶ್ನೆ ಮಾಡಬಾರದು ಎಂದು ಕಾಂಗ್ರೆಸ್ ಭಾವಿಸುತ್ತದೆ" ಎಂದು ಅವರು ಹೇಳಿದರು.

ಬಿಜೆಪಿ ಎಂದಿಗೂ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ
ಭ್ರಷ್ಟಾಚಾರವನ್ನು ಬಿಜೆಪಿ ಎಂದಿಗೂ ಸಹಿಸುವುದಿಲ್ಲ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇಡಿ ಮುಂದೆ ಸೋನಿಯಾ ಗಾಂಧಿ ತನಿಖೆಗೆ ಹಾಜರಾದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಸತ್ಯಾಗ್ರಹದ ನಾಟಕ ಮಾಡುತ್ತಿರುವ ರೀತಿಯನ್ನು ಇಡೀ ದೇಶ ಗಮನಿಸುತ್ತಿದೆ,'' ಎಂದು ಹೇಳಿದರು.
ತಪ್ಪಿತಸ್ಥರ ವಿರುದ್ಧ ತನಿಖೆ ಮಾಡುವುದು ಸರಿಯಾದ ಕ್ರಮವಾಗಿದೆ. ನೆಲದ ಕಾನೂನು ಅದರ ಬಗ್ಗೆ ಸರಿಯಾದ ತೀರ್ಮಾನ ತೆಗೆದುಕೊಳ್ಳುತ್ತದೆ. ಇದೇ ಭಾರತದ ಪ್ರಜಾಪ್ರಭುತ್ವದ ಸೌಂದರ್ಯ ಎಂದು ಅವರು ಬಣ್ಣಿಸಿದರು.

ಕಾಂಗ್ರೆಸ್ ಪ್ರತಿಭಟನೆ ವಿರುದ್ಧ ಸಂಬಿತ್ ಪಾತ್ರ ಕಿಡಿ
ಸತ್ಯಾಗ್ರಹ ನಡೆಸುತ್ತಿರುವ ಕಾಂಗ್ರೆಸ್ ವಿರುದ್ಧ ಸಂಬಿತ್ ಪಾತ್ರ ವಾಗ್ದಾಳಿ ನಡೆಸಿದ್ದಾರೆ. ಸೋನಿಯಾ ಗಾಂಧಿ ಅವರೇ ನಮಗೆ ನಿಮ್ಮ ತಪ್ಪೊಪ್ಪಿಗೆ ಬೇಕೆ ಹೊರತು, ಗದ್ದಲ ಮಾಡುವುದಲ್ಲ ಎಂದು ಹೇಳಿದ್ದಾರೆ.
ಸೋನಿಯಾ ಗಾಂಧಿ ವಿಚಾರಣೆ ಮಾಡುವುದರ ವಿರುದ್ಧ ಕಾಂಗ್ರೆಸ್ ನಾಯಕರು ಪ್ರತಿಭಟನೆ ಮಾಡುತ್ತಿದ್ದಾರೆ ಎಂದರೆ ಏನರ್ಥ. ತಪ್ಪು ಮಾಡಿದವರನ್ನು ವಿಚಾರಿಸುವುದು ಬೇಡವೇ, ಕಾನೂನು ಪ್ರಕಾರವೇ ವಿಚಾರಣೆ ನಡೆಯುತ್ತಿರುವಾಗ ಇವರು ವಿರೋಧಿಸುತ್ತಿರುವುದು ಯಾಕೆ ಎಂದು ಪ್ರಶ್ನೆ ಮಾಡಿದ್ದಾರೆ.

ಪಶ್ಚಿಮ ಬಂಗಾಳ ಶಿಕ್ಷಕರ ನೇಮಕಾತಿ ಹಗರಣದ ಪ್ರಸ್ತಾಪ
ಇದೇ ವೇಳೆ ಪಶ್ಚಿಮ ಬಂಗಾಳದಲ್ಲಿ ಭಾರಿ ಕೋಲಾಹಲ ಸೃಷ್ಟಿಸಿರುವ ಶಿಕ್ಷಕರ ನೇಮಕಾತಿ ಪ್ರಕರಣದ ಬಗ್ಗೆಯೂ ಅವರು ಪ್ರಸ್ತಾಪ ಮಾಡಿದರು. "ಪಶ್ಚಿಮ ಬಂಗಾಳದ ಸಚಿವ ಪಾರ್ಥ ಚಟರ್ಜಿ ಆಪ್ತೆ ಅರ್ಪಿತಾ ಮುಖರ್ಜಿ ಅವರಿಂದ 21 ಕೋಟಿ ರುಪಾಯಿ ವಶಪಡಿಸಿಕೊಳ್ಳಲಾಗಿದೆ. ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಸಚಿವ ಸತ್ಯೇಂದ್ರ ಜೈನ್ ಅವರಿಂದ ಕೂಡ ನಗದು ಹಣ ವಶಪಡಿಸಿಕೊಳ್ಳಲಾಗಿದೆ, ಸೋನಿಯಾ ಗಾಂಧಿ ವಿಚಾರಣೆ ಎದುರಿಸುತ್ತಿರುವ ನ್ಯಾಷನಲ್ ಹೆರಾಲ್ಡ್ ಪ್ರಕರಣ 5000 ಕೋಟಿ ರುಪಾಯಿ ವಂಚನೆಯದ್ದು" ಎಂದು ಅವರು ಆರೋಪಿಸಿದ್ದಾರೆ.
ಹಾಗಾದರೆ ಈ ಪ್ರಕರಣಗಳಲ್ಲಿ ತನಿಖೆ ನಡೆಸಬಾರದು ಎಂದು ಅವರು ಹೇಳುತ್ತಾರಾ, ಪ್ರತಿಪಕ್ಷಗಳಿಗೆ ತನಿಖೆ ನಡೆಸುವುದು ಇಷ್ಟವಿಲ್ಲ ಎಂದರೆ ಸುಮ್ಮನಾಗಬೇಕೆ? ಅವರ ಅರ್ಹತೆಯ ಪ್ರಜ್ಞೆಯಿಂದ ತನಿಖೆಯನ್ನು ನಿಲ್ಲಿಸಬೇಕೇ? ಎಂದು ಪ್ರಶ್ನಿಸಿದ್ದಾರೆ.

ಆರೋಪಗಳು ಬಂದಾಗ ಪ್ರಶ್ನಿಸುವುದು ಅನಿವಾರ್ಯ
ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ 5,000 ಕೋಟಿ ರೂಪಾಯಿಗಳ ಭ್ರಷ್ಟಾಚಾರದ ಆರೋಪ ಬಂದಾಗ, ಸಹಜವಾಗಿಯೇ ಇ.ಡಿ ಅವರನ್ನು ಪ್ರಶ್ನಿಸಿದೆ.
ಸ್ವಾತಂತ್ಯ್ರ ಹೋರಾಟದಲ್ಲಿ ಪ್ರಾಣ ತ್ಯಾಗ ಮಾಡಿದವರಿಗೆ ಸೇರಿದ ಆಸ್ತಿಯನ್ನು ಅಕ್ರಮವಾಗಿ ಕಬಳಿಸಲಾಗಿದೆ ಎಂದು ಆರೋಪವಿದೆ. ಇದಕ್ಕಾಗಿ ಅವರು ವಿಚಾರಣೆಯನ್ನು ಎದುರಿಸಬೇಕಾಗುತ್ತದೆ ಎಂದು ಸಂಬಿತ್ ಪಾತ್ರ ಹೇಳಿದರು.
-
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ












Click it and Unblock the Notifications