ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲೇ ಮೊದಲು ಕೊವಿಡ್-19 ಲಸಿಕೆ ಪಡೆದಿದ್ದು ಯಾರು?

|
Google Oneindia Kannada News

ನವದೆಹಲಿ, ಜನವರಿ.16: ದೇಶದಲ್ಲಿ ಕೊವಿಡ್-19 ಲಸಿಕೆ ನೀಡುವ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಚಾಲನೆ ನೀಡಿದರು. ಆದರೆ ದೇಶದಲ್ಲಿ ಮೊದಲು ಲಸಿಕೆ ಹಾಕಿಸಿಕೊಂಡಿದ್ದು ಯಾರು ಮತ್ತು ಎಲ್ಲಿ ಎಂಬ ಪ್ರಶ್ನೆಗೆ ಇದೀಗ ಉತ್ತರ ಸಿಕ್ಕಿದೆ.

Recommended Video

ಕೋವಿಶೀಲ್ಡ್ ಲಸಿಕೆ ಪಡೆದ ಸೇರಮ್‌ ಇನ್ಸ್‌ಟಿಟ್ಯೂಟ್‌ CEO ಅದರ್‌ Poonawala | Oneindia Kannada

ನವದೆಹಲಿಯ ಅಖಿಲ ಭಾರತ ವಿಜ್ಞಾನ ಮತ್ತು ವೈದ್ಯಕೀಯ ಸಂಸ್ಥೆ(ಏಮ್ಸ್)ಯಲ್ಲಿ ಮೊದಲ ಕೊವಿಡ್-19 ಲಸಿಕೆಯನ್ನು ನೀಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಸಮ್ಮುಖದಲ್ಲಿ ಸ್ಯಾನಿಟೈಸರಿಂಗ್ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಮನೀಶ್ ಕುಮಾರ್ ಅವರಿಗೆ ದೇಶದಲ್ಲೇ ಮೊದಲು ಲಸಿಕೆ ನೀಡಲಾಯಿತು.

ಕೊವಿಡ್-19 ಲಸಿಕೆ ಬೇಕೇ; ಈ ದಾಖಲೆಗಳೊಂದಿಗೆ ನಿಯಮ ಅನುಸರಿಸಿ!ಕೊವಿಡ್-19 ಲಸಿಕೆ ಬೇಕೇ; ಈ ದಾಖಲೆಗಳೊಂದಿಗೆ ನಿಯಮ ಅನುಸರಿಸಿ!

ಏಮ್ಸ್ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗೆ ತದನಂತರದಲ್ಲಿ ಲಸಿಕೆ ನೀಡುವ ಕಾರ್ಯವನ್ನು ಮಾಡಲಾಯಿತು. ಇದರ ಜೊತೆಗೆ ನವದೆಹಲಿಯ 11 ಜಿಲ್ಲೆಗಳಲ್ಲಿರುವ 81 ಕೇಂದ್ರಗಳಲ್ಲಿ ಶನಿವಾರ ಕೊವಿಡ್-19 ಲಸಿಕೆ ನೀಡುವ ಅಭಿಯಾನವನ್ನು ನಡೆಸಲಾಯಿತು.

Sanitation Worker First To Get Corona Vaccine Shot In India At Delhis AIIMS Hospital

ದೆಹಲಿಯಲ್ಲಿ ಲಸಿಕೆ ವಿತರಣೆ ಕೇಂದ್ರಗಳು ಎಲ್ಲಿವೆ?:

ಕೇಂದ್ರ ಸರ್ಕಾರದ ಅಧೀನದಲ್ಲಿರುವ ಆರು ಆಸ್ಪತ್ರೆಗಳನ್ನು ಗುರುತಿಸಲಾಗಿದೆ. ಈ ಪಟ್ಟಿಯಲ್ಲಿ ಏಮ್ಸ್ ಆಸ್ಪತ್ರೆ, ಸಫ್ದರ್ ಜಂಗ್ ಆಸ್ಪತ್ರೆ, ರಾಮಮನೋಹರ್ ಲೋಹಿಯಾ ಆಸ್ಪತ್ರೆ, ಕಲಾವತಿ ಸರನ್ ಮಕ್ಕಳ ಆಸ್ಪತ್ರೆ, ಎರಡು ಇಎಸ್ಐ ಆಸ್ಪತ್ರೆಗಳು ಸೇರಿವೆ. ಇದರ ಜೊತೆಗೆ ಲೋಕನಾಯಕ್ ಜಯಪ್ರಕಾಶ್ ಆಸ್ಪತ್ರೆ, ಜಿಟಿಬಿ ಆಸ್ಪತ್ರೆ, ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಡಿಡಿಯು ಆಸ್ಪತ್ರೆ, ಬಿಎಸ್ಎ ಆಸ್ಪತ್ರೆ, ದೆಹಲಿ ರಾಜ್ಯ ಕ್ಯಾನ್ಸರ್ ಇನ್ಸ್ ಟಿಟ್ಯೂಟ್, ಐಎಲ್ ಬಿಎಸ್ ಆಸ್ಪತ್ರೆಗಳನ್ನು ಸೇರಿಸಲಾಗಿದೆ. ನವದೆಹಲಿಯಲ್ಲಿರುವ ಮ್ಯಾಕ್ಸ್ ಆಸ್ಪತ್ರೆ, ಫೋರ್ಟಿಸ್ ಆಸ್ಪತ್ರೆ, ಅಪೋಲೋ ಆಸ್ಪತ್ರೆ, ಮತ್ತು ಸರ್ ಗಂಗಾ ರಾಮ್ ಆಸ್ಪತ್ರೆಗಳಲ್ಲೂ ಕೂಡಾ ಲಸಿಕೆ ವಿತರಣೆಗೆ ವ್ಯವಸ್ಥೆ ಕಲ್ಪಿಸಲಾಗಿದೆ.

English summary
Sanitation Worker First To Get Corona Vaccine Shot In India At Delhi's AIIMS Hospital.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X