ತಿಹಾರ್ ಜೈಲಿನಿಂದ ಹೊರಬಂದ ಎಎಪಿ ನಾಯಕ ಸಂಜಯ್ ಸಿಂಗ್
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಸಂಜಯ್ ಸಿಂಗ್ ಬುಧವಾರ ತಿಹಾರ್ ಜೈಲಿನಿಂದ ಹೊರಬಂದಿದ್ದಾರೆ.
ಜೈಲಿನಿಂದ ಹೊರಬಂದ ಬಳಿಕ ಮಾತನಾಡಿದ ಅವರು, ಇದು ಹೋರಾಟದ ಸಮಯ, ನಮ್ಮ ನಾಯಕರಾದ ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ಅವರನ್ನು ಜೈಲಿನಲ್ಲಿ ಇಡಲಾಗಿದೆ. ಮುಂದೊಂದು ದಿನ ಈ ಜೈಲಿನ ಬೀಗ ಒಡೆದು ಹೊರಬರುತ್ತಾರೆ ಎನ್ನುವ ವಿಶ್ವಾಸ ನನಗಿದೆ. ಇದು ಸಂಭ್ರಮಿಸುವ ಸಮಯವಲ್ಲ, ಹೋರಾಡುವ ಸಮಯ ಎಂದು ಹೇಳಿದರು.

ದೆಹಲಿಯ ಅಬಕಾರಿ ನೀತಿಯಲ್ಲಿ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಯಿಂದ ಬಂಧಿಸಲ್ಪಟ್ಟ ಸಂಜಯ್ ಸಿಂಗ್ 2023ರ ಅಕ್ಟೋಬರ್ ತಿಂಗಳಿನಿಂದ ಸೆರೆಮನೆ ವಾಸದಲ್ಲಿದ್ದರು.
ಸಂಜಯ್ ಸಿಂಗ್ ಬಿಡುಗಡೆಯ ಸಂದರ್ಭದಲ್ಲಿ ಎಎಪಿ ಬೆಂಬಲಿಗರ ದೊಡ್ಡ ಗುಂಪು ಜಮಾಯಿಸಿತ್ತು. ಪ್ರಕರಣದ ಸಾಕ್ಷಿಗಳನ್ನು ಹಾಳು ಮಾಡದಂತೆ ಅಥವಾ ಸಾಕ್ಷಿಗಳ ಮೇಲೆ ಪ್ರಭಾವ ಬೀರದಂತೆ ನಿರ್ದೇಶನ ನೀಡಿದ್ದ ದೆಹಲಿ ನ್ಯಾಯಾಲಯ ಅವರಿಗೆ ಜಾಮೀನು ಮಂಜೂರು ಮಾಡಿತ್ತು.
ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಪಾಸ್‌ಪೋರ್ಟ್ ಸಲ್ಲಿಸಲು, ಎನ್‌ಸಿಆರ್‌ನಿಂದ ಹೊರಗೆ ಮೊದಲು ಪ್ರಯಾಣದ ಬಗ್ಗೆ ತಿಳಿಸಲು ಮತ್ತು ಅವರ ಫೋನ್ ಲೊಕೇಶನ್ ಅನ್ನು ಯಾವಾಗಲೂ ಆನ್‌ನಲ್ಲಿ ಇರಿಸುವಂತೆ ನಿರ್ದೇಶನ ನೀಡಿದರು.
ಹೇಳಿಕೆ ನೀಡದಂತೆ ಸೂಚನೆ
ಜಾಮೀನು ನೀಡಲು ಯಾವುದೇ ಆಕ್ಷೇಪಣೆ ಇಲ್ಲ ಎಂದು ಜಾರಿ ನಿರ್ದೇಶನಾಲಯ ಹೇಳಿಕೆ ನೀಡಿದ ನಂತರ, ಉನ್ನತ ನ್ಯಾಯಾಲಯದ ಪೀಠ ಸಂಜಯ್ ಸಿಂಗ್ ಅವರಿಗೆ ಜಾಮೀನು ಮಂಜೂರು ಮಾಡಿದೆ.
ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ದೀಪಂಕರ್ ದತ್ತಾ ಮತ್ತು ಪಿ ಬಿ ವರಾಳೆ ಅವರನ್ನೊಳಗೊಂಡ ಪೀಠವು ಸಂಜಯ್ ಸಿಂಗ್ ಅವರು ತನ್ನ ರಾಜಕೀಯ ಚಟುವಟಿಕೆಗಳನ್ನು ಮುಂದುವರಿಸಬಹುದು ಆದರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಹೇಳಿಕೆಗಳನ್ನು ನೀಡುವಂತಿಲ್ಲ ಎಂದು ಸೂಚನೆ ನೀಡಿದೆ.
ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ಸೇರಿದಂತೆ ಪ್ರಮುಖ ನಾಯಕರು ನ್ಯಾಯಾಂಗ ಬಂಧನದಲ್ಲಿರುವಾಗ ಸಂಜಯ್ ಸಿಂಗ್ ಅವರು ಜಾಮೀನು ಪಡೆದುಕೊಂಡಿದ್ದಾರೆ.
ದೆಹಲಿ ಮುಖ್ಯಮಂತ್ರಿಯೂ ಆಗಿರುವ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಇಡಿ ಬಂಧಿಸಿತು ಮತ್ತು ಪ್ರಸ್ತುತ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications