Sarath Babu Passed Away: 'ಅಮೃತವರ್ಷಿಣಿ' ಶರತ್ ಬಾಬು ವಿಧಿವಶ

ಕನ್ನಡ ಸೇರಿದಂತೆ ಬಹುಭಾಷಾ ನಟ ಶರತ್ ಬಾಬು ಅವರು ಚಿಕಿತ್ಸೆ ಫಲಿಸದೇ ಇಂದು (ಸೋಮವಾರ, ಮೇ 22) ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ದಕ್ಷಿಣ ಭಾರತದ ಅನೇಕ ಭಾಷೆಗಳಲ್ಲಿ ನಟಿಸುವ ಮೂಲಕ ಜನಪ್ರಿಯತೆ ಗಳಿಸಿದ್ದ ಶರತ್ ಬಾಬು ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಖಾಸಗಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಒಂದು ತಿಂಗಳಿನಿಂದ ನೀಡುತ್ತಿದ್ದ ಚಿಕಿತ್ಸೆ ಫಲಕಾರಿಯಾಗದ ಕಾರಣ ಕೊನೆಯುಸಿರೆಳೆದಿದ್ದಾರೆ.

Sarath Babu Passed Away: Amrutha Varshini Fame Telugu Actor Dies at 71

ನಟ ಶರತ್ ಬಾಬು ನಿಧನಕ್ಕೆ ದಕ್ಷಿಣ ಭಾರತ ಚಿತ್ರರಂಗದ ಅನೇಕರು ಕಂಬನಿ ಮಿಡಿದು, ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸುತ್ತಿದ್ದಾರೆ. ಕನ್ನಡದ 'ಅಮೃತವರ್ಷಿಣಿ' ಸಿನಿಮಾದಲ್ಲಿ ನಟಿಸುವ ಮೂಲಕ ಕರ್ನಾಟಕದಲ್ಲಿ ಅಪಾರ ಜನಪ್ರಿಯತೆ ಗಳಿಸಿದ್ದರು.

ನಟ ಶರತ್ ಬಾಬು ನಿಧನಕ್ಕೆ ದಕ್ಷಿಣ ಭಾರತ ಚಿತ್ರರಂಗದ ಅನೇಕರು ಕಂಬನಿ ಮಿಡಿದು, ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸುತ್ತಿದ್ದಾರೆ. ಕನ್ನಡದ "ಅಮೃತವರ್ಷಿಣಿ' ಸಿನಿಮಾದಲ್ಲಿ ನಟಿಸುವ ಮೂಲಕ ಕರ್ನಾಟಕದಲ್ಲಿ ಅಪಾರ ಜನಪ್ರಿಯತೆ ಗಳಿಸಿದ್ದರು.

ಆಂಧ್ರಪ್ರದೇಶದ ಅಮದಾಲವಲಸದಲ್ಲಿ ಜನಿಸಿದ ಶರತ್ ಬಾಬು, 1973ರಲ್ಲಿ ಬಣ್ಣದ ಲೋಕಕ್ಕೆ ಕಾಲಿಟ್ಟರು. ಪಂಚ ಭಾಷಾ ತಾರೆ 40 ವರ್ಷಗಳ ಕಾಲ 200ಕ್ಕೂ ಹೆಚ್ಚು ಸಿನಿಮಾಗಳಲ್ಲಿ ತೆರೆ ಮೇಲೆ ನಾಯಕನಾಗಿ, ಪೋಷಕ ನಟನಾಗಿ ಮಿಂಚಿದ್ದಾರೆ. ತೆಲುಗು ಮತ್ತು ತಮಿಳು ಚಿತ್ರರಂಗದಲ್ಲಿ ಭಾರೀ ಜನಪ್ರಿಯತೆ ಗಳಿಸಿದ್ದಾರೆ.

ತಮಿಳು ಸೂಪರ್ ಸ್ಟಾರ್ ರಜನೀಕಾಂತ್ ಅವರೊಂದಿಗೂ ನಟಿಸಿರುವ ಶರತ್ ಬಾಬು, ಮುತ್ತು ಹಾಗೂ ಅರುಣಾಚಲಂ ಸಿನಿಮಾಗಳಲ್ಲಿ ತೆರೆ ಹಂಚಿಕೊಂಡಿದ್ದಾರೆ.

ಇನ್ನು ಕನ್ನಡದ ಹಲವು ಸಿನಿಮಾಗಳಲ್ಲಿ ಪೋಷಕ ನಟನಾಗಿ ಬಣ್ಣ ಹಚ್ಚಿದ್ದಾರೆ. ತುಳಸಿದಳ, ರಣಚಂಡಿ, ಶಕ್ತಿ, ಕಂಪನ, ಗಾಯ, ನಮ್ಮೆಜಮಾನ್ರು, ಅಮೃತವರ್ಷಿಣಿ, ಹೃದಯ-ಹೃದಯ, ಗಾಯ, ಬೃಂದಾವನ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇನ್ನು ಪ್ರೀತಿಗಾಗಿ ಧಾರಾವಾಹಿಯಲ್ಲಿಯೂ ನಟಿಸಿದ್ದರು.

ಕಲೆವು ವರ್ಷಗಳಿಂದ ಚಿತ್ರರಂಗದಿಂದ ದೂರ ಉಳಿದಿದ್ದ ಶರತ್ ಬಾಬು, ಇತ್ತೀಚಿಗೆ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಕೊನೆಯದಾಗಿ ಪವನ್ ಕಲ್ಯಾಣ್ ಅಭಿನಯದ ವಕೀಲ್ ಸಾಬ್ ಚಿತ್ರದಲ್ಲಿ ನಟಿಸಿದ್ದರು. 1974ರಲ್ಲಿ ರಮಾ ಪ್ರಭ ಜೊತೆ ಮದುವೆಯಾಗಿದ್ದ ಶರತ್ ಬಾಬು 1988ರಲ್ಲಿ ವಿಚ್ಛೇದನ ಪಡೆದಿದ್ದರು.

ನಂತರ 1990ರಲ್ಲಿ ಸ್ನೇಹ ನಂಬಿಯಾರ್ ಜೊತೆ 2ನೇ ವಿವಾಹವಾದರು. ಆದರೆ 2011ರಲ್ಲಿ ಅವರಿಗೂ ವಿಚ್ಛೇದನ ನೀಡಿದ್ದರು. ಆ ಬಳಿಕ ಒಂಟಿ ಜೀವನ ಸಾಗಿಸುತ್ತಿದ್ದ ಶರತ್ ಬಾಬು, ಇತ್ತೀಚೆಗೆ ಮೂರನೇ ವಿವಾಹವಾಗಿದ್ದರು ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+