ಜಮ್ಮು & ಕಾಶ್ಮೀರ ಭಾರತದ ಭಾಗವಲ್ಲ ಎಂದು ತೋರಿಸಿದ ಸೌದಿ ಅರೇಬಿಯಾ: ಭಾರತದ ಆಕ್ಷೇಪ
ನವದೆಹಲಿ, ಅಕ್ಟೋಬರ್ 30: ಸೌದಿ ಅರೇಬಿಯಾವು ಹೊಸದಾಗಿ ಚಲಾವಣೆಗೆ ತಂದಿರುವ 20 ರಿಯಾಲ್ ಬ್ಯಾಂಕ್‌ನೋಟುಗಳಲ್ಲಿ ಕೇಂದ್ರಾದಳಿತ ಪ್ರದೇಶಗಳಾದ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಅನ್ನು ಭಾರತದ ಭೂಭಾಗದಿಂದ ಹೊರಗೆ ಇರುವಂತೆ ತೋರಿಸಿರುವುದು ಭಾರತಕ್ಕೆ ಅಸಮಾಧಾನ ಉಂಟುಮಾಡಿದೆ.
ಈ ಸಂಬಂಧ ಸೌದಿ ಅರೇಬಿಯಾಕ್ಕೆ ಭಾರತ ತನ್ನ ಪ್ರತಿಭಟನೆಯನ್ನು ದಾಖಲಿಸಿದೆ. ಈ ಕೂಡಲೇ ಬ್ಯಾಂಕ್ ನೋಟನ್ನು ಹಿಂದಕ್ಕೆ ಪಡೆದುಕೊಳ್ಳಬೇಕು ಮತ್ತು ಸರಿಯಾದ ನಕ್ಷೆಯೊಂದಿಗೆ ಮರು ಬಿಡುಗಡೆ ಮಾಡುವಂತೆ ಅದು ಒತ್ತಾಯಿಸಿದೆ.
'ಭಾರತದ ಬಾಹ್ಯ ಪ್ರಾದೇಶಿಕ ಗಡಿಗಳನ್ನು ಬ್ಯಾಂಕ್ ನೋಟುಗಳಲ್ಲಿ ತಪ್ಪಾಗಿ ಚಿತ್ರಿಸಿರುವ ಸಂಗತಿಯನ್ನು ನಾವು ಗಮನಿಸಿದ್ದೇವೆ. ಈ ಸಂಬಂಧ ತುರ್ತಾಗಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೌದಿ ಅರೇಬಿಯಾಕ್ಕೆ ನವದೆಹಲಿ ಆಗ್ರಹಿಸಿದೆ' ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಹೇಳಿದ್ದಾರೆ.

ಗುರುವಾರ ಪಾಕಿಸ್ತಾನ್ ಆಕ್ರಮಿತ ಕಾಶ್ಮೀರದ (ಪಿಒಕೆ) ಕಾರ್ಯಕರ್ತರೊಬ್ಬರು, ಪಾಕಿಸ್ತಾನದ ನಕ್ಷೆಯಿಂದ ಸೌದಿ ಅರೇಬಿಯಾವು ಪಿಒಕೆ ಮತ್ತು ಗಿಲ್ಗಿಟ್-ಬಲ್ಟಿಸ್ತಾನ್‌ಗಳನ್ನು ತೆಗೆದುಹಾಕಿದೆ ಎಂದಿದ್ದರು.
'ಸೌದಿ ಅರೇಬಿಯಾದಿಂದ ಭಾರತಕ್ಕೆ ದೀಪಾವಳಿ ಉಡುಗೊರೆ. ಗಿಲ್ಗಿಟ್-ಬಲ್ಟಿಸ್ತಾನ್ ಮತ್ತು ಕಾಶ್ಮೀರವನ್ನು ಪಾಕಿಸ್ತಾನದ ನಕ್ಷೆಯಿಂದ ತೆಗೆದುಹಾಕಲಾಗಿದೆ' ಎಂದು ಹೋರಾಟಗಾರ ಅಮ್ಜದ್ ಅಯುಬ್ ಟ್ವೀಟ್ ಮಾಡಿದ್ದರು.
ನವೆಂಬರ್ 21-22ರಂದು ನಡೆಯಲಿರುವ ಜಿ-20 ಸಮ್ಮೇಳನವನ್ನು ತನ್ನ ಅಧ್ಯಕ್ಷತೆಯಲ್ಲಿ ಆಯೋಜಿಸುತ್ತಿರುವ ಸಂದರ್ಭದ ಸಲುವಾಗಿ ಸೌದಿ ಅರೇಬಿಯಾ ಹೊಸ 20 ರಿಯಾಲ್ ನೋಟುಗಳನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಇರುವ ಭೂಪಟದಲ್ಲಿ ಗಿಲ್ಗಿಟ್-ಬಲ್ಟಿಸ್ತಾನ್ ಮತ್ತು ಪಿಒಕೆಯನ್ನು ಪಾಕಿಸ್ತಾನದ ಭಾಗ ಎಂದು ತೋರಿಸಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications