2,000 ನೋಟು ಬದಲಾಯಿಸಬೇಕೆ?: ಗುರುತಿನ ಚೀಟಿ, ಅರ್ಜಿ ಭರ್ತಿ ಯಾವುದು ಬೇಡ, ಇಲ್ಲಿದೆ ಮಾಹಿತಿ
ನವದೆಹಲಿ, ಮೇ. 21: ಈಗೇನಿದ್ದರೂ ಎರಡು ಸಾವಿರ ನೋಟಿಗಳ ಬದಲಾವಣೆಯದ್ದೇ ಚಿಂತೆ. ಇದರ ಬೆನ್ನಲ್ಲೇ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ ಶಾಖೆಗಳಲ್ಲಿ 2000 ರೂಪಾಯಿ ನೋಟುಗಳ ವಿನಿಮಯದ ಕುರಿತು ಸೂಚನೆಯನ್ನು ನೀಡಿದೆ. ಎಸ್‌ಬಿಐನಲ್ಲಿ ಮೇ 23 ರಿಂದ ನೋಟು ಬದಲಾವನೆ ಪ್ರಾರಂಭವಾಗಲಿದ್ದು, 30 ಸೆಪ್ಟೆಂಬರ್ 2023 ರವರೆಗೆ ಕಾಲಾವಕಾಶವಿರಲಿದೆ.
SBI clarifies that the facility of exchange of Rs 2000 denomination bank notes upto a limit of Rs 20,000 at a time will be allowed without obtaining any requisition slip pic.twitter.com/TP6t2n9oeJ
— ANI (@ANI) May 21, 2023
ಯಾವುದೇ ಎಸ್‌ಬಿಐ ಶಾಖೆಯಲ್ಲಿ 20,000 ರೂಪಾಯಿ ಮಿತಿಯ 2000 ರೂಪಾಯಿ ನೋಟುಗಳನ್ನು ಒಮ್ಮೆಗೆ ಬದಲಾಯಿಸಲು ಸಾರ್ವಜನಿಕ ಸದಸ್ಯರು ಗುರುತಿನ ಪುರಾವೆಗಳನ್ನು ತೋರಿಸುವುದು ಅಥವಾ ರಿಕ್ವಿಸಿಷನ್ ಸ್ಲಿಪ್ ಅನ್ನು ಭರ್ತಿ ಮಾಡುವ ಅಗತ್ಯವಿಲ್ಲ ಎಂದು ಭಾರತದ ಅತಿದೊಡ್ಡ ರಾಷ್ಟ್ರೀಕೃತ ಬ್ಯಾಂಕ್ ಸೂಚನೆ ಹೊರಡಿಸಿದೆ.

ಭಾರತೀಯ ರಿಸರ್ವ್ ಬ್ಯಾಂಕ್ (RBI) ಶುಕ್ರವಾರ "ಸ್ವಚ್ಛ ನೋಟು ನೀತಿ' ಯ ಅನುಸಾರವಾಗಿ 2000 ರೂಪಾಯಿ ನೋಟುಗಳನ್ನು ಹಿಂತೆಗೆದುಕೊಳ್ಳಲಾಗುವುದು ಎಂದು ಘೋಷಿಸಿದೆ. 2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಸಾಮಾನ್ಯವಾಗಿ ವಹಿವಾಟುಗಳಿಗೆ ಬಳಸಲಾಗುತ್ತಿಲ್ಲ ಎಂದು ಅವಲೋಕನಗಳು ತೋರಿಸಿವೆ ಎಂದು ಆರ್‌ಬಿಐ ತಿಳಿಸಿದೆ. ಇತರ ಮುಖಬೆಲೆಯ ನೋಟುಗಳ ದಾಸ್ತಾನು ಸಾರ್ವಜನಿಕರ ಕರೆನ್ಸಿ ಅವಶ್ಯಕತೆಗಳನ್ನು ಪೂರೈಸಲು ಸಮರ್ಪಕವಾಗಿ ಮುಂದುವರಿಯುತ್ತದೆ ಎಂದು ಆರ್‌ಬಿಐ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
ಖಾತೆದಾರರಲ್ಲದವರು ಯಾವುದೇ ಬ್ಯಾಂಕ್ ಶಾಖೆಯಲ್ಲಿ ಒಂದೇ ಬಾರಿಗೆ 20,000 ಮಿತಿಯವರೆಗೆ 2,000 ರೂಪಾಯಿ ಗಳ ನೋಟುಗಳನ್ನು ಬದಲಾಯಿಸಬಹುದು ಎಂಬುದನ್ನು ಆರ್‌ಬಿಐ ಹೇಳಿದೆ. ಖಾತೆದಾರರು ತಮ್ಮ ಬ್ಯಾಂಕ್ ಖಾತೆಗೆ ನೋಟುಗಳನ್ನು ವಿನಿಮಯ ಮಾಡಿಕೊಳ್ಳುವ ಅಥವಾ ನೇರವಾಗಿ ಠೇವಣಿ ಮಾಡುವ ಆಯ್ಕೆಯನ್ನು ಹೊಂದಿರುತ್ತಾರೆ. ಇದಕ್ಕೆ 20,000 ರೂಪಾಯಿಗಳ ಮಿತಿ ಇರುವುದಿಲ್ಲ.
ಎಸ್‌ಬಿಐ ತನ್ನ ನೋಟಿಸ್‌ನಲ್ಲಿ, "ರೂ.2000 ಮುಖಬೆಲೆಯ ಬ್ಯಾಂಕ್ ನೋಟುಗಳನ್ನು ಎಲ್ಲಾ ಸಾರ್ವಜನಿಕರಿಗೆ ರೂ.20000 ವರೆಗೆ ಒಂದು ಸಮಯದಲ್ಲಿ ಯಾವುದೇ ರಿಕ್ವಿಸಿಷನ್ ಸ್ಲಿಪ್ ಪಡೆಯದೆಯೇ ವಿನಿಮಯ ಮಾಡಿಕೊಳ್ಳಲು ಅನುಮತಿಸಲಾಗುವುದು. ಹಣ ಬದಲಾವಣೆಯ ಸಮಯದಲ್ಲಿ ಸಾರ್ವಜನಿಕರು ಯಾವುದೇ ಗುರುತಿನ ಪುರಾವೆಗಳನ್ನು ಸಲ್ಲಿಸುವ ಅಗತ್ಯವಿಲ್ಲ' ಎಂದು ಎಸ್‌ಬಿಐ ಹೇಳಿದೆ.

ನೋಟು ಅಮಾನ್ಯೀಕರಣದ ನಂತರ 2016 ರಲ್ಲಿ 2000 ರೂಪಾಯಿಯ ನೋಟುಗಳನ್ನು ಪರಿಚಯಿಸಲಾಯಿತು. 2000 ರೂಪಾಯಿಯ ನೋಟು ತನ್ನ ಕಾನೂನುಬದ್ಧ ಟೆಂಡರ್ ಸ್ಥಿತಿಯನ್ನು ಮುಂದುವರಿಸುತ್ತದೆ ಎಂದು ಆರ್‌ಬಿಐ ಹೇಳಿದೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್












Click it and Unblock the Notifications