SBI ಗ್ರಾಹಕರ ಗಮನಕ್ಕೆ: ಮೇ 25, 26 ರಂದು 2 ದಿನ 'ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ' ಬಂದ್, ಕಾರಣವೇನು?

ಬ್ಯಾಂಕ್ ನೌಕರರ ಹಕ್ಕುಗಳ ರಕ್ಷಣೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 'ಅಖಿಲ ಭಾರತ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸ್ಟಾಫ್ ಫೆಡರೇಷನ್' ಇದೇ ಮೇ 25 ಮತ್ತು 26 ರಂದು (2026) ಎರಡು ದಿನಗಳ ಕಾಲ ದೇಶದ್ಯಾಂತ ಬೃಹತ್ ಮುಷ್ಕರಕ್ಕೆ ಕರೆ ನೀಡಿದೆ. ಇದರಿಂದಾಗಿ ಈ ಎರಡು ದಿನಗಳಲ್ಲಿ ಬ್ಯಾಂಕಿನ ಬಹುತೇಕ ಭೌತಿಕ ಸೇವೆಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ.

ಬ್ಯಾಂಕ್ ನೌಕರರ ಹಕ್ಕುಗಳನ್ನು ರಕ್ಷಿಸುವುದು, ನ್ಯಾಯಸಮ್ಮತವಾದ ಹಾಗೂ ಉತ್ತಮ ಕೆಲಸದ ವಾತಾವರಣವನ್ನು ಖಚಿತಪಡಿಸಿಕೊಳ್ಳುವುದು ಮತ್ತು ಸಿಬ್ಬಂದಿ ಹಾಗೂ ಗ್ರಾಹಕರ ಹಿತಾಸಕ್ತಿಗಳನ್ನು ಕಾಪಾಡುವ ಪ್ರಮುಖ ಉದ್ದೇಶದೊಂದಿಗೆ ಈ ಮುಷ್ಕರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಫೆಡರೇಷನ್ ಸ್ಪಷ್ಟಪಡಿಸಿದೆ.

SBI Bank Strike

ಇತ್ತೀಚಿನ ದಿನಗಳಲ್ಲಿ ಬ್ಯಾಂಕ್ ನೌಕರರ ಮೇಲಿನ ಕೆಲಸದ ಒತ್ತಡ ವಿಪರೀತವಾಗಿ ಹೆಚ್ಚಾಗುತ್ತಿದ್ದು, ಸಿಬ್ಬಂದಿ ಕೊರತೆಯಿಂದಾಗಿ ಗ್ರಾಹಕರಿಗೂ ತ್ವರಿತ ಸೇವೆ ಒದಗಿಸಲು ಸಾಧ್ಯವಾಗುತ್ತಿಲ್ಲ ಎಂಬುದು ನೌಕರರ ಪ್ರಮುಖ ಅಳಲಾಗಿದೆ. ಈ ನಿಟ್ಟಿನಲ್ಲಿ ಆಡಳಿತ ಮಂಡಳಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಈ ಪ್ರತಿಭಟನೆ ನಡೆಯಲಿದೆ.

ದೇಶದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ ಎಸ್‌ಬಿಐ, ಕೋಟ್ಯಂತರ ಗ್ರಾಹಕರನ್ನು ಹೊಂದಿದೆ. ಹೀಗಾಗಿ ಸತತ ಎರಡು ದಿನಗಳ ಕಾಲ ನಡೆಯುವ ಈ ಮುಷ್ಕರದಿಂದಾಗಿ ಶಾಖೆಗಳಲ್ಲಿನ ದೈನಂದಿನ ವಹಿವಾಟುಗಳಾದ ಹಣ ಜಮೆ, ನಗದು ಹಿಂಪಡೆಯುವಿಕೆ, ಚೆಕ್ ಕ್ಲಿಯರೆನ್ಸ್, ಡಿಡಿ ವಿತರಣೆ ಮತ್ತು ಸಾಲದ ಪ್ರಕ್ರಿಯೆಗಳ ಮೇಲೆ ತೀವ್ರ ಪರಿಣಾಮ ಬೀರುವ ಸಾಧ್ಯತೆಯಿದೆ. ಮುಷ್ಕರದ ದಿನಗಳಲ್ಲಿ ಎಟಿಎಂ (ATM) ಸೇವೆಗಳಲ್ಲೂ ನಗದು ಕೊರತೆ ಎದುರಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಆದಾಗ್ಯೂ, ಇಂಟರ್ನೆಟ್ ಬ್ಯಾಂಕಿಂಗ್, ಮೊಬೈಲ್ ಬ್ಯಾಂಕಿಂಗ್ (YONO SBI) ಮತ್ತು ಯುಪಿಐ (UPI) ನಂತಹ ಆನ್‌ಲೈನ್ ಡಿಜಿಟಲ್ ವಹಿವಾಟುಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ.

ಬ್ಯಾಂಕಿಂಗ್ ವಲಯದಲ್ಲಿನ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧವೂ ಒಕ್ಕೂಟವು ಧ್ವನಿ ಎತ್ತುತ್ತಿದೆ. ಸಿಬ್ಬಂದಿ ಕಡಿತ ಮತ್ತು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುವುದರಿಂದ ಬ್ಯಾಂಕಿನ ಭದ್ರತೆ ಮತ್ತು ಗ್ರಾಹಕರ ಮಾಹಿತಿಯ ಮೇಲೂ ಪರಿಣಾಮ ಬೀರಬಹುದು ಎಂಬುದು ನೌಕರರ ಕಳವಳವಾಗಿದೆ. ತಮ್ಮ ನ್ಯಾಯಯುತ ಬೇಡಿಕೆಗಳಿಗೆ ಆಡಳಿತ ಮಂಡಳಿ ಸೂಕ್ತವಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಮುಷ್ಕರದ ಅಸ್ತ್ರವನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ನೌಕರರ ಸಂಘಟನೆಗಳು ತಿಳಿಸಿದ್ದು, ಎಲ್ಲಾ ಸದಸ್ಯರು ಒಗ್ಗಟ್ಟಿನಿಂದ ಪಾಲ್ಗೊಳ್ಳುವಂತೆ ಕರೆ ನೀಡಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+