ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಸೆ.7ರಂದು ಸುಪ್ರೀಂ ಕೋರ್ಟ್‌ನಲ್ಲಿ ಹಿಜಾಬ್ ಕುರಿತು ವಿಚಾರಣೆ

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 05: ಹಿಜಾಬ್ ಕುರಿತು ಕರ್ನಾಟಕ ಹೈಕೋರ್ಟ್ ನೀಡಿದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೆಪ್ಟೆಂಬರ್ 7ಕ್ಕೆ ಮುಂದೂಡಿಕೆ ಮಾಡಿದೆ.ಕರ್ನಾಟಕದ ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿರ್ಬಂಧಿಸುವಂತೆ ಹೈಕೋರ್ಟ್ ಆದೇಶ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಹಲವು ಸಂಘಟನೆಗಳು ಮತ್ತು ವ್ಯಕ್ತಿಗಳು ಮೇಲ್ಮನವಿ ಅರ್ಜಿಯನ್ನು ಸಲ್ಲಿಸಿದ್ದರು. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧದ ವಿವಿಧ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಬುಧವಾರಕ್ಕೆ ಮುಂದೂಡಿದೆ.

ಹಿಜಾಬ್ ವಿಷಯದಲ್ಲಿ ಹಿಂದೆ ನಡೆದಿದ್ದೇನು?

ಹಿಜಾಬ್ ಧರಿಸುವುದು ಸಂವಿಧಾನದ 25ನೇ ವಿಧಿಯ ಅಡಿಯಲ್ಲಿ ರಕ್ಷಿಸಬಹುದಾದ ಅತ್ಯಗತ್ಯ ಧಾರ್ಮಿಕ ಆಚರಣೆಯ ಭಾಗವಲ್ಲ ಎಂಬ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಹಲವಾರು ಅರ್ಜಿಗಳು ಸಲ್ಲಿಕೆಯಾಗಿವೆ.

Breaking: ಹಿಜಾಬ್ ಪ್ರಕರಣ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್Breaking: ಹಿಜಾಬ್ ಪ್ರಕರಣ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್

ಈ ಹಿಂದೆ, ಆಗಿನ ಸಿಜೆಐ ಎನ್‌. ವಿ. ರಮಣ ನೇತೃತ್ವದ ಪೀಠದ ಮುಂದೆ ಹಲವಾರು ಸಂದರ್ಭಗಳಲ್ಲಿ ತುರ್ತು ವಿಚಾರಣೆಗಾಗಿ ಅರ್ಜಿಗಳನ್ನು ಉಲ್ಲೇಖಿಸಲಾಗಿತ್ತು. ಆದರೆ ಪ್ರಕರಣವನ್ನು ವಿಚಾರಣೆಗೆ ಪಟ್ಟಿ ಮಾಡಿರಲಿಲ್ಲ. ಉನ್ನತ ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿರುವ ಮೇಲ್ಮನವಿಗಳಲ್ಲಿ ಒಂದು "ಸರ್ಕಾರಿ ಅಧಿಕಾರಿಗಳ ಮಲತಾಯಿ ವರ್ತನೆಯು ವಿದ್ಯಾರ್ಥಿಗಳ ನಂಬಿಕೆಯ ಮೇಲೆ ಕೆಟ್ಟ ಪರಿಣಾ ಬೀರುತ್ತದೆ ಮತ್ತು ಅನಗತ್ಯ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಗೆ ಕಾರಣವಾಗುತ್ತದೆ" ಎಂದು ಆರೋಪಿಸಿದೆ.

SC adjourns to Sep 7 hear pleas on Karnataka HCs order upholding Hijab ban in institutions

"ಭಾರತದ ಸಂವಿಧಾನದ 25ನೇ ವಿಧಿಯ ಅಡಿಯಲ್ಲಿ ಪ್ರತಿಪಾದಿಸಲಾದ ಅಗತ್ಯ ಧಾರ್ಮಿಕ ಆಚರಣೆಗಳ ಮೂಲಭೂತ ಅಂಶವನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗಿಲ್ಲ" ಎಂದು ಮನವಿಯಲ್ಲಿ ಆರೋಪಿಸಲಾಗಿದೆ. "ಹಿಜಾಬ್ ಅಥವಾ ಶಿರಸ್ತ್ರಾಣವನ್ನು ಧರಿಸುವುದು ಇಸ್ಲಾಂ ಧರ್ಮದ ಆಚರಣೆಗೆ ಅಗತ್ಯವಾದ ಅಭ್ಯಾಸವಾಗಿದೆ" ಎಂದು ಅದರಲ್ಲಿ ಸೇರಿಸಲಾಗಿದೆ.

English summary
Supreme Court adjourns to September 7 hear pleas on Karnataka High Court's order upholding Hijab ban in educational institutions.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X