Get Updates
Get notified of breaking news, exclusive insights, and must-see stories!

ಮಾರ್ಚ್ 05ಕ್ಕೆ ಸುಪ್ರೀಂಕೋರ್ಟಿನಲ್ಲಿ ಅಯೋಧ್ಯಾ ಭೂ ವಿವಾದ ವಿಚಾರಣೆ

ನವದೆಹಲಿ, ಫೆಬ್ರವರಿ 26: ಅಯೋಧ್ಯಾ ರಾಮ ಜನ್ಮ ಭೂಮಿ ಆಸ್ತಿ ಹಕ್ಕು ಪ್ರಕರಣದ ವಿಚಾರಣೆಯನ್ನು ಮಂಗಳವಾರ(ಫೆಬ್ರವರಿ 26) ಆರಂಭಗೊಂಡಿದೆ. ಐದು ಸದಸ್ಯರ ನ್ಯಾಯಪೀಠವು ವಿಚಾರಣೆಯನ್ನು ಕೈಗೆತ್ತಿಕೊಂಡಿದೆ. ಚುನಾವಣೆ ಹತ್ತಿರುವಿರುವುದರಿಂದ ಈ ಪ್ರಕರಣದ ಅಂತಿಮ ವಿಚಾರಣೆಯ ಸ್ವರೂಪ ಹಾಗೂ ದಿನಾಂಕವನ್ನು ಮುಂದಿನ ಮಂಗಳವಾರ(ಮಾರ್ಚ್ 05)ದಂದು ನಿರ್ಧರಿಸುವುದಾಗಿ ನ್ಯಾಯಪೀಠವು ತಿಳಿಸಿದೆ.

ಇದು ಖಾಸಗಿ ಆಸ್ತಿಯ ಪರಭಾರೆ ವಿಷಯವಲ್ಲ. ಮಧ್ಯಸ್ಥಿಕೆ ಮಾತುಕತೆ ಮೂಲಕ ಪಾಲುದಾರರು ಪರಿಹಾರ ಕಂಡುಕೊಳ್ಳುವ ಶೇ1ರಷ್ಟು ಅವಕಾಶ ಸಿಕ್ಕರೂ ನೀಡಬೇಕಾಗುತ್ತದೆ ಎಂದು ಜಸ್ಟೀಸ್ ಬೊಬ್ಡೆ ಅಭಿಪ್ರಾಯಪಟ್ಟಿದ್ದಾರೆ.

ಈ ನಡುವೆ ರಾಮ್ ಲಲ್ಲಾ ಪರ ವಕೀಲ ಸಿಎಸ್ ವೈದ್ಯನಾಥನ್ ಅವರ ವಾದವನ್ನು ಐದು ಸದಸ್ಯರ ಸಾಂವಿಧಾನಿಕ ನ್ಯಾಯಪೀಠವು ದಾಖಲಿಸಿಕೊಂಡಿದ್ದು, ಮುಂದಿನ ವಿಚಾರಣೆ ಸಂದರ್ಭದಲ್ಲಿ ಪರಿಗಣಿಸುವುದಾಗಿ ಹೇಳಿದೆ.

SC begins hearing Ram-Janmabhoomi-Babri Masjid land dispute case

ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ವಿವಾದಮುಕ್ತವಾದ ಭೂಮಿಯನ್ನು ರಾಮ ಜನ್ಮಭೂಮಿ ನ್ಯಾಸ್ ಟ್ರಸ್ಟ್ ಗೆ ಹಿಂದಿರುಗಿಸುವಂತೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಮೊರೆಹೋಗಿದೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗಾಯ್ ನೇತೃತ್ವದ ಐವರು ನ್ಯಾಯಮೂರ್ತಿಗಳಿರುವ ಪಂಚ ಸದಸ್ಯ ಪೀಠದಿಂದ ವಿಚಾರಣೆ ನಡೆಯಲಿದೆ ಜನವರಿ 29ರಂದು ವಿಚಾರಣೆ ನಡೆಸಬೇಕಿತ್ತು.

ಆದರೆ ಜಸ್ಟೀಸ್ ಬೊಬ್ಡೆ ಅವರ ಅನುಪಸ್ಥಿತಿಯಿಂದ ವಿಚಾರಣೆಯನ್ನು ಮುಂದೂಡಲಾಗಿತ್ತು. ಈಗ ಜಸ್ಟೀಸ್ ಬೊಬ್ಡೆ ಅವರು ರಜೆ ಅವಧಿ ಮುಗಿಸಿಕೊಂಡು ಹಿಂತಿರುಗಿದ್ದಾರೆ. ಜಸ್ಟೀಸ್ ಬೊಬ್ಡೆ ಅವರಲ್ಲದೆ, ಜಸ್ಟೀಸ್ ಚಂದ್ರಚೂಡ್, ಜಸ್ಟೀಸ್ ಭೂಷಣ್, ಜಸ್ಟೀಸ್ ಅಬ್ದುಲ್ ನಜೀರ್ ಅವರು ನ್ಯಾಯಪೀಠದಲ್ಲಿದ್ದಾರೆ.

1992 ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಸಮಯದಲ್ಲಿ ಒಟ್ಟು 67 ಎಕರೆ ಭೂಮಿಯನ್ನು ವಶಪಡಿಸಿಕೊಳ್ಳಲಾಗಿತ್ತು. ಅದರಲ್ಲಿ ಕೇವಲ 2.7 ಎಕರೆ ಭೂಮಿಯಷ್ಟೇ ವಿವಾದಾತ್ಮಕ ಸ್ಥಳವಾಗಿದ್ದು, ಉಳಿದವು ವಿವಾದಮುಕ್ತವಾಗಿವೆ. ಆದ್ದರಿಂದ ಈ ಭೂಮಿಯ ವಾರಸುದಾರರಾದ ರಾಮ ಜನ್ಮಭೂಮಿ ನ್ಯಾಸ್ ಟ್ರಸ್ಟ್ ಗೆ ಅದನ್ನು ಹಿಂದಿರುಗಿಸಬೇಕು ಎಂದು ಕೇಂದ್ರ ಸರ್ಕಾರ ಮನವಿ ಮಾಡಿದೆ.

2.77 ಎಕರೆ ವಿಸ್ತೀರ್ಣದ ಭೂಮಿಯನ್ನು ಸದ್ಯಕ್ಕೆ ಸುನ್ನಿ ವಕ್ಫ್ ಬೋರ್ಡ್, ನಿರ್ಮೋಹಿ ಅಖಾರ ಹಾಗು ರಾಮ್ ಲಲ್ಲಾ ಸಮಾನಾಗಿ ಹೊಂದಿವೆ

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+